Yelahanka Election Results: ಯಲಹಂಕ ಅಸೆಂಬ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಆರ್. ವಿಶ್ವನಾಥ್ ಗೆ ಭಾರೀ ಗೆಲುವು

Yelahanka Assembly Election Result 2023 Live Counting Updates: ಯಲಹಂಕ ಅಸೆಂಬ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಆರ್. ವಿಶ್ವನಾಥ್ ಗೆ ಭಾರೀ ಗೆಲುವು

Yelahanka Election Results: ಯಲಹಂಕ ಅಸೆಂಬ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಆರ್. ವಿಶ್ವನಾಥ್ ಗೆ ಭಾರೀ ಗೆಲುವು
ಯಲಹಂಕ ಅಸೆಂಬ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಆರ್. ವಿಶ್ವನಾಥ್ ಗೆ ಭಾರೀ ಗೆಲುವು
Follow us
ಸಾಧು ಶ್ರೀನಾಥ್​
|

Updated on:May 13, 2023 | 6:19 PM

Yelahanka Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections 2023) ಫಲಿತಾಂಶ ಪ್ರಕಟವಾಗಿದೆ. ಮೇ 10 ರಂದು ನಡೆದ ಚುನಾವಣೆಯಲ್ಲಿ ಯಲಹಂಕ ಕ್ಷೇತ್ರದಲ್ಲಿ (Yelahanka Assembly Elections 2023) ಶೇ. 57 ರಷ್ಟು ಮತದಾನವಾಗಿತ್ತು.

ಯಲಹಂಕ ಕ್ಷೇತ್ರದ ಮತ ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ಎಸ್.ಆರ್. ವಿಶ್ವನಾಥ್ 138565 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಕೇಶವರಾಜಣ್ಣ- 76337 ಮತಗಳನ್ನು ಪಡೆದಿದ್ದಾರೆ. ಎಸ್. ಆರ್. ವಿಶ್ವನಾಥ್ 62228 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ.

ಯಲಹಂಕ ಕ್ಷೇತ್ರದ ಒಟ್ಟು ಮತದಾರರು 4,07,217. ಪುರುಷರು 2,08,075, ಮಹಿಳೆಯರು 1,99,066. ಇತರರು 76. ಯಲಹಂಕ, ಯಲಹಂಕ ನ್ಯೂಟೌನ್ ವ್ಯಾಪ್ತಿಯ ನಗರವಾಸಿಗಳು, ದಾಸನಪುರ, ಹೆಸರಘಟ್ಟ ರಾಜಾನುಕುಂಟೆ ಹೋಬಳಿಯ ಗ್ರಾಮೀಣ ಮತದಾರರನ್ನು ಕ್ಷೇತ್ರ ಒಳ ಗೊಂಡಿದೆ.

ಕ್ಷೇತ್ರದಲ್ಲಿ ವಿದ್ಯಾವಂತರು, ಉದ್ಯೋಗಿಗಳು, ಶ್ರಮಿಕ ವರ್ಗ, ರೈತಾಪಿ ವರ್ಗವಿದೆ. ಈ ಎಲ್ಲಾ ವರ್ಗವನ್ನು ಒಳಗೊಳ್ಳುವ ಅಭಿವೃದ್ಧಿ ಅಜೆಂಡಾವನ್ನು ಮನದಟ್ಟು ಮಾಡಿ ಕೊಟ್ಟೆ ಗೆಲ್ಲಬೇಕಾದ ಅನಿವಾರ್ಯತೆ ಅಭ್ಯರ್ಥಿಗಳಿಗಿದೆ. ಜಾತಿ ಲೆಕ್ಕಾಚಾರ? ನಾಲ್ಕು ಲಕ್ಷಕ್ಕೂ ಅಧಿಕ ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ ಒಕ್ಕಲಿಗರು, ದಲಿತರ ಮತಗಳೇ ಅತ್ಯಧಿಕ, ಈ ಸಮುದಾಯಗಳ ಪೈಕಿ ಒಂದು ಸಮುದಾಯ ಯಾವ ಅಭ್ಯರ್ಥಿ ಪರ ನಿರ್ಣಾಯಕವಾಗಿ ನಿಲ್ಲಲಿದೆಯೋ ಅವರಿಗೆ ಗೆಲುವು ಸರಾಗ ಎಂದು ಹೇಳಲಾಗುತ್ತಿದೆ.

ರಾಜಧಾನಿಯ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರ ಯಲಹಂಕ ಹೈವೋಲ್ವೇಜ್ ರಣಕಣವಾಗಿದೆ. ಮೂರು ಬಾರಿ ಜಯ ಸಾಧಿಸಿರುವ ಬಿಜೆಪಿ, ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿದೆ. ಹಾಲಿ ಶಾಸಕ ಎಸ್.ಆರ್. ವಿಶ್ವನಾಥ್ (ಸಿಂಗನಾಯಕನಹಳ್ಳಿ ರಾಮಯ್ಯ ವಿಶ್ವನಾಥ್) 4ನೇ ಬಾರಿ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ವಿಶ್ವನಾಥ್ ಜಯದ ನಾಗಾಲೋಟಕ್ಕೆ ಲಗಾಮು ಹಾಕಲು ಜೆಡಿಎಸ್, ಕಾಂಗ್ರೆಸ್‌ ಹುರಿಯಾಳುಗಳು ಕಸರತ್ತು ನಡೆಸುತ್ತಿದ್ದು, ಪ್ರಬಲ ಸ್ಪರ್ಧೆ ಏರ್ಪಟ್ಟಿದೆ.

ಮೂರು ಅವಧಿಯ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಹಾಲಿ ಶಾಸಕ ವಿಶ್ವನಾಥ್ ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‌ ಅಭ್ಯರ್ಥಿ ಬಿ. ಮುನೇಗೌಡ, ಕಾಂಗ್ರೆಸ್‌ ಅಭ್ಯರ್ಥಿ ಕೇಶವ ರಾಜಣ್ಣ, ಕ್ಷೇತ್ರದ ಸರ್ವಾ೦ಗೀಣ ಅಭಿವೃದ್ಧಿಗೆ ನಮಗೊಮ್ಮೆ ಅವಕಾಶ ಕೊಡಿ ಎಂದು ಮತದಾರರ ಓಲೈಕೆಯಲ್ಲಿ ತೊಡಗಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 3:30 am, Sat, 13 May 23

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್