ವೀರಶೈವ ಲಿಂಗಾಯತ ಸಮುದಾಯದ ‘ಕೈ’ ನಾಯಕರ ಸಭೆ: 75 ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ರೆಡಿ

ಪ್ರಾಬಲ್ಯವಿರುವ ಸಮುದಾಯ ಅಥವಾ ಜಾತಿಯ ಅಭ್ಯರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಣೆ ಹಾಕಲಾಗುತ್ತದೆ. ಇಂತಹದ್ದೇ ಲೆಕ್ಕಾಚಾರ ಈ ವಿಧಾನಸಭೆ ಚುನಾವಣೆಯಲ್ಲೂ ನಡೆದಿದ್ದು, ವೀರಶೈವ ಲಿಂಗಾಯತ ಸಮಾಜದ ‘ಕೈ’ ನಾಯಕರ ಸಭೆಯಲ್ಲಿ 68 ಅಭ್ಯರ್ಥಿಗಳ ಪಟ್ಟಿಯನ್ನು ರೆಡಿ ಮಾಡಿದೆ.

ವೀರಶೈವ ಲಿಂಗಾಯತ ಸಮುದಾಯದ ‘ಕೈ’ ನಾಯಕರ ಸಭೆ: 75 ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ರೆಡಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 15, 2023 | 6:15 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ನಾನಾ ತಂತ್ರಗಳನ್ನು ರೂಪಿಸುತ್ತಿವೆ. ಜಾತಿವಾರು, ಸಮುದಾಯಗಳ ಅನುಸಾರವಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗಳು ನಡೆದಿವೆ. ಇನ್ನು ಇದರ ಮಧ್ಯೆ ವೀರಶೈವ ಲಿಂಗಾಯತ(veerashaiva lingayat) ಸಮಾಜದ ಕಾಂಗ್ರೆಸ್​ ನಾಯಕರು ಸಭೆ ಮಾಡಿದ್ದಾರೆ. ಇಂದು (ಫೆಬ್ರವರಿ 14) ಸಮುದಾಯದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(shamanur shivashankarappa) ಅವರ ಬೆಂಗಳೂರಿನ ನಿವಾಸದಲ್ಲಿ ಎರಡನೇ ಸುತ್ತಿನ ಸಭೆ ಮಾಡಿದ ನಾಯಕರು, ನಿನ್ನೆ(ಫೆ.13) ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಚರ್ಚೆ ನಡೆಸಿದ್ದು, ಈ ವೇಳೆ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ 68 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ರೆಡಿ ಮಾಡಿದ್ದಾರೆ.

ಇದನ್ನೂ ಓದಿ: ಬೇಸರಗೊಂಡಿದ್ದ ಬಾಬುರಾವ್ ಚಿಂಚನಸೂರುಗೆ ಮಹತ್ವದ ಭರವಸೆ ನೀಡಿ ಮನವೊಲಿಸಿದ ಬಿಜೆಪಿ ನಾಯಕರು

ಹೌದು…ಟಿಕೆಟ್ ಆಕಾಂಕ್ಷಿಗಳ ಸಭೆ ಬಳಿಕ ಇಂದು ವೀರಶೈವ ಲಿಂಗಾಯತ ಸಮಾಜದ ಕಾಂಗ್ರೆಸ್ ನಾಯಕರು ಎರಡನೇ ಸುತ್ತಿನ ಸಭೆ ಮಾಡಿದರು. ಈ ಸಭೆಯಲ್ಲಿ 68 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದಾರೆ. ಈ ಶಾರ್ಟ್​ ಲಿಸ್ಟ್​ನೊಂದಿಗೆ ವೀರಶೈವ ಲಿಂಗಾಯತ ‘ಕೈ’ ನಾಯಕರು, ಸದ್ಯದಲ್ಲೇ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಿ ಈ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದ್ರೆ, 75 ಕ್ಷೇತ್ರಗಳ ಈ ಶಾರ್ಟ್​ ಲಿಸ್ಟ್ ಯಾರದ್ದೆಲ್ಲ ಹೆಸರುಗಳಿವೆ ಎನ್ನುವುದು ಕುತೂಹಲ ಮೂಡಿಸಿದೆ.

ಇನ್ನು ರಾಜಕೀಯದಲ್ಲಿ ಜಾತಿ ಲೆಕ್ಕಾಚಾರ ಮಾಮೂಲು. ಹೀಗಾಗಿಯೇ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳು ಸಾಕಷ್ಟು ಅಳೆದು-ತೂಗಿ ಜಾತಿವಾರು ಆಧಾರದ ಮೇಲೆ ಟಿಕೆಟ್‌ಗಳನ್ನು ಹಂಚಿಕೆ ಮಾಡುತ್ತವೆ. ಜಾತ್ಯತೀತ, ಸಾಮಾಜಿಕ ನ್ಯಾಯ ಎಂಬ ಮಾತು ಎಲ್ಲ ಪಕ್ಷದಲ್ಲೂ ದೊಡ್ಡ ಪ್ರಮಾಣದಲ್ಲೇ ಕೇಳಿ ಬಂದರೂ, ಪ್ರಭಾವಿ ಸಮುದಾಯವನ್ನು ಕಡೆಗಣಿಸುವ ಧೈರ್ಯವನ್ನು ಯಾವ ಪಕ್ಷವೂ ಮಾಡಿಲ್ಲ. ಪ್ರಾಬಲ್ಯವಿರುವ ಸಮುದಾಯ ಅಥವಾ ಜಾತಿಯ ಅಭ್ಯರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಣೆ ಹಾಕಲಾಗುತ್ತದೆ. ಇಂತಹದ್ದೇ ಲೆಕ್ಕಾಚಾರ ಈ ವಿಧಾನಸಭೆ ಚುನಾವಣೆಯಲ್ಲೂ ನಡೆದಿದ್ದು, ಚುನಾವಣೆ ನಡೆಯುವುದು ಜಾತಿವಾರು ಲೆಕ್ಕಾಚಾರ ಎಂಬುದರಲ್ಲಿ ಎರಡು ಮಾತಿಲ್ಲ. ಅದಕ್ಕೆ ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ವೀರಶೈವ ಲಿಂಗಾಯತ ಸಮುದಾಯ ಇದೆ. ಹೀಗಾಗಿ ಅಧಿಕ ಜನಸಂಖ್ಯೆ ಸಮುದಾಯದ ಅಭ್ಯರ್ಥಿಗಳಿಗೆ ಮಣೆ ಹಾಕುವ ಸಾಧ್ಯತೆಗಳಿವೆ.

Published On - 6:26 pm, Tue, 14 February 23

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ