ಬಜರಂಗದಳ ನಿಷೇಧ ಪ್ರಸ್ತಾವ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಲ್ಲ; ವೀರಪ್ಪ ಮೊಯ್ಲಿ

ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಲ್ಲ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಬಜರಂಗದಳ ನಿಷೇಧ ಪ್ರಸ್ತಾವ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಲ್ಲ; ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ
Follow us
Ganapathi Sharma
|

Updated on: May 04, 2023 | 5:19 PM

ಉಡುಪಿ: ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಲ್ಲ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ಹೇಳಿದ್ದಾರೆ. ಚುನಾವಣಾ ಪ್ರಣಾಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಪಿಎಫ್​ಐ ಮತ್ತು ಬಜರಂಗದಳ (Bajrang Dal) ಎರಡರ ಹೆಸರನ್ನೂ ಉಲ್ಲೇಖಿಸಿದ್ದೇವೆ. ಇದರಲ್ಲಿ ಎಲ್ಲಾ ಮೂಲಭೂತವಾದಿ ಸಂಘಟನೆಗಳು ಸೇರಿವೆ. ಕೇವಲ ಒಂದು ಸಂಘಟನೆಯನ್ನು ನಿಷೇಧಿಸಲು ಸಾಧ್ಯವಾಗದು. ಬಜರಂಗದಳವನ್ನು ಕರ್ನಾಟಕ ಸರ್ಕಾರವು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪ್ರಣಾಳಿಕೆ ವಿಚಾರ ತೀವ್ರ ವಿವಾದಕ್ಕೀಡಾದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇನ್ನಷ್ಟು ಸ್ಪಷ್ಟನೆ ನೀಡಲಿದ್ದಾರೆ. ದ್ವೇಷದ ರಾಜಕಾರಣವನ್ನು ನಿಲ್ಲಿಸಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ಕೂಡ ಹೇಳಿದೆ. ಭಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ. ನಾಯಕನಾಗಿ ನಾನು ಈ ಬಗ್ಗೆ ನಿಮಗೆ ಭರವಸೆ ನೀಡಬಲ್ಲೆ ಎಂದು ಅವರು ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ಕಾಂಗ್ರೆಸ್ ಪ್ರಣಾಳಿಕೆಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಭಜರಂಗದಳವು ದೇಶಭಕ್ತಿಯ ಸಂಘಟನೆಯಾಗಿದ್ದು, ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಕೇಂದ್ರವು ನಿಷೇಧಿಸಿರುವ ಪಿಎಫ್‌ಐ ಸಂಘಟನೆಯನ್ನು ಬೆಂಬಲಿಸಲು ಕಾಂಗ್ರೆಸ್‌ನ ಪ್ರಯತ್ನ ಇದಾಗಿದೆ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಮಂಡ್ಯದಲ್ಲಿಯೂ ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ಪ್ರಣಾಳಿಕೆ ಸುಟ್ಟುಹಾಕಿದ್ದಾರೆ.

ಇದನ್ನೂ ಓದಿ: Mandya: ಬಜರಂಗದಳ ನಿಷೇಧ ವಿಚಾರ: ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಬಜರಂಗದಳ ಕಾರ್ಯಕರ್ತರು

ಈ ಎಲ್ಲ ಬೆಳವಣಿಗೆಗಳ ನಡುವೆ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಬಜರಂಗದಳ, ಪಿಎಫ್​ಐ ಮತ್ತಿತರ ಸಂಘಟನೆಗಳು ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ ಅವುಗಳನ್ನು ನಿಷೇಧಿಸುವುದಾಗಿ ಉಲ್ಲೇಖಿಸಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ನಾಯಕರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ