ಬಜರಂಗ ದಳಕ್ಕೆ ಆಂಜನೇಯಗೆ ಏನು ಸಂಬಂಧ? ಡಿಕೆ ಶಿವಕುಮಾರ್​ಗೆ ಸಿಎಂ ಬೊಮ್ಮಾಯಿ ಕೊಟ್ಟ ಉತ್ತರ ಹೀಗಿದೆ

ಬಜರಂಗದಳ ನಿಷೇಧ ಬಗ್ಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದು, ಇದು ಭಾರೀ ವಿವಾದಕ್ಕೀಡಾಗಿತ್ತು. ಈ ಕುರಿತು ಡಿಕೆ ಶಿವಕುಮಾರ್ ಆಂಜನೇಯನಿಗೂ ಬಜರಂಗದಳಕ್ಕೂ ಏನು ಸಂಬಂಧ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ‘ರಾಮನಿಗೂ ಹನುಮನಿಗೂ ಯಾವ ರೀತಿ ಸಂಬಂಧ ಇದೆಯೋ, ಅದೇ ರೀತಿಯ ಸಂಬಂಧ ಹನುಮನಿಗೂ ಬಜರಂಗದಳಕ್ಕೂ ಇದೆ ಎನ್ನುವ ಮೂಲಕ ಡಿ.ಕೆ ಶಿವಕುಮಾರ್​ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ.

ಬಜರಂಗ ದಳಕ್ಕೆ ಆಂಜನೇಯಗೆ ಏನು ಸಂಬಂಧ? ಡಿಕೆ ಶಿವಕುಮಾರ್​ಗೆ ಸಿಎಂ ಬೊಮ್ಮಾಯಿ ಕೊಟ್ಟ ಉತ್ತರ ಹೀಗಿದೆ
ಬಸವರಾಜ ಬೊಮ್ಮಾಯಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 04, 2023 | 10:58 AM

ಹುಬ್ಬಳ್ಳಿ: ಬಜರಂಗದಳ(Bajarang Dal)ನಿಷೇಧ ಬಗ್ಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದು, ಇದು ಭಾರೀ ವಿವಾದಕ್ಕೀಡಾಗಿತ್ತು. ಇದಕ್ಕೆ ಬಿಜೆಪಿ(BJP) ನಾಯಕರು ಹಾಗೂ ಹಿಂದೂಪರ ಸಂಘಟನೆಗಳು ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಕುರಿತು ಡಿಕೆ ಶಿವಕುಮಾರ್(D. K. Shivakumar) ಆಂಜನೇಯನಿಗೂ ಬಜರಂಗದಳಕ್ಕೂ ಏನು ಸಂಬಂಧ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ‘ರಾಮನಿಗೂ ಹನುಮನಿಗೂ ಯಾವ ರೀತಿ ಸಂಬಂಧ ಇದೆಯೋ, ಅದೇ ರೀತಿಯ ಸಂಬಂಧ ಹನುಮನಿಗೂ ಬಜರಂಗದಳಕ್ಕೂ ಇದೆ. ಇದನ್ನು ಕಾಂಗ್ರೆಸ್ ಪಕ್ಷ ಮೊದಲು ಅರ್ಥ ಮಾಡಿಕೊಳ್ಳಲಿ ಎನ್ನುವ ಮೂಲಕ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ವರ್ತಿಸುತ್ತಿದೆ. ಜನರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಮಾತನಾಡೋದು ಸರಿಯಲ್ಲ. ನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ. ಅವರು ಅವರ ಭರವಸೆಗಳ ಮೇಲೆ ಚುನಾವಣೆ ಎದುರಿಸುತ್ತಿದ್ದಾರೆ. ಅನಾವಶ್ಯಕವಾಗಿ ಕೆದಕಿ ಚುನಾವಣೆಯ ವಾತಾವರಣವನ್ನ ಜಾತಿ, ಧರ್ಮ, ಕೋಮು ಭಾವನೆಗಳಿಂದ ಕೆರಳಿಸೋದು ಸರಿಯಲ್ಲ. ಇದು ಕಾಂಗ್ರೆಸ್​ನ ತುಷ್ಟೀಕರಣ ರಾಜಕಾರಣ ತೋರ್ಪಡಿಸುತ್ತೆ ಎಂದರು.

ಇದನ್ನೂ ಓದಿ:ಕಾಂಗ್ರೆಸ್ ​​ಪ್ರಣಾಳಿಕೆಯಲ್ಲಿರುವ ಬಜರಂಗದಳ ಬ್ಯಾನ್ ಅಂಶವನ್ನು ಕ್ಯಾನ್ಸಲ್ ಮಾಡೋದಾದ್ರೆ ಮೊದಲು ಕ್ಷಮೆ ಕೇಳಲಿ – ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಗುಡುಗು

ಕಾಂಗ್ರೆಸ್ ಪಕ್ಷ ಇಂದು ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಕಪಿಮುಷ್ಟಿಯಲ್ಲಿದೆ. ಅದರಿಂದ ಹೊರಬರಲು ಸಾಧ್ಯವಿಲ್ಲ. ಅವರ ಒತ್ತಡಕ್ಕೆ ಮಣಿಯುತ್ತಿದ್ದಾರೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತಾಡ್ತೇವೆ. ಅಂದ್ರೆ, ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತೆ. ಪಿಎಫ್ಐ ಬ್ಯಾನ್ ಆಗಿದ್ದರೂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂದು ಅಸಮಾಧಾನ ಇದೆ. ನಮಗೆ ರಕ್ಷಣೆ ಕೊಡ್ತಿಲ್ಲ. ನಾವ್ಯಾಕೆ ನಿಮಗೆ ರಕ್ಷಣೆ ಕೊಡಬೇಕು ಎಂದು ಪಿ.ಎಫ್.ಐ ನಾಯಕರು ಪ್ರಶ್ನಿಸುತ್ತಿದ್ದಾರೆ. ಪಿ.ಎಫ್.ಐ ನ ಇನ್ನೊಂದು ರೂಪ ಎಸ್.ಡಿ.ಪಿ.ಐ, ಇದರ ಬೆಂಬಲವನ್ನು ಕಾಂಗ್ರೆಸ್ ಬಹಿರಂಗವಾಗಿ ಕೇಳಿತ್ತು. ಆದ್ರೆ, ಅವರು ಕೊಡಲ್ಲ ಅಂದಿದ್ದಾರೆ.

ಕಾಂಗ್ರೆಸ್​ನ ಕಾಲದಲ್ಲಿ ಎಸ್.ಡಿ‌.ಪಿ.ಐ, ಪಿ.ಎಫ್.ಐ ಪ್ರಬಲವಾಗಿ ಬೆಳೆದಿದ್ದವು. ಬಾಲವೇ ದೇಹವನ್ನು ಅಲುಗಾಡಿಸಿದಂತಹ ಸ್ಥಿತಿ ಇದೆ. ಎಸ್.ಡಿ.ಪಿ.ಐ‌ ಬಿಜೆಪಿಯ ಬಿ. ಟೀಂ ಅಲ್ಲ, ಬಿ ಟೀಂ ಆಗಿದ್ದರೆ ನಾವು ಪಿ.ಎಫ್.ಐ ಬ್ಯಾನ್ ಮಾಡ್ತಿದ್ದೆವಾ? ತಾವು ಮಾಡಿದ ತಪ್ಪನ್ನು ಮುಚ್ಚಲು ಈ ರೀತಿಯ ಆರೋಪ‌ ಮಾಡ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ದ ಕಿಡಿಕಾರಿದ್ದಾರೆ. ಇನ್ನು ಇದೆ ವೇಳಸೋನಿಯಾ ಗಾಂಧಿ ಹುಬ್ಬಳ್ಳಿ ಭೇಟಿ ವಿಚಾರ ‘ಸೋನಿಯಾ ಗಾಂಧಿ ಬರಲಿ, ನಾವು ಕಾಂಗ್ರೆಸ್ ನಾಯಕರ ರೀತಿ ಅಳೋಲ್ಲ. ಮೋದಿ, ಅಮಿತ್ ಶಾ ಯಾಕೆ ಬಂದರೂ ಎಂದು ಕಾಂಗ್ರೆಸ್ ನವರು ಕೇಳಿದಂತೆ ನಾವು ಕೇಳೋದಿಲ್ಲ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ