ಪುತ್ತೂರು ಘಟನೆ: ಒಳಗಿನ ಸತ್ಯ ನಮಗೂ ಗೊತ್ತಾಗಿದೆ, ಆ ಸತ್ಯವನ್ನು ಎಲ್ಲಿ ಮುಟ್ಟಿಸಬೇಕೋ ಅಲ್ಲಿ ಮುಟ್ಟಿಸ್ತೇನೆ ಎಂದ ಯತ್ನಾಳ್

|

Updated on: May 19, 2023 | 2:29 PM

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ ವಿಚಾರವಾಗಿ ‘ಪೊಲೀಸರ ಅಮಾನವೀಯ ಕೃತ್ಯ ಸಮಾಜವೇ ತಲೆ ತಗ್ಗಿಸುವಂಥದ್ದು, ಯಾವುದೇ ಆರೋಪಿಗಳನ್ನು ಥಳಿಸುವ ಹಕ್ಕು ಪೊಲೀಸರಿಗೆ ಇಲ್ಲವೆಂದು ಬಿಜೆಪಿ ಶಾಸಕ ಬಸವರಾಜ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ.

ಪುತ್ತೂರು ಘಟನೆ: ಒಳಗಿನ ಸತ್ಯ ನಮಗೂ ಗೊತ್ತಾಗಿದೆ, ಆ ಸತ್ಯವನ್ನು ಎಲ್ಲಿ ಮುಟ್ಟಿಸಬೇಕೋ ಅಲ್ಲಿ ಮುಟ್ಟಿಸ್ತೇನೆ ಎಂದ ಯತ್ನಾಳ್
ಬಸನಗೌಡ ಪಾಟೀಲ್​ ಯತ್ನಾಳ್​
Follow us on

ದಕ್ಷಿಣ ಕನ್ನಡ: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ ವಿಚಾರವಾಗಿ ‘ಪೊಲೀಸರ ಅಮಾನವೀಯ ಕೃತ್ಯ ಸಮಾಜವೇ ತಲೆ ತಗ್ಗಿಸುವಂಥದ್ದು, ಯಾವುದೇ ಆರೋಪಿಗಳನ್ನು ಥಳಿಸುವ ಹಕ್ಕು ಪೊಲೀಸರಿಗೆ ಇಲ್ಲವೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್(Basanagouda Patil Yatnal)​ ಹೇಳಿದ್ದಾರೆ. ‘ಡಿವೈಎಸ್​ಪಿ ಕೊಠಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಥಳಿಸಲಾಗಿದೆ. ಇವರು ತಾಲಿಬಾನಿಗಳಲ್ಲ, ದೇಶದ್ರೋಹದ ಕೆಲಸ ಮಾಡಿದವರಲ್ಲ. ಇಂತಹ ಕೃತ್ಯ ಪೊಲೀಸ್ ಇಲಾಖೆಗೆ ಗೌರವ ತರುವ ಕೆಲಸವಲ್ಲವೆಂದರು. ಜಿಲ್ಲೆಯ ಪುತ್ತೂರಿ(Puttur)ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಪ್ರಜಾತಂತ್ರ ವ್ಯವಸ್ಥೆಯಲ್ಲಿ ಟೀಕೆ, ಟಿಪ್ಪಣಿ, ಹೋರಾಟ, ಸಂಘರ್ಷ ಇರುತ್ತದೆ. ಆದರೆ, ದೂರು ಬಂದಾಗ ತನಿಖೆ ಮಾಡಬೇಕು, ಹೊಡೆಯೋ ಅಧಿಕಾರ ಇಲ್ಲ. ಇವರು ಕೊಲೆ ಮಾಡಿಲ್ಲ, ದೇಶ ವಿರೋಧಿ ಕೆಲಸ ಮಾಡಿಲ್ಲ. ಈ ಬಗ್ಗೆ ತನಿಖೆ ಆಗಬೇಕು, ಕೆಳ ಹಂತದ ಸಿಬ್ಬಂದಿ ಜೊತೆ ಡಿವೈಎಸ್ಪಿ ಮೇಲೂ ಕ್ರಮ ಆಗಬೇಕು. ಮುಂದಿನ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ತುಂಬಾ ಸವಾಲಿದೆ. ಕಾಂಗ್ರೆಸ್ ಸರ್ಕಾರ ನಾಳೆ(ಮೇ.20)ಯಿಂದ ರಾಜ್ಯದಲ್ಲಿ ಬರುತ್ತಿದೆ.

ಕಾಂಗ್ರೆಸ್ ಆಡಳಿತದಲ್ಲಿ ಹಿಂದೂ ಕಾರ್ಯಕರ್ತರ ಮಾರಣಹೋಮ

ಕಾಂಗ್ರೆಸ್ ಆಡಳಿತದಲ್ಲಿ ಹಿಂದೂ ಕಾರ್ಯಕರ್ತರ ಮಾರಣಹೋಮ ಆಗಿತ್ತು, ಇದೀಗ ಮತ್ತೆ ಅದೇ ನಾಯಕತ್ವದ ಸರ್ಕಾರ ಬಂದಿದೆ. ಇದರಿಂದ ನಮ್ಮ ಕಾರ್ಯಕರ್ತರಿಗೆ ಭಯ ಮತ್ತು‌ ಅನಾಥ ಪ್ರಜ್ಞೆ ಮೂಡುತ್ತಿದೆ. ಹೌದು ತಾಲಿಬಾನ್ ಸರ್ಕಾರ ಬರುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಭಯಭೀತರಾಗಿದ್ದಾರೆ. ಹೀಗಾಗಿ ನಮ್ಮ ‌ಕಡೆಯಿಂದ ತಪ್ಪಾಗದಂತೆ ನಾವು ನೋಡಿಕೊಳ್ಳಬೇಕು. ನಾವು ಹಿಂದೂಗಳು ಯಾರಿಗೂ ತೊಂದರೆ ಕೊಡುವವರಲ್ಲ, ಯಾವುದೇ ಧರ್ಮದ ವಿರುದ್ದ ಅಲ್ಲ, ನಮ್ಮ ಹೋರಾಟ ಹಿಂದುತ್ವಕ್ಕಾಗಿ ಎನ್ನುವ ಮೂಲಕ ಕಾಂಗ್ರೆಸ್​ ಸರ್ಕಾರವನ್ನ ತಾಲಿಬಾನಿ ಆಡಳಿತಕ್ಕೆ ಹೋಲಿಸಿದ್ದಾರೆ.

ಇದನ್ನೂ ಓದಿ:ಹಲ್ಲೆ ಮಾಡಲು ಯಾರಿಗೂ ಅಧಿಕಾರವಿಲ್ಲ: ಪುತ್ತೂರಿನ ಪ್ರಕರಣ ಖಂಡಿಸಿದ ಕೋಟ ಶ್ರೀನಿವಾಸ್ ಪೂಜಾರಿ

ಹೊಡೆತಕ್ಕೆ ಒಳಗಾದ ಕಾರ್ಯಕರ್ತರಿಗೆ 1 ಲಕ್ಷ ರೂ; ಯತ್ನಾಳ್​

ಕೆಲವೊಂದು ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಬಂತೆಂದು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿದ್ರೆ,
ನಾವು ಅಂಥದ್ದನ್ನ ಸಹಿಸಲ್ಲ. ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಬೇರೆ ಅಲ್ಲ. ದೇಶದಲ್ಲಿ ಹಿಂದೂಗಳ ರಕ್ಷಣೆ ಮಾಡೋದು ಬಿಜೆಪಿ ಕೆಲಸ. ಘಟನೆ ಮತ್ತು ಇಲ್ಲಿನ ಕಾರ್ಯಕರ್ತರ ಭಾವನೆಯನ್ನು ಕೇಂದ್ರದ ನಾಯಕರಿಗೆ ಹೇಳುತ್ತೇನೆ. ಹೊಡೆತಕ್ಕೆ ಒಳಗಾದ ಕಾರ್ಯಕರ್ತರಿಗೆ ಸರ್ಕಾರದಿಂದ ಪರಿಹಾರ ಸಿಗಬೇಕು. ನಾನು ವೈದ್ಯಕೀಯ ವೆಚ್ಚಕ್ಕೆ ಒಂದು ಲಕ್ಷ ವೈಯಕ್ತಿಕವಾಗಿ ನೀಡುತ್ತೀದ್ದೆನೆ.

ಒಳಗಿನ ಸತ್ಯ ನಮಗೂ ಗೊತ್ತಾಗಿದೆ, ಸತ್ಯವನ್ನು ಎಲ್ಲಿ ಮುಟ್ಟಿಸಬೇಕೋ ಅಲ್ಲಿ ಮುಟ್ಟಿಸ್ತೇನೆ

ಈ ಕುರಿತು ನಾನು ವಿನಂತಿ ಮಾಡ್ತೇನೆ, ಇದನ್ನ ಮುಂದುವರೆಸೋದು ಬೇಡ, ನಮಗೂ ನೋವಾಗಿದೆ. ಒಳಗಿನ ಸತ್ಯ ನಮಗೂ ಗೊತ್ತಾಗಿದೆ. ಆ ಸತ್ಯವನ್ನು ಎಲ್ಲಿ ಮುಟ್ಟಿಸಬೇಕೋ ಅಲ್ಲಿ ಮುಟ್ಟಿಸ್ತೇನೆ. ನಾನು ಯಾವಾಗಲೂ ನಿಮ್ಮ ಜೊತೆಗೆ ಇರ್ತೇನೆ. ನಾನು ಬಂದ ಕ್ಷೇತ್ರವೂ‌ ಮುಸ್ಲಿಂ ಬಾಹುಳ್ಯದ ಪ್ರದೇಶ ಈ ಘಟನೆಯಲ್ಲಿ ಹಿಂದೂ ಮತ್ತು ಬಿಜೆಪಿ ಕಾರ್ಯಕರ್ತರು ಅನ್ನೋ ಭಾವನೆ ಬೇಡ. ಇದಕ್ಕೆ ಕೆಲವೇ ದಿನಗಳಲ್ಲಿ ನಿಮ್ಮ ‌ಮನಸ್ಸಿನಲ್ಲಿ ಇರೋದಕ್ಕೆ ತಕ್ಕ ನಿರ್ಣಯ ಪಕ್ಷ ತೆಗೆದುಕೊಳ್ಳಲಿದೆ. ಯಾರೂ ಭಯ ಪಡುವ ಅಗತ್ಯವಿಲ್ಲ.

ಇದನ್ನೂ ಓದಿ:ಕ್ರಿಕೆಟ್ ವಿಚಾರಕ್ಕೆ ಗಲಾಟೆ! ಆಟಕ್ಕೆ ಸೇರಿಸಿಕೊಳ್ಳದೆ ಬ್ಯಾಟ್​​ನಿಂದ ಲಾರಿ ಚಾಲಕನ ಮೇಲೆ ಹಲ್ಲೆ, ಆರೋಪಿಗಳ ಮೇಲೆ ಯಾವುದೇ ಕ್ರಮವಿಲ್ಲ

ಯಾರೂ ನೋವು ಪಡಬೇಡಿ, ಪಕ್ಷದಿಂದ ಆದ ನೋವನ್ನ ಸರಿ ಪಡಿಸುವ ಕೆಲಸ ಪಕ್ಷದ ಹೈಕಮಾಂಡ್ ಮಾಡಲಿದೆ.
ರಾಜ್ಯಾಧ್ಯಕ್ಷರ ಹತ್ರ ನಿನ್ನೆ ಮಾತನಾಡಿದೆ, ಹಂಗಾಮಿ ಸಿಎಂ ಬೊಮ್ಮಾಯಿ ಕೂಡ ಡಿಜಿಪಿ ಜೊತೆ‌ ಮಾತನಾಡಿದ್ದಾರೆ.
ಅವರು ಪ್ರಯತ್ನ ಮಾಡ್ತಾ ಇದ್ದಾರೆ, ಇದು ನಮಗೆ ನೋವು ತರುವ, ತಲೆ ತಗ್ಗಿಸೋ ವಿಷಯ, ಅವರು ನಾವು ಬೇರೆ ಬೇರೆ ಅಲ್ಲ, ಅವರೂ ಪಕ್ಷದ ಕಾರ್ಯಕರ್ತರೇ, ಕಾರಣಾಂತರಗಳಿಂದ ಮತ್ತು ಪಕ್ಷದ ಕೆಲ ನಿರ್ಣಯಗಳಿಂದ ಮನಸ್ಸಿಗೆ ನೋವಾಗಿರುತ್ತೆ. ಚುನಾವಣೆ ಟಿಕೆಟ್ ವಿಚಾರದಲ್ಲಿ ಆದ ಅಸಮಾಧಾನದಿಂದ ಹೀಗಾಗಿದೆ ಎಂದಿದ್ದಾರೆ.

ಜನ ಅದಕ್ಕೂ ಗೌರವ ಕೊಡಬೇಕು, ಅರುಣ್ ಕುಮಾರ್ ಅವರಿಗೂ ಹೆಚ್ಚು ಮತ ಬಂದಿದೆ. ಅವರ ಮೇಲೆಯೂ ಗೌರವ ಇದೆ, ಇದು ಪೂರ್ತಿ ಕೇಂದ್ರದ ಗಮನಕ್ಕೆ ಬಂದಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಪಕ್ಷ ಒಳ್ಳೆಯ ರೀತಿಯಲ್ಲಿ ಸ್ಪಂದಿಸಲಿದೆ. ನಮ್ಮ ಒಳ ಜಗಳ, ವೈಯಕ್ತಿಕ ಪ್ರತಿಷ್ಠೆ ಕಾರಣಕ್ಕೆ ಪುತ್ತೂರಿನಲ್ಲಿ ಸೋಲಾಗಿದೆ. ಮುಂದಿನ ದಿನಗಳು ನಮಗೆ ಕಠಿಣ ಇದೆ, ಅದಕ್ಕೆ ನಾವು ತಯಾರಾಗಬೇಕು. ಇನ್ನೊಂದಿಷ್ಟು ಕಾರ್ಯಕರ್ತರ ಮೇಲೆ ಹಲ್ಲೆ ಆಗಬಹುದು, ಎಲ್ಲರೂ ಆತ್ಮಾವಲೋಕನ ಮಾಡಿ ತಪ್ಪಿದ್ರೆ ಕ್ಷಮೆ ಕೇಳಬೇಕು. ಜೊತೆಗೆ ಇಲ್ಲಿ ಪೊಲೀಸರು ‌ಕಾನೂನು ಕೈಗೆತ್ತಿಕೊಂಡಿದ್ದಾರೆ. ಯಾರೇ ಹೇಳಿದ್ರೂ ಮಾಡಬಾರದು, ಯಾರದ್ದೇ ಸರ್ಕಾರ, ಮುಖ್ಯಮಂತ್ರಿ ಇದ್ದರೂ ಕಾನೂನಿನ ಒಳಗೆ ಇರಬೇಕು. ಈ ಸರ್ಕಾರ ಹಿಂದೂ ವಿರೋಧಿಯಾದ್ರೆ, ನಾವು ಬಿಡಲ್ಲ ಎಂದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Fri, 19 May 23