ಭವಾನಿ ರೇವಣ್ಣಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ಪುತ್ರ ಪ್ರಜ್ವಲ್ ಹೇಳಿದ್ದೇನು?

ಭವಾನಿ ರೇವಣ್ಣ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಜೆಡಿಎಸ್​ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪುತ್ರ ಪ್ರಜ್ವಲ್​ ರೇವಣ್ಣ ಮಹತ್ವದ ಅಂಶವೊಂದು ಬಿಟ್ಟುಕೊಟ್ಟಿದ್ದಾರೆ.

ಭವಾನಿ ರೇವಣ್ಣಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ಪುತ್ರ ಪ್ರಜ್ವಲ್ ಹೇಳಿದ್ದೇನು?
ಪ್ರಜ್ವಲ್​ ರೇವಣ್ಣ (ಬಲಚಿತ್ರ) ಭವಾನಿ ರೇವಣ್ಣ (ಎಡಚಿತ್ರ)
Follow us
ವಿವೇಕ ಬಿರಾದಾರ
|

Updated on: May 16, 2023 | 3:36 PM

ಚಿಕ್ಕಮಗಳೂರು: ಭವಾನಿ ರೇವಣ್ಣ (Bhavani Revanna) ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಚರ್ಚೆ ಆಗಿಲ್ಲ. ಕುಟುಂಬ, ಪಕ್ಷದ ನಿರ್ಣಯಕ್ಕೆ ಬದ್ಧವಾಗಿರುತ್ತದೆ. ಹಾಸನದಲ್ಲಿ ಪಕ್ಷ ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ. ಪಕ್ಷ, ದೊಡ್ಡವರು ಕೊಟ್ಟ ಜವಾಬ್ದಾರಿ ನಿಭಾಯಿಸುತ್ತೇವೆ. ಭವಾನಿ ಅವರಿಗೆ ಯಾವ ಜವಾಬ್ದಾರಿ ಕೊಟ್ಟರೂ ಕೆಲಸ ಮಾಡುತ್ತೇವೆ, ನಿಭಾಯಿಸುತ್ತೇವೆ. ರಾಜ್ಯ ಸುತ್ತಿ ಮಹಿಳಾ ಸಂಘಟನೆ, ಯುವ ಸಂಘಟನೆ ಮಾಡುವ ಶಕ್ತಿ ಪಕ್ಷಕ್ಕಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹೇಳಿದ್ದಾರೆ.

ಕಡೂರು ತಾಲೂಕು ಯಗಟಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸಿಗರು ಕಾಂಗ್ರೆಸ್ ಅಲೆಯಲ್ಲಿ ಗೆದ್ದಿಲ್ಲ. ಬಿಜೆಪಿ ವಿರೋಧಿ ಅಲೆಯಿಂದ ಕಾಂಗ್ರೆಸ್​​ ಗೆದ್ದಿದೆ ಅಷ್ಟೆ. ಚುನಾವಣೆಯಿಂದ ರಾಜ್ಯದಲ್ಲಿ ಅಂತಹ ಯಾವುದೇ ಬದಲಾವಣೆ ಆಗಿಲ್ಲ. ಬಿಜೆಪಿಯ ಮೀಸಲಾತಿ, ಹಿಜಾಬ್​ನಂತಹ ನಿರ್ಧಾರದಿಂದ ಗೆದ್ದಿದೆ ಅಷ್ಟೆ. ಈಗ ಏನೇ ಮಾತನಾಡಿದರು ಹತಾಶೆಯ ಮಾತು ಅಂತಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಕೋಮುವಾದಿಗಳನ್ನು ದೂರವಿಟ್ಟು ಜನ ಕಾಂಗ್ರೆಸ್​ಗೆ ಅಧಿಕಾರ ನೀಡಿದ್ದಾರೆ: ಹೆಚ್​ಡಿ ರೇವಣ್ಣ

ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ಅಭಿನಂದನೆಗಳು, ಅದರ ಹಿಂದೆ ಅವರಿಗೆ ದೊಡ್ಡ ಜಬಾವ್ದಾರಿ ಇದೆ. ಮಹಿಳೆಯರಿಗೆ 2000 ರೂ. ಹಣ, ಫ್ರೀ ಬಸ್, ಯುವಕರಿಗೆ ಸ್ಟೇ ಫಂಡ್, ವಿದ್ಯುತ್ ಫ್ರೀ ಎಲ್ಲಾ ಜಾರಿಗೆ ಬರಲಿ. ನಂಬಿಕೆ ಇಟ್ಟು ಕಾಂಗ್ರೆಸ್ಸಿಗೆ ಮತ ಹಾಕಿದ್ದಾರೆ, ಜನ ಕಾಯುತ್ತಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಂಡು ಹೇಗೆ ನಿಭಾಯಿಸುತ್ತಾರೆ ನೋಡೋಣ ಎಂದರು.

ಸರ್ಕಾರ ಬಂದು 48 ಗಂಟೆಯೂ ಕಳೆದಿಲ್ಲ, ಹರಿಪ್ರಸಾದ್ ಈಗಲೇ ಯೂಟರ್ನ್ ಹೊಡೀತಿದ್ದಾರೆ. ಉಚಿತ ವಿದ್ಯುತ್ ಎಪಿಎಲ್ ಕಾರ್ಡ್​ನವರಿಗೆ, ಟ್ಯಾಕ್ಸ್ ಕಟ್ಟೋರಿಗೆ ಇಲ್ಲ, ಬಿಪಿಎಲ್​ನವರಿಗೆ ಮಾತ್ರ ಅಂತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಬರಲಿ ಎಂದು ಹಾರೈಸೋಣ ಎಂದು ಹಾರೈಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ