ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Elections 2023) ಕಾವು ದಿನದಿಂದ ಹೆಚ್ಚಾಗುತ್ತಿದೆ. ವಾದ-ಪ್ರತಿವಾದಗಳು ಜೋರಾಗಿವೆ. ಕರ್ನಾಟಕ ವಿಧಾನಸಭಾ ಚುನಾವಣಾ ಅಂಗಳಕ್ಕೆ ನಿನ್ನೆ ವಿಷಸರ್ಪ ನುಗಿದ್ದರೆ, ಇಂದು ವಿಷಕನ್ಯೆಯ ಪ್ರವೇಶವಾಗಿದೆ. ಪ್ರಧಾನಿ ಮೋದಿ ವಿಷ ಸರ್ಪ, ನೆಕ್ಕಿದ್ರೆ ಸತ್ತು ಹೋಗುತ್ತಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಶುಕ್ರವಾರ ಪ್ರಧಾನಿ ಮೋದಿ ಅವರನ್ನು ವಿಷಸರ್ಪಕ್ಕೆ ಹೋಲಿಸುತ್ತಾರೆ. ಹಾಗಾದರೆ ಸೋನಿಯಾ ಗಾಂಧಿ ವಿಷಕನ್ಯೆನಾ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರಶ್ನಿಸಿದ್ದಾರೆ. ಸದ್ಯ ಯತ್ನಾಳ್ ಹೇಳಿಕ ಕೂಡ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರು ವಾಗ್ದಾಳಿ ಮಾಡಿದ್ದಾರೆ.
ಕೊಪ್ಪಳದ ಕಾರ್ಯಕ್ರಮ ಒಂದರಲ್ಲಿ ಮಾಡಿದ ಶಾಸಕ ಯತ್ನಾಳ್, ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇಶದ ಪ್ರಧಾನಿ ಮೋದಿ ಅವರಿಗೆ ಹೇಗೆ ಗೌರವ ನೀಡಬೇಕು ಗೊತ್ತಿಲ್ಲ. ಇಡೀ ಜಗತ್ತು ಪ್ರಧಾನಿ ಮೋದಿ ಅವರನ್ನು ಮೆಚ್ಚಿಕೊಂಡಿದೆ. ಇದರ ಮಧ್ಯೆ ಬಿಜೆಪಿ ಮತ್ತು ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಲಾಗಿದೆ. ಮೋದಿ ವಿಷಸರ್ಪವಾದರೆ, ಸೋನಿಯಾ ಗಾಂಧಿ ವಿಷಕನ್ಯೆನಾ ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ.
ಶಾಸಕ ಯತ್ನಾಳ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದು, ಯತ್ನಾಳ್ ನಿನ್ನ ನಾಲಿಗೆಯನ್ನು ಯಾರು ಏನು ಮಾಡುತ್ತಾರೋ ಗೊತ್ತಿಲ್ಲ. ನನ್ನ ತಾಯಿ ಸೋನಿಯಾ ಗಾಂಧಿರನ್ನು ವಿಷಕನ್ಯೆ ಅಂತ ಟೀಕಿಸಿದ್ದೀರಾ. ಯತ್ನಾಳ್ ಹೇಳಿಯನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಹೇಳಿಕೆ ಸಂಬಂಧ ಬಿಜೆಪಿ ನಾಯಕರು ಕ್ಷಮೆ ಕೇಳಬೇಕು ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಮೈಸೂರಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ದಾಖಲು
ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಕ್ಷಮೆಯಾಚಿಸಬೇಕು. ಯತ್ನಾಳ್ರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಬೇಕು. ಬಿಜೆಪಿ ನಾಯಕರಿಗೆ ನೆಹರು ಕುಟುಂಬವನ್ನು ಬೈಯುವುದು ಚಾಳಿ. ಈ ಹಿಂದೆ ಪ್ರಧಾನಿ ಮೋದಿ ಹೇಳಿಕೆಗಳನ್ನು ಗಮನಿಸಿದ್ದೇನೆ. ಈ ಹಿಂದೆ ಕಾಂಗ್ರೆಸ್ ನಾಯಕಿಯನ್ನು ವಿಧವೆ ಅಂತ ಟೀಕಿಸಿದ್ದರು. ಇದೇನಾ ನಿಮ್ಮ ಸಂಸ್ಕೃತಿ ಮೋದಿಯವರೇ. ಮೇ 13ರಂದು ನಮ್ಮ ಶಕ್ತಿ ಏನು ಅಂತಾ ಗೊತ್ತಾಗುತ್ತೆ ಎಂದು ಹೇಳಿದರು.
ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಈ ಕುರಿತು ಪ್ರತಿಕ್ರಿಯೆ ನೀಡಿದ್ದ, ಇದು ಯತ್ನಾಳ್ ವೈಯಕ್ತಿಕ ವಿಚಾರ. ಇಂತಹ ಹೇಳಿಕೆ ನಿಡುವುದನ್ನು ನಮ್ಮ ಪಕ್ಷ ಕೂಡ ಒಪ್ಪುವುದಿಲ್ಲ. ಖರ್ಗೆ ಸೇರಿದಂತೆ ಹಲವರು ಮೋದಿ ಬಗ್ಗೆ ಟೀಕೆ ಮಾಡಿದ್ದಾರೆ ಎಂದರು.
ಇದನ್ನೂ ಓದಿ: ಮೋದಿ ವಿಷದ ಹಾವು ಇದ್ದಂತೆ ಹೇಳಿಕೆಗೆ ಕ್ಷಮೆಯಾಚಿಸಿದ ಮಲ್ಲಿಕಾರ್ಜುನ ಖರ್ಗೆ
ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಶಾಸಕ ಬಸನಗೌಡ ಯತ್ನಾಳ್ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಬೇರೆ ಪಕ್ಷಗಳ ನಾಯಕರ ಬಗ್ಗೆ ಇಂತಹ ಹೇಳಿಕೆ ನೀಡಬಾರದು. ಇಂತಹ ಹೇಳಿಕೆ ಬಿಜೆಪಿಯ ಸಂಸ್ಕೃತಿ ಅಲ್ಲ ಎಂದು ಹೇಳಿದ್ದಾರೆ.
ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲಿನ ಭಯ ಶುರುವಾಗಿದೆ. ವರುಣದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಇಂತಹ ಬೆದರಿಕೆಗಳಿಗೆ ನಮ್ಮ ಕಾರ್ಯಕರ್ತರು ಬಗ್ಗುವುದಿಲ್ಲ. ವರುಣ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಪ್ರಚಾರ ಮಾಡುತ್ತಾರೆ ಎಂದು ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:49 pm, Fri, 28 April 23