ಜಗದೀಶ್ ಶೆಟ್ಟರ್​​ರನ್ನು ನೀವು ಸಿಎಂ ಮಾಡುತ್ತೀರಾ; ಕಾಂಗ್ರೆಸ್​ಗೆ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಪ್ರಶ್ನೆ

|

Updated on: Apr 17, 2023 | 5:24 PM

ಜಗದೀಶ್ ಶೆಟ್ಟರ್ ಕಾಂಗ್ರೆಸ್​​ಗೆ ಸೇರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್​​ನವರು ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆಯೇ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಪ್ರಶ್ನಿಸಿದ್ದಾರೆ.

ಜಗದೀಶ್ ಶೆಟ್ಟರ್​​ರನ್ನು ನೀವು ಸಿಎಂ ಮಾಡುತ್ತೀರಾ; ಕಾಂಗ್ರೆಸ್​ಗೆ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಪ್ರಶ್ನೆ
ಬಿಜೆಪಿ
Follow us on

ಬೆಂಗಳೂರು: ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್​​ಗೆ ಸೇರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್​​ನವರು ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆಯೇ ಎಂದು ಬಿಜೆಪಿ (BJP) ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಲಿಂಗಾಯತ ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಲಿಂಗಾಯತ ಸಮುದಾಯವನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂದು ಕೆಲಸ ಮಾಡುತ್ತಿದೆ ಎಂಬುದಾಗಿ ಹೇಳಿದ್ದಾರೆ.

1970ರ ನಂತರ ಎಷ್ಟು ಲಿಂಗಾಯತರನ್ನು ಕಾಂಗ್ರೆಸ್ ಮನೆಗೆ ಕಳುಹಿಸಿದೆ? ನಿಜಲಿಂಗಪ್ಪ ಅವರನ್ನು ಸ್ವತಃ ಮಾಜಿ ಪ್ರಧಾನಿ ಇಂದಿರಾಗಾಂಧಿ ತುಳಿಯುವ ಕೆಲಸ ಮಾಡಿದರು ಎಂದು ಆರೋಪಿಸಿದ ಅವರು, ಈ ಕಾಂಗ್ರೆಸ್​ನವರು ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆಯೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಭರವಸೆ ಸಂಪೂರ್ಣ ಪೊಳ್ಳು. 2018ರ ಛತ್ತೀಸ್​ಗಢ ಚುನಾವಣೆಯಲ್ಲಿ ಇದೇ ರೀತಿ ಪೊಳ್ಳು ಭರವಸೆ ನೀಡಿದ್ದರು. ಅಧಿಕಾರಕ್ಕೆ ಬಂದ ಹತ್ತೇ ದಿನದಲ್ಲಿ ರೈತರ ಸಾಲ ಮನ್ನಾ ಮಾಡುವ ಭರವಸೆ ಐದು ವರ್ಷ ಕಳೆದರೂ ಭರವಸೆಯಾಗಿಯೇ ಉಳಿಯಿತು. ಹಿಮಾಚಲ ಪ್ರದೇಶದಲ್ಲಿ ಪೆಟ್ರೋಲಿಯಂ ಬೆಲೆ ಇಳಿಕೆ ಮಾಡುವುದಾಗಿ ಹೇಳಿ ಯಾವುದೇ ಬೆಲೆ ಇಳಿಕೆ ಅಗಲಿಲ್ಲ. ಕರ್ನಾಟಕದ ಜನತೆ ಇಲ್ಲಿ ಕೊಟ್ಟಿರುವ ಭರವಸೆಗೆ ಮರುಳಾಗಬೇಡಿ ಎಂದು ತ್ರಿವೇದಿ ಕರೆ ನೀಡಿದರು.

ಇದನ್ನೂ ಓದಿ: ಮೂರು ಬೇಡಿಕೆ ಇಟ್ಟು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್: ಏನೇನು ಬೇಡಿಕೆ? ಇಲ್ಲಿದೆ ನೋಡಿ

ಈ ಮಧ್ಯೆ, ಬೀದರ್​​ನಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವಂತೆ ಜನರು ಬೆಂಬಲಿಸಬೇಕು. ಬಹುಮತದಿಂದ ಅಧಿಕಾರಕ್ಕೆ ಬಂದರೆ ರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ ಸುಧಾಂಶು ತ್ರಿವೇದಿ ತಿರುಗೇಟು ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ