AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virajpet Election Results 2023: ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

Virajpet Assembly Election Result 2023 Live Counting Updates: ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿಕಾಂಗ್ರೆಸ್​ನಿಂದ ಎ.ಎಸ್. ಪೊನ್ನಣ್ಣ ಸ್ಪರ್ಧಿಸಿ ಬಿಜೆಪಿಯ ಬೋಪಯ್ಯರನ್ನು ಸೋಲಿಸಿದ್ದಾರೆ.

Virajpet Election Results 2023: ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು
ವಿರಾಜಪೇಟೆ ವಿಧಾನಸಭಾ ಕ್ಷೇತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 13, 2023 | 3:27 PM

Share

Virajpet Assembly Election Result 2023: ರಾಜ್ಯದಲ್ಲಿ ಭಾರೀ ಜಿದ್ದಾಜಿದ್ದಿಯಿಂದ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ (Karnataka Assembly Elections 2023 Result) ಇಂದು ಪ್ರಕಟವಾಗಿದೆ. ಕೊಡುಗು ಜಿಲ್ಲೆಯ ಭಾಗವಾಗಿರುವ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸತತ 5ನೇ ಬಾರಿ ಗೆಲ್ಲುವ ಪ್ರಯತ್ನವನ್ನು ಕಾಂಗ್ರೆಸ್ ವಿಫಲಗೊಳಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಎಎಸ್ ಪೊನ್ನಣ್ಣ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ಅನುಭವಿ ಅಭ್ಯರ್ಥಿ ಹಾಗೂ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸೋಲುಂಡಿದ್ದಾರೆ.

ಕೊಡಗಿನ ಜನಸಂಘದ ಮುಖಂಡನಾಗಿ, ಬಳಿಕ ಕಾಂಗ್ರೆಸ್​ಗೆ ಹೋಗಿ ಕಟ್ಟರ್ ಬಿಜೆಪಿ ವಿರೋಧಿಯಾಗಿ ಹೆಸರು ಮಾಡಿದ್ದ ಮತ್ತು ತಮ್ಮ ವಾಕ್​ಝರಿಯಿಂದ ಬಿಜೆಪಿಯವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದ ಎ.ಕೆ. ಸುಬ್ಬಯ್ಯ ಅವರ ಮಗ ಎಎಸ್ ಪೊನ್ನಣ್ಣ ಎನ್ನುವುದು ಕುತೂಹಲ ಮೂಡಿಸಿದೆ. 

ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇರುವ ಪ್ರಮುಖ ಸ್ಪರ್ಧಾಳುಗಳು

  • ಬಿಜೆಪಿ: ಕೆಜಿ ಬೋಪಯ್ಯ
  • ಕಾಂಗ್ರೆಸ್: ಎ.ಎಸ್. ಪೊನ್ನಣ್ಣ
  • ಜೆಡಿಎಸ್: ಮಂಜೂರ್ ಅಲಿ ಎಂ.ಎ.

2008ರವರೆಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಮಂಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತಿತ್ತು. 2008ರಿಂದ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಈ ಕ್ಷೇತ್ರ ಬಿಜೆಪಿಗೆ ಭದ್ರಕೋಟೆಯಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯ ಪ್ರತಾಪ್ ಸಿಂಹಗೆ ಈ ಕ್ಷೇತ್ರದಿಂದ ಒಳ್ಳೆಯ ಲೀಡ್ ಸಿಕ್ಕಿತ್ತು. ಬಿಜೆಪಿ ಇಲ್ಲಿ ಸತತ 4 ಬಾರಿ ಗೆದ್ದಿದೆ. ಕೆ.ಜಿ. ಬೋಪಯ್ಯ ಹ್ಯಾಟ್ರಿಕ್ ಭಾರಿಸಿದ್ದಾರೆ. ಕಳೆದ 6 ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ 5 ಬಾರಿ ಗೆದ್ದಿದೆ. 1990ಕ್ಕೆ ಮುನ್ನ ಇಲ್ಲಿ ಕಾಂಗ್ರೆಸ್​ನ ಹವಾ ಹೆಚ್ಚಿತ್ತು. ಬಳಿಕ ಕೇಸರಿ ಪಾಳಯ ಬಲಯುತವಾಗಿ ಬೆಳೆದಿದೆ.

ಹಿಂದಿನ ಚುನಾವಣೆಗಳಂತೆ ಈ ಬಾರಿಯೂ ವಿರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇತ್ತು. ಕಾಂಗ್ರೆಸ್ ಈ ಬಾರಿ ಅಲ್ಪಮತಗಳ ಅಂತರದಿಂದ ಬಿಜೆಪಿಯನ್ನು ಸೋಲಿಸಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 3:32 am, Sat, 13 May 23

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ