AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah Collapsed: ಕಾರು ಹತ್ತುವ ವೇಳೆ ಬಾಗಿಲ ಬಳಿ ಕುಸಿದ ಸಿದ್ದರಾಮಯ್ಯ

ಕಾರು ಹತ್ತುವ ವೇಳೆ ಬಾಗಿಲ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಸಿದು ಬಿದ್ದಿರುವ ಘಟನೆ ಜಿಲ್ಲೆಯ ಕೂಡ್ಲಗಿ ಹೆಲಿಪ್ಯಾಡ್ ಬಳಿ ನಡೆದಿದೆ.

ವಿವೇಕ ಬಿರಾದಾರ
|

Updated on:Apr 29, 2023 | 1:09 PM

Share

ವಿಜಯನಗರ: ಕಾರು ಹತ್ತುವಾಗ ಬಾಗಿಲ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕುಸಿದಿರುವ ಘಟನೆ ಜಿಲ್ಲೆಯ ಕೂಡ್ಲಗಿ (Kudligi) ಹೆಲಿಪ್ಯಾಡ್ ಬಳಿ ನಡೆದಿದೆ. ಕಾಂಗ್ರೆಸ್ (Congress) ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರಕ್ಕೆಂದು ಹೆಲಿಕಾಪ್ಟರ್​ ಮೂಲಕ ಕೂಡ್ಲಗಿಗೆ ಆಗಮಿಸಿದ್ದರು. ಹೆಲಿಕ್ಯಾಪ್ಟರನಿಂದ ಇಳಿದ ಕೂಡಲೇ ಮೊಬೈಲ್​ನಲ್ಲಿ ಬ್ಯೂಸಿ ಆದ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ಕಾರಿನ ಬಳಿ ಆಗಮಿಸಿದ್ದಾರೆ. ಇನ್ನೇನು ಕಾರಿನೊಳಗೆ ಕೂಡಬೇಕೆನ್ನುವಷ್ಟರಲ್ಲಿ ಬಾಗಿಲ ಬಳಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೆ ಸ್ಥಳದಲ್ಲಿದ್ದ ವೈದ್ಯ ಕೈ ಹಿಡಿದು ಎತ್ತಿದ್ದಾರೆ. ನಂತರ ಕಾರಿನ ಸೀಟಿನ ಮೇಲೆ ಕೂಡಿಸಿ ಗುಕ್ಲೋಸ್ ನೀಡಿದ್ದಾರೆ. ಗುಕ್ಲೋಸ್ ಕುಡಿದ ಬಳಿಕ ಚೇತರಿಸಿಕೊಂಡು ಮತ್ತೆ ಸಿದ್ದರಾಮಯ್ಯ ಜನರತ್ತ ಕೈ ಬೀಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ವಿಪಕ್ಷನಾಯಕ ಸಿದ್ದರಾಮಯ್ಯ ರಾಜ್ಯಾದ್ಯಂತ ಸುತ್ತುತ್ತಿದ್ದಾರೆ. ಬಿಡುವಿಲ್ಲ ಪ್ರಯಾಣ ಮಾಡುತ್ತಿದ್ದು, ಕಾಂಗ್ರೆಸ್​ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆ ಇಂದು (ಏ.29) ಕೂಡ್ಲಗಿ ಅಭ್ಯರ್ಥಿ ಪರ ಪ್ರಚಾರಕ್ಕೆಂದು ಆಗಮಿಸಿದ್ದ ವೇಳೆ ಘಟನೆ ಸಂಭವಿಸಿದೆ.

ಇನ್ನು ಈ ಬಗ್ಗೆ ಟ್ವೀಟ್​​ ಮಾಡಿದ ಸಿದ್ದರಾಮಯ್ಯನವರು ” ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ ಎಂದು ಹೇಳಿದ್ದಾರೆ” ಇನ್ನು ಸಿದ್ದರಾಮಯ್ಯ ಅವರಿಗೆ ಸ್ಥಳದಲ್ಲಿ ಗುಕ್ಲೋಸ್​ ನೀಡಿದ ವೈದ್ಯ ಡಾ. ಎನ್ ಟಿ ಶ್ರೀನಿವಾಸ್. ಇವರು ಕೂಡ್ಲಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ.

ರಾಜ್ಯದಲ್ಲಿ ಬೇಸಿಗೆಯಿಂದ ಉಷ್ಣಾಂಶ ಹೆಚ್ಚಾಗಿರುವುದರಿಂದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊರಾಂಗಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆವರೆಗೆ ಜನರನ್ನು ಸೇರಿಸಿ ಸಭೆ, ಸಮಾರಂಭ ನಡೆಸಬಾರದು, ಒಂದು ವೇಳೆ ಜನರನ್ನು ಸೇರಿಸಿದರೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್‌ ಸುತ್ತೋಲೆ ಹೊರಡಿಸಿದ್ದು, ಬೇಸಿಗೆ ಹೆಚ್ಚುತ್ತಿರುವುದರಿಂದ ಉಷ್ಣಾಂಶ ಹೆಚ್ಚಾಗಿ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಇದನ್ನು ನಿಭಾಯಿಸಲು ಬಿಸಿಲಿನ ಪ್ರಖರತೆ ಹೆಚ್ಚಿರುವಂತಹ ಬೆಳಗ್ಗೆ 11 ರಿಂದ ಸಂಜೆ 4 ಗಂಟೆ ಅವಧಿಯಲ್ಲಿ ಹೊರಾಂಗಣ ಪ್ರದೇಶಗಳಲ್ಲಿ ಸಭೆ, ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದು ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Sat, 29 April 23

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ