ಬಜರಂಗದಳ ನಿಷೇಧ ಪ್ರಸ್ತಾಪಿಸಿರುವ ಕಾಂಗ್ರೆಸ್​ ವಿರುದ್ಧ ವ್ಯಾಪಕ ಆಕ್ರೋಶ: ಈ ಬಗ್ಗೆ ಅಧ್ಯಕ್ಷ ಖರ್ಗೆ ಹೇಳಿದ್ದಿಷ್ಟು

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಉಲ್ಲೇಖ ಬಗ್ಗೆ, ಬಿಜೆಪಿ ಹೇಳಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದು‘ ಪ್ರತಿ ಪಕ್ಷದವರು ಸಹಜವಾಗಿ ಒಬ್ಬರ ಮೇಲೆ ಒಬ್ಬರು ಹೇಳ್ತಾರೆ, ಅದೇ ರೀತಿ ಕಾಂಗ್ರೆಸ್ ಪ್ರಣಾಳಿಕೆ ಜಾರಿಮಾಡಲು ಆಗಲ್ಲವೆಂದು ಹೇಳುತ್ತಿದ್ದಾರೆ. ಆದ್ರೆ, ಕಳೆದ ಬಾರಿ ನಾವು ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸಿದ್ದೆವೆ ಎಂದರು.

ಬಜರಂಗದಳ ನಿಷೇಧ ಪ್ರಸ್ತಾಪಿಸಿರುವ ಕಾಂಗ್ರೆಸ್​ ವಿರುದ್ಧ ವ್ಯಾಪಕ ಆಕ್ರೋಶ: ಈ ಬಗ್ಗೆ ಅಧ್ಯಕ್ಷ ಖರ್ಗೆ ಹೇಳಿದ್ದಿಷ್ಟು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
Follow us
|

Updated on: May 03, 2023 | 12:47 PM

ಕಲಬುರಗಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ (Bajrang Dal) ನಿಷೇಧ ಉಲ್ಲೇಖ, ಈ ಬಗ್ಗೆ ಬಿಜೆಪಿ ಹೇಳಿಕೆ ವಿಚಾರವಾಗಿ ಕಲಬುರಗಿ ನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಮಾತನಾಡಿದ್ದು‘ ಪ್ರತಿ ಪಕ್ಷದವರು ಸಹಜವಾಗಿ ಒಬ್ಬರ ಮೇಲೆ ಒಬ್ಬರು ಹೇಳುತ್ತಾರೆ, ಅದೇ ರೀತಿ ಕಾಂಗ್ರೆಸ್ ಪ್ರಣಾಳಿಕೆ ಜಾರಿಮಾಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಕಳೆದ ಬಾರಿ ಕೂಡ ಇದೇ ರೀತಿ ಹೇಳಿದ್ದರು. ಆದ್ರೆ, ಕಳೆದ ಬಾರಿ ನಾವು ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸಿದ್ದೆವು. ಬಜೆಟ್ ಅನುದಾನ, ಆದಾಯ ನೋಡಿಯೇ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಅವರು ಹೇಳುತ್ತಾ ಹೋಗ್ತಾರೆ, ಆದ್ರೆ, ನಾವು ಮಾಡಿ ತೋರಿಸುತ್ತಿದ್ದೇವೆ ಎಂದರು.

ಇನ್ನು ಬಜರಂಗದಳ ಬ್ಯಾನ್ ವಿಚಾರ ‘ ಅದರ ಬಗ್ಗೆ ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಪನೆ ನೀಡಿದ್ದಾರೆ. ಹೀಗಾಗಿ ಅದರ ಬಗ್ಗೆ ಚರ್ಚೆ ಮಾಡಲು ಹೋಗಲ್ಲ. ರಾತ್ರಿ ಎಲ್ಲರೂ ಮಟನ್ ತಿಂತಾರೆ, ಹಗಲೊತ್ತಿನಲ್ಲಿ ನಾನ್ ವೆಜಟರಿಯನ್​ಗೆ ಬೈಯ್ತಾರೆ. ಈ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಾರೆ. ಜನರ ಭಾವನಾತ್ಮಕ ವಿಚಾರಗಳ ಜೊತೆ ಆಟವಾಡಿದ್ರೆ ಅಭಿವೃದ್ಧಿ ಆಗಲ್ಲ. ಬಿಜೆಪಿ ಭಾವನಾತ್ಮಕ ವಿಚಾರಗಳನ್ನ ಮುಂದಿಟ್ಟು ಪ್ರಚಾರ ಮಾಡುತ್ತೆ, ಜಗಳ ಹಚ್ಚಿಯೇ ಓಟ್ ತೆಗದುಕೊಳ್ಳುವುದು ಸರಿಯಲ್ಲ ಎಂದು ಬಿಜೆಪಿಗೆ ​ಹೇಳಿದರು.

ಇದನ್ನೂ ಓದಿ:ಅವಹೇಳನಕಾರಿ ಹೇಳಿಕೆಗಳ ವಿರುದ್ಧ ಚುನಾವಣಾ ಆಯೋಗ ಕೆಂಡ; ರಾಜಕೀಯ ಮುಖಂಡರಿಗೆ ನೀಡಿತು ಖಡಕ್ ಎಚ್ಚರಿಕೆ

ಅವಕಾಶ ಕೊಟ್ಟು ನೋಡಿ ಹೇಗೆ ಪ್ರಣಾಳಿಕೆ ಜಾರಿ ಮಾಡ್ತೇವೆ

ಕಾಂಗ್ರೆಸ್​​ ಪ್ರಣಾಳಿಕೆಯಲ್ಲಿ ಜನಪರ ಘೋಷಣೆಗಳ ಕುರಿತು ‘ಪರೀಕ್ಷೆಗೆ ಮೊದಲೇ ಪರೀಕ್ಷೆ ಹೇಗೆ ಬರೆಯುತ್ತೀರಾ ಅಂದ್ರೆ ಹೇಗೆ? ಅವಕಾಶ ಕೊಟ್ಟು ನೋಡಿ ಹೇಗೆ ಪ್ರಣಾಳಿಕೆ ಜಾರಿ ಮಾಡ್ತೇವೆ ಅಂತ ಗೊತ್ತಾಗುತ್ತೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಬಿಜೆಪಿ ಏನು ಮಾಡಿಲ್ಲ. ಆದರೆ ಈಗ ಪ್ರಚಾರಕ್ಕೆ ಬರುತ್ತಿದ್ದಾರೆ. ನಾವು ಮಂಜೂರು ಮಾಡಿದ್ದ ರೈಲಿಗೆ ಬಣ್ಣ ಬಳಿದು ಹೊಸ ರೈಲು ಅಂದ್ರು,ಕೆಲವರು ಪ್ರಚಾರದಿಂದಲೇ ಎಲ್ಲ ಸಿಗುತ್ತೆ ಅಂದುಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ದ ಹರಿಹಾಯ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್