Varuna Election Results: ವರುಣಾ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಸಿದ್ದರಾಮಯ್ಯಗೆ ಮುನ್ನಡೆ, ಸೋಮಣ್ಣಗೆ ಭಾರೀ ಅಂತರದ ಸೋಲಿನ ಸಾಧ್ಯತೆ
Vruna Assembly Election Result 2023 Live Counting Updates: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆಯಲ್ಲಿದ್ದಾರೆ. ಬಿಜೆಪಿಯ ವಿ. ಸೋಮಣ್ಣ ಹಾಗೂ ಜೆಡಿಎಸ್ನ ಅಭಿಷೇಕ್ ಹಿನ್ನಡೆಯಲ್ಲಿದ್ದಾರೆ, ಮತ ಎಣಿಕೆಯ ವಿವರ ಇಲ್ಲಿದೆ.
Varuna Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಮೈಸೂರು ಜಿಲ್ಲೆಯಲ್ಲಿ ಹೈವೋಲ್ಟೇಜ್ ಕ್ಷೇತ್ರವಾಗಿರುವ ವರುಣಾದಲ್ಲಿ (Varuna Assembly Constituency) ಕಾಂಗ್ರೆಸ್‌ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದು ಗೆಲುವಿನತ್ತ ಮುನ್ನುಗ್ಗಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿರುವ ಸಚಿವ ವಿ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಭಾರೀ ಅಂತರದಿಂದ ಮುಂದಿದ್ದಾರೆ. ವರುಣಾದಲ್ಲಿ ಜೆಡಿಎಸ್‌ನಿಂದ ಅಭಿಷೇಕ್, ಆಮ್ ಆದ್ಮಿ ಪಾರ್ಟಿಯಿಂದ ರಾಜೇಶ್ ಜೆ ಎಸ್ ಸ್ಪರ್ಧೆಮಾಡಿದ್ದಾರೆ.
ಈ ಹಿಂದೆ ವರುಣಾದಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿ ಸೋತಿದ್ದರು. ನಂತರ ಕ್ಷೇತ್ರವನ್ನು ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಟ್ಟಿದ್ದರು. ಈಗ ಯತೀಂದ್ರ ಸಿದ್ದರಾಮಯ್ಯ ಅವರು ತಂದೆ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ತ್ಯಾಗ ಮಾಡಿದ್ದಾರೆ. ಇನ್ನು ವರುಣಾದಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟಪ್ ಫೈಟ್ ಇದ್ದು ಯಾರು ಗೆಲ್ಲುತ್ತಾರೆ ಕಾದು ನೋಡಬೇಕಿದೆ.
2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಲವಾರು ಕ್ಷೇತ್ರಗಳ ಹುಡುಕಾಟದ ನಂತರ ಸಿದ್ದರಾಮಯ್ಯನವರು ಕೋಲಾರ ಮತ್ತು ವರುಣಾ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬುದು ನಿಗದಿಯಾಗಿತ್ತು. ಆದರೆ ರಾಹುಲ್ ಗಾಂಧಿಯ ಸೂಚನೆ ಮೇರೆಗೆ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಲಹೆ ನೀಡಿದ್ದರು. ಅದರಂತೆ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.
Published On - 3:08 am, Sat, 13 May 23