Karnataka Assembly Election: ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಹೈಕಮಾಂಡ್​ಗೆ ಎಟಿಎಂ ಆಗಲಿದೆ: ವಿಜಯೇಂದ್ರ ವಾಗ್ದಾಳಿ

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಸ್ವಕ್ಷೇತ್ರ ವರುಣಾದಲ್ಲಿಯೇ ಕಟ್ಟಿಹಾಕಲು ಬಿಜೆಪಿ ಶತಾಯ ಗಥಾಯ ಪ್ರಯತ್ನ ಮಾಡುತ್ತಿದ್ದು, ಸೋಮಣ್ಣ ಪರ ವಿಜಯೇಂದ್ರ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ದೇಶದಲ್ಲಿ ಕಾಂಗ್ರೆಸ್​ ಪಕ್ಷ ದಿವಾಳಿಯಾಗಿದೆ ಎಂದಿದ್ದಾರೆ.

Karnataka Assembly Election: ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಹೈಕಮಾಂಡ್​ಗೆ ಎಟಿಎಂ ಆಗಲಿದೆ: ವಿಜಯೇಂದ್ರ ವಾಗ್ದಾಳಿ
ವಿಜಯೇಂದ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 22, 2023 | 12:07 PM

ಮೈಸೂರು: ವಿಧಾನಸಭೆ ಚುನಾವಣೆ(Karnataka Assembly Election)ಗೆ ಇನ್ನು ಕೆಲವು ದಿನಗಳು ಬಾಕಿ ಉಳಿದಿದ್ದು, ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ. ಅದರಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಸ್ವಕ್ಷೇತ್ರ ವರುಣಾದಲ್ಲಿಯೇ ಕಟ್ಟಿಹಾಕಲು ಬಿಜೆಪಿ ಶತಾಯ ಗಥಾಯ ಪ್ರಯತ್ನ ಮಾಡುತ್ತಿದ್ದು, ಸೋಮಣ್ಣ ಪರ ಬಿವೈ ವಿಜಯೇಂದ್ರ(B. Y. Vijayendra) ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ದೇಶದಲ್ಲಿ ಕಾಂಗ್ರೆಸ್​ ಪಕ್ಷ ದಿವಾಳಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದು ಹೈಕಮಾಂಡ್​ಗೆ ಎಟಿಎಂ ಆಗಲು ಪಿತೂರಿ ನಡೆಸಿದೆ. ಇದಕ್ಕೆ ರಾಜ್ಯದ ಜನ ಅವಕಾಶ ನೀಡುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಕನಸು ಭವಿಷ್ಯದಲ್ಲಿ ಹೈ ಟ್ರಿಲಿಯನ್ ಎಕಾನಮಿ ತರುವುದು

ಮೈಸೂರಿನಲ್ಲಿ ಬಿ ವೈ ವಿಜಯೇಂದ್ರ ಮಾಧ್ಯಮಗೋಷ್ಠಿ ನಡೆಸಿ ‘ಜೆಡಿಎಸ್ ಪಕ್ಷ ಅತಂತ್ರ ಪರಿಸ್ಥಿತಿ ಕನಸು ಕಾಣುತ್ತಿದ್ದಾರೆ. ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತಾರೆ. ಎಲ್ಲಾ ಕ್ಷೇತ್ರದವರಿಗೆ ಬಿಜೆಪಿ ಅವಕಾಶ ಕೊಟ್ಟಿದೆ. ಈ ಮೂಲಕ ಮೋದಿ ಕನಸು ‘ಭವಿಷ್ಯದಲ್ಲಿ ಹೈ ಟ್ರಿಲಿಯನ್ ಎಕಾನಮಿ ತರುವುದು. ಅದಕ್ಕೆ ರಾಜ್ಯದ ಕೊಡುಗೆ ಬಹಳ ಮುಖ್ಯವಾಗಿದ್ದು, ಜಿಎಸ್‌ಟಿಯಲ್ಲಿ ನಮ್ಮ ರಾಜ್ಯ ನಂಬರ್ 2ನೇ ಸ್ಥಾನದಲ್ಲಿದೆ ಎಂದರು.

ಇದನ್ನೂ ಓದಿ:ರಾಜಕೀಯ ತಿರುವು ಪಡೆದುಕೊಂಡ ಬಿಜೆಪಿ ಯುವ ಮೋರ್ಚಾ ಮುಖಂಡ ಹತ್ಯೆ ಕೇಸ್; ಇದು ರಾಜಕೀಯ ಕೊಲೆ ಎಂದ ಪ್ರಲ್ಹಾದ್ ಜೋಶಿ

ಬಿಜೆಪಿ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಹೊಸ ಪ್ರಯೋಗ

ಇದು ಕರ್ನಾಟಕ ಮಾತ್ರವಲ್ಲ, ಯುಪಿ ಗುಜರಾತ್ ಸೇರಿ ಎಲ್ಲಾ ಕಡೆ ಆಗಿದೆ. ರಾಜ್ಯದ ಭವಿಷ್ಯದ ದೃಷ್ಟಿಯಿಂದ ರಾಜ್ಯದಲ್ಲೂ ಈ ಪ್ರಯೋಗ ಮಾಡಿದ್ದು, ಇದನ್ನು ರಾಜ್ಯದ ಜನರು ಸಹ ಗಮನಿಸಿದ್ದಾರೆ. ಇದು ಕಾರ್ಯಕರ್ತರೇ ಕಟ್ಟಿರುವ ಪಕ್ಷ. ರಾಜ್ಯಾದ್ಯಂತ ಕಾರ್ಯಕರ್ತರ ಅಭಿಪ್ರಾಯ ಪಡೆದು ಅದಕ್ಕೆ ಮನ್ನಣೆ ನೀಡಲಾಗಿದೆ. ಪ್ರಧಾನಿ ಮೋದಿ, ನಡ್ಡಾ, ಅಮಿತ್ ಶಾ ಸ್ಪಷ್ಟವಾದ ಭವಿಷ್ಯ ರೂಪಿಸುವ ಸಲುವಾಗಿ ಹೊಸ ಮುಖಗಳಿಗೆ ಅವಕಾಶ ನೀಡುತ್ತಿದ್ದಾರೆ.

ಯಡಿಯೂರಪ್ಪ, ಕಾಮನ್ ಮ್ಯಾನ್​ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಡಿದ ಅಭಿವೃದ್ಧಿ ಕೆಲಸ ಬಿಜೆಪಿಗೆ ಸ್ಪಷ್ಟ ಬಹುಮತ ತಂದು ಕೊಡುತ್ತದೆ. ಬಿಜೆಪಿ ಒಬ್ಬರು ಇಬ್ಬರ ಮೇಲೆ ಡಿಫೆಂಡ್ ಆಗಿರುವ ಪಕ್ಷ ಅಲ್ಲ. ಕಾರ್ಯಕರ್ತರಿಂದ ಕಾರ್ಯಕರ್ತರಿಗಾಗಿ ಇರುವ ಪಕ್ಷ. ರಿಸ್ಕ್ ತೆಗೆದುಕೊಳ್ಳುವುದರಲ್ಲಿ ಬಿಜೆಪಿ ಹೈಕಮಾಂಡ್ ನಿಸ್ಸೀಮರು. ಪಕ್ಷದ ಹಿತದೃಷ್ಟಿಯಿಂದ ರಿಸ್ಕ್ ತೆಗೆದುಕೊಳ್ಳುತ್ತಾರೆ. ಯಡಿಯೂರಪ್ಪ ಅವರು ಒಂದು‌ ಶಕ್ತಿ ಇದ್ದಂತೆ. ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ:ಸಿದ್ದರಾಮಯ್ಯ ಮೊಮ್ಮಗ ರಾಜಕೀಯಕ್ಕೆ ಎಂಟ್ರಿ? ತಾತನ ಸ್ಫೂರ್ತಿ..ಅಪ್ಪನ ಕನಸು..ಧವನ್ ರಾಕೇಶ್ ಹೇಳಿದ್ದೇನು?

ಸಿದ್ದರಾಮಯ್ಯ ವಿಜಯೇಂದ್ರ ಒಳ ಒಪ್ಪಂದ ಆರೋಪ ವಿಚಾರವಾಗಿ‘ ನಮಗೆ ಸಿದ್ದರಾಮಯ್ಯ ಜೊತೆ ಒಳ ಒಪ್ಪಂದ ಅವಶ್ಯಕತೆ ಇಲ್ಲ. ವರುಣ ಜನ ನನ್ನನ್ನು ರಾಜ್ಯಕ್ಕೆ ಪರಿಚಯ ಮಾಡಿಸಿದವರು. ವರುಣ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕರ್ತರ ಸಭೆ ನಡೆಸಿದ್ದೇನೆ. ಈ ಬಾರಿ ವರುಣ ಮತದಾರರು ಬದಲಾವಣೆ ಬಯಸಿದ್ದಾರೆ. ಮತ್ತೆ ವರುಣಾಗೆ ನಾನು ಪ್ರಚಾರಕ್ಕೆ ಬರುತ್ತೇನೆ ಎಂದರು.

ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ

ಶಿಕಾರಿಪುರ ಬಿಜೆಪಿ ಭದ್ರಕೋಟೆ ಫಲಿತಾಂಶ ಬಂದಾಗ ಸುಭದ್ರ ಕೋಟೆಯಾಗುತ್ತದೆ. ಶಿಕಾರಿಪುರದಲ್ಲಿ ನಿಲ್ಲುವುದು ನನ್ನ ಯಡಿಯೂರಪ್ಪ ತೀರ್ಮಾನ ಅಲ್ಲ. ಅದು ಕಾರ್ಯಕರ್ತರ ಒತ್ತಾಯವಾಗಿತ್ತು. ಯಡಿಯೂರಪ್ಪ ಏನೇ ಆಗಿದ್ದರು ಅದು ಶಿಕಾರಿಪುರದಿಂದ. ವರುಣ ಕ್ಷೇತ್ರದಲ್ಲಿ ಕೆಲಸ ಮಾಡುವುದು ನನ್ನ ಕರ್ತವ್ಯ ಮುಂದಿನ ದಿನದಲ್ಲಿ ಅದನ್ನು ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ:ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಕಾಂಗ್ರೆಸ್ ಮುಖಂಡರ ಗುಂಡಾಗಿರಿ, ಮಹಿಳೆ ಮನೆ ಮೇಲೆ ಕಲ್ಲು ತೂರಾಟ

ಇದೇ ವೇಳೆ ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟ ಕುರಿತು ‘ವೀರೇಂದ್ರ ಪಾಟೀಲ್ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಂಡಿಲ್ಲ. ಹಿರಿಯರು ಕೀಳಾಗಿ ನಾನು ಮಾತನಾಡುವುದಿಲ್ಲ. ಆದರೆ ಅವರು ವೀರಶೈವ, ಲಿಂಗಾಯತ ಎಂದು ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರಿದ್ದು ನೋವಾಗಿದೆ. ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು. ಬೇರೆ ಬೇರೆ ಜಾತಿಗಳನ್ನು ಒಡೆಯಲು ಪ್ರಯತ್ನಿಸಿದ್ದ ಕಾಂಗ್ರೆಸ್ ಪಕ್ಷವನ್ನ ಜಗದೀಶ್ ಶೆಟ್ಟರ್ ಸೇರಿದ್ದು ನಿಜಕ್ಕೂ ದುರಂತ. ಸಮಾಜ ಸಮಾಜಗಳನ್ನು ಒಡೆದು ಬೆಂಕಿ ಹಾಕುವ ಪಕ್ಷ ಕಾಂಗ್ರೆಸ್. ಅವರಿಗೆ ವೀರಶೈವ ಅಥವಾ ದಲಿತ ಸಮಾಜದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ