Yadgir: ಆಪ್ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತನಿಂದ ಹಲ್ಲೆ: ಚುನಾವಣಾ ಪ್ರಚಾರ ವೇಳೆ ಗಲಾಟೆ
ಚುನಾವಣಾ ಪ್ರಚಾರದ ವೇಳೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತನಿಂದ ಹಲ್ಲೆ ಮಾಡಿರುವಂತಹ ಘಟನೆ ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುಣಸಗಿ ತಾಲೂಕಿನ ತೊಳದಿನ್ನಿ ಗ್ರಾಮದಲ್ಲಿ ನಡೆದಿದೆ.
ಯಾದಗಿರಿ: ಚುನಾವಣಾ ಪ್ರಚಾರದ ವೇಳೆ ಆಮ್ ಆದ್ಮಿ ಪಕ್ಷದ (AAP) ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತನಿಂದ ಹಲ್ಲೆ (Assault) ಮಾಡಿರುವಂತಹ ಘಟನೆ ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಯ ಹುಣಸಗಿ ತಾಲೂಕಿನ ತೊಳದಿನ್ನಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಪ್ರಚಾರ ಮಾಡಲು ಯಾಕೆ ಬಂದಿದ್ದೀಯಾ ಎಂದು ಪ್ರಶ್ನಿಸಿ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಸುರಪುರ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆರ್.ಎಂ.ನಾಯಕ ಎದರೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ. ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಜೊತೆ ಆರ್.ಎಂ.ನಾಯಕ ಪ್ರಚಾರಕ್ಕೆ ಹೋಗಿದ್ದು, ಅಭ್ಯರ್ಥಿ ಪ್ರಚಾರ ಭಾಷಣ ಮಾಡುವಾಗ ಘಟನೆ ನಡೆದಿದೆ.
ಪೊಲೀಸ್ ಠಾಣೆ ಒಳಗೆ ಎರಡು ತಂಡದವರಿಂದ ಗಲಾಟೆ
ನೆಲಮಂಗಲ: ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ತಡರಾತ್ರಿವರೆಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ನಡೆಯಿತು. ಜೆಡಿಎಸ್ ಕಾರ್ಯಕರ್ತ ಮೋಹನ್ಕಡೆಯವರಾದ ಅಭ್ಯರ್ಥಿ ಮುನೆಗೌಡ ಹಾಗೂ ಬೆಂಬಲಿಗರಿಂದ ಠಾಣೆಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಬಿಜೆಪಿ ಮುಖಂಡ ಕೊಳ್ಳಿಗಾನಹಳ್ಳಿ ವೆಂಕಟೇಶಪ್ಪ ಹಾಗೂ ಬೆಂಬಲಿಗರು ಠಾಣೆಗೆ ಆಗಮಿಸಿದ್ದಾರೆ.
ಇದನ್ನೂ ಓದಿ: ತುಮಕೂರಿನಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ಹಲವರಿಗೆ ಗಾಯ
ಮೊದಲು ನಮ್ಮ ದೂರು ತೆಗೆದುಕೊಳ್ಳಿ ಎಂದು ಗಲಾಟೆ ಮಾಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಪೊಲೀಸ್ ಠಾಣೆ ಒಳಗೆ ಎರಡು ತಂಡದವರಿಂದ ಗಲಾಟೆ ಮಾಡಲಾಗಿದೆ. ಪೊಲೀಸ್ ಠಾಣೆ ಎಂಬುದನ್ನು ಮರೆತು ಜೋರು ಧ್ವನಿಯಲ್ಲಿ ಗದ್ದಲ ಮಾಡಿದ್ದಾರೆ. ಗಲಾಟೆ ನಿಲ್ಲಿಸಲು ಇಬ್ಬರನ್ನು ಇನ್ಸ್ಪೆಕ್ಟರ್ ಇಲ್ಲ ನಾಳೆ ಬನ್ನಿ ಎಂದು ಪೊಲೀಸರು ಹೇಳಿ ಕಳುಹಿಸಿದ್ದಾರೆ.
ಪೊಲೀಸ್ ಠಾಣೆಗೆ ಬಂದವರಿಗೆ ಲಾಠಿ ಎಟು
ದಾವಣಗೆರೆ: ಎಳೆ ಮಕ್ಕಳು ಮಹಿಳೆಯರು ಸೇರಿದಂತೆ ಕೈಗೆ ಸಿಕ್ಕವರ ಮೇಲೆ ಪೊಲೀಸರು ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆ ಮುಂದೆ ನಡೆದಿದೆ. ಜಗಳೂರಿನಲ್ಲಿ ದೊಡ್ಡ ಮಾರಮ್ಮನಜಾತ್ರೆ. ನಿನ್ನೆ ರಾತ್ರಿ ಕೆಲ ಕಿಡಿಗೇಡಿಗಳಿಂದ ವಾಹನಗಳಿಗೆ ಹಾನಿ ಮಾಡದ್ದಾರೆ. ಈ ವಿಚಾರಕ್ಕೆ ಹತ್ತಕ್ಕೂ ಹೆಚ್ಚು ಯುವಕರನ್ನ ಪೊಲೀಸರು ಕರೆ ತಂದಿದ್ದು, ಅನಗತ್ಯವಾಗಿ ತಮ್ಮ ಮಕ್ಕಳನ್ನ ಕರೆತರಲಾಗಿದೆ ಎಂದು ಪೊಲೀಸ್ ಠಾಣೆಗೆ ಕೇಳಲು ಸಂಬಂಧಿಕರು ಬಂದಿದ್ದಾರೆ.
ಇದನ್ನೂ ಓದಿ: Karnataka polls: ಕಾಂಗ್ರೆಸ್ ಅಧಿಕಾರಿಕ್ಕೆ ಬಂದರೆ ಮೀಸಲಾತಿ ಮಿತಿ ಶೇ 75ಕ್ಕೆ ಹೆಚ್ಚಳ: ಸಿದ್ಧರಾಮಯ್ಯ ಭರವಸೆ
ಹೀಗೆ ಕೇಳಲು ಹೋದವರ ಮೇಲೆ ಸಹ ಪೊಲೀಸರು ಹಲ್ಲೆ ಮಾಡಿದ್ದಾರೆ. ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಗಾಯಗಳಾಗಿದ್ದು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ