Virajpet Election 2023 Winner: ವಿರಾಜಪೇಟೆಯಲ್ಲಿ ಬಿಜೆಪಿಗೆ ಅನಿರೀಕ್ಷಿತ ಸೋಲು; ಗೆದ್ದುಬೀಗಿದ ಪೊನ್ನಣ್ಣ- ಹ್ಯಾಟ್ರಿಕ್ ಸರದಾರನಿಗೆ ಮುಖಭಂಗ

AS Ponnanna Wins: ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ವಿರುದ್ಧ ಕಾಂಗ್ರೆಸ್​ನ ಎಎಸ್ ಪೊನ್ನಣ್ಣ ಅಲ್ಪ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Virajpet Election 2023 Winner: ವಿರಾಜಪೇಟೆಯಲ್ಲಿ ಬಿಜೆಪಿಗೆ ಅನಿರೀಕ್ಷಿತ ಸೋಲು; ಗೆದ್ದುಬೀಗಿದ ಪೊನ್ನಣ್ಣ- ಹ್ಯಾಟ್ರಿಕ್ ಸರದಾರನಿಗೆ ಮುಖಭಂಗ
ಎಎಸ್ ಪೊನ್ನಣ್ಣ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2023 | 4:24 PM

Virajpet Assembly Election Results 2023: ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಗೆಲುವಿನ ನಗೆ ಕಂಡಿದೆ. ಬಿಜೆಪಿ ಅಭ್ಯರ್ಥಿ ಹಾಗು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ವಿರುದ್ಧ ಕಾಂಗ್ರೆಸ್​ನ ಎ.ಎಸ್. ಪೊನ್ನಣ್ಣ ಗೆಲುವು ಸಾಧಿಸಿದ್ದಾರೆ. ಸತತ 3 ಚುನಾವಣೆಗಳಿಂದಲೂ ಗೆಲ್ಲುತ್ತಾ ಬಂದಿದ್ದ ಬೋಪಯ್ಯಗೆ ಮುಖಭಂಗವಾಗಿದೆ. ಈ ಕ್ಷೇತ್ರದಲ್ಲಿ ನಿರೀಕ್ಷಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ನಡೆದಿದೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಚುನಾವಣೆ 2023 ಫಲಿತಾಂಶ ವಿವರ

  • ಕಾಂಗ್ರೆಸ್: .ಎಸ್. ಪೊನ್ನಣ್ಣ– 83,791 ಮತಗಳು
  • ಬಿಜೆಪಿ: ಕೆ.ಜಿ. ಬೋಪಯ್ಯ– 79,500 ಮತಗಳು
  • ಜೆಡಿಎಸ್: ಮಂಜೂರ್ ಅಲಿ– 1,121 ಮತಗಳು

ಜನಸಂಘದ ಮುಖಂಡನಾಗಿ ಬಳಿಕ ಕಾಂಗ್ರೆಸ್​ಗೆ ಹೋಗಿ ಕಟ್ಟರ್ ಆರೆಸ್ಸೆಸ್ ವಿರೋಧಿಯಾಗಿ ಗುರುತಿಸಿಕೊಂಡು, ತಮ್ಮ ಪ್ರಖರ ಹೇಳಿಕೆಗಳಿಂದ ಬಿಜೆಪಿಗರಿಗೆ ತಲೆನೋವಾಗಿದ್ದ ಎ.ಕೆ. ಸುಬ್ಬಯ್ಯ ಅವರ ಮಗ ಎಎಸ್ ಪೊನ್ನಣ್ಣ ಈಗ ವಿರಾಜಪೇಟೆಯಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಛಿದ್ರಗೊಳಿಸಿದ್ದಾರೆ. ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ನಿಲ್ಲಿಸಲಾಗಿದ್ದರೂ ಕಾಂಗ್ರೆಸ್ ಗೆಲುವಿಗೆ ಹಿನ್ನಡೆಯಾಗಲಿಲ್ಲ. ಜೆಡಿಎಸ್ ಅಭ್ಯರ್ಥಿ ಮಂಜೂರ್ ಅಲಿ ಗಳಿಸಿದ ಮತಗಳ ಸಂಖ್ಯೆ ಒಂದು ಸಾವಿರದ ಆಸುಪಾಸಿನಲ್ಲಿದೆ.

ಇದನ್ನೂ ಓದಿ: Madikeri Election 2023 Winner: ಮಡಿಕೇರಿ ಕ್ಷೇತ್ರದಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್​ಗೆ ಸೋಲುನುಣಿಸಿದ ಕಾಂಗ್ರೆಸ್​ನ ಡಾ. ಮಂಥರ್ ಗೌಡ

2008ರವರೆಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಮಂಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತಿತ್ತು. 2008ರಿಂದ ಮೈಸೂರುಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಈ ಕ್ಷೇತ್ರ ಬಿಜೆಪಿಗೆ ಭದ್ರಕೋಟೆಯಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯ ಪ್ರತಾಪ್ ಸಿಂಹಗೆ ಈ ಕ್ಷೇತ್ರದಿಂದ ಒಳ್ಳೆಯ ಲೀಡ್ ಸಿಕ್ಕಿತ್ತು. ಬಿಜೆಪಿ ಇಲ್ಲಿ ಸತತ 4 ಬಾರಿ ಗೆದ್ದಿತ್ತು. ಕೆ.ಜಿ. ಬೋಪಯ್ಯ ಹ್ಯಾಟ್ರಿಕ್ ಭಾರಿಸಿದ್ದರು. ಇದಕ್ಕೂ ಮುಂಚಿನ 6 ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ 5 ಬಾರಿ ಗೆದ್ದಿತ್ತು. 1990ಕ್ಕೆ ಮುನ್ನ ಇಲ್ಲಿ ಕಾಂಗ್ರೆಸ್​ನ ಹವಾ ಹೆಚ್ಚಿತ್ತು. ಬಳಿಕ ಕೇಸರಿ ಪಾಳಯ ಬಲಯುತವಾಗಿ ಬೆಳೆದಿತ್ತು. ಈಗ ಕೈ ಪಾಳಯ ಮತ್ತೆ ಇಲ್ಲಿ ಚಿಗುರಿದೆ.

ಇದೇ ವೇಳೆ ಕೊಡಗಿನಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದೆ. ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳು ಕೈ ಪಾಲಾಗಿವೆ. ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲನುಭವಿಸಿದ್ದಾರೆ.

ಇದನ್ನೂ ಓದಿ: BSY Reaction: ಮನೆಮನೆಗೆ ಹೋಗಿ ಕೊಟ್ಟ ಗ್ಯಾರಂಟಿ ಈಡೇರಿಸಿ: ಕಾಂಗ್ರೆಸ್​ಗೆ ಯಡಿಯೂರಪ್ಪ ಒತ್ತಾಯ

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್