AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ಅಂಗವಿಕಲರು, 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಂಗವಿಕಲರು, 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಘೋಷಿಸಿದರು.

Karnataka Assembly Election: ಅಂಗವಿಕಲರು, 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು
ಗಣಪತಿ ಶರ್ಮಾ
|

Updated on:Mar 11, 2023 | 5:34 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಅಂಗವಿಕಲರು, 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Rajiv Kumar) ಶನಿವಾರ ಘೋಷಿಸಿದರು. ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ 12.15 ಲಕ್ಷ ಮತದಾರರಿದ್ದಾರೆ. ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ, 5.55 ಲಕ್ಷ ಪಿಡಬ್ಲ್ಯುಡಿ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 5,21,73,579 ಜನ ಮತದಾರರಿದ್ದಾರೆ. 2,62,42,561 ಜನ ಪುರುಷ ಮತದಾರರು ಹಾಗೂ 2,59,26,319 ಮಹಿಳಾ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರು 12,15,763 ಜನ ಇದ್ದಾರೆ. 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. 9,17,241 ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 4,699 ತೃತೀಯ ಲಿಂಗಿ ಮತದಾರರಿದ್ದಾರೆ. 17 ವರ್ಷ ಮೇಲ್ಪಟ್ಟವರು 1,25,406 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಕರ್ನಾಟಕದಲ್ಲಿಯೂ ಶಾಂತಿಯುತ ಮತದಾನ ಆಗುವ ನಂಬಿಕೆ ಇದೆ. ಹಣ, ಇತರ ಆಮಿಷಗಳಿಗೆ ಮತದಾರರು ಒಳಗಾಗಬಾರದು. ಚುನಾವಣಾ ಅಕ್ರಮ ತಡೆಯಲು ಹದ್ದಿನ ಕಣ್ಣಿಡಲಾಗುತ್ತದೆ. ಗಡಿ ಪ್ರದೇಶಗಳು, ಕರಾವಳಿ ಭಾಗಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ಚುನಾವಣಾ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: Karnataka Assembly Election: ಇವಿಎಂ ದುರುಪಯೋಗ ಸಾಧ್ಯವಿಲ್ಲ, ಬದಲಾವಣೆಯೂ ಇಲ್ಲ; ಚುನಾವಣಾ ಆಯೋಗ

ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳು ಇರಲಿವೆ. ಒಂದು ಮತಗಟ್ಟೆಯಲ್ಲಿ 883 ಜನ ಮತ ಹಾಕಬಹುದಾಗಿದೆ. ನಗರ ಪ್ರದೇಶಗಳಲ್ಲಿ 24,063 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳು ಇರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಲಾಗುವುದು. ಮತಗಟ್ಟೆಗೆ ಬಂದು ಮತದಾನ ಮಾಡುವ ಅಂಗವಿಕಲರಿಗೆ ವ್ಹೀಲ್​ಚೇರ್ ವ್ಯವಸ್ಥೆ ಮಾಡಲಾಗುವುದು ಎಂದೂ ಅವರು ತಿಳಿಸಿದರು.

‘ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಸವಾಲು’

ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವುದು ಸೇರಿದಂತೆ ತಪ್ಪು ಮಾಹಿತಿ ಹರಡುವ ಸಾಧ್ಯತೆ ಇದೆ. ಇದು ನಮಗೆ ದೊಡ್ಡ ಸವಾಲಿನ ವಿಚಾರವಾಗಿದೆ. ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಆಯೋಗದ ಕಾರ್ಯದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ. ಪರೀಕ್ಷೆ, ಹಬ್ಬಗಳು ಇತ್ಯಾದಿ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿಯೇ ನಾವು ಚುನಾವಣೆ ದಿನಾಂಕ ನಿಗದಿಪಡಿಸುತ್ತೇವೆ. ಒಂದೇ ಹಂತದಲ್ಲಿ‌ ಚುನಾವಣೆ ಮಾಡುವ ಬಗ್ಗೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ. ಎಲ್ಲದರ ಬಗ್ಗೆಯೂ ವಿಮರ್ಶೆ ಮಾಡುತ್ತೇವೆ ಎಂದು ರಾಜೀವ್ ಕುಮಾರ್ ತಿಳಿಸಿದರು.

ಇನ್ನಷ್ಟು ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:17 pm, Sat, 11 March 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್