Yellapura Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ (Yellapur Assembly Constituency)ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸ್ಪರ್ಧಿಸಿದ್ದಾರೆ. ಇನ್ನು ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು, ಬಳಿಕ ಬೆಜೆಪಿ ಸೇರುವ ಮೂಲಕ ಸರ್ಕಾರವನ್ನ ಬಿಳಿಸಿದ್ದರು, ಬಳಿಕ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಬರೊಬ್ಬರಿ 80,442 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಇವರು ಮತ್ತೊಮ್ಮೆ ಗೆಲ್ಲುವ ಭರವಸೆಯಲ್ಲಿದ್ದಾರೆ. ಸದ್ಯ ಮುನ್ನಡೆ ಕೂಡ ಸಾಧಿಸಿದ್ದಾರೆ.
ಕಾಂಗ್ರೆಸ್ನಿಂದ ವಿಎಸ್ ಪಾಟೀಲ್ ಸ್ಪರ್ಧಿಸಿದ್ದಾರೆ. ಇನ್ನು ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಇವರು ಬಿಜೆಪಿ ಪರವಾಗಿ ಕಣದಲಿದ್ದು, ಇದೇ ಹೆಬ್ಬಾರ್ ವಿರುದ್ದ ಸೋತಿದ್ದರು. ಬಳಿಕ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಇದೀಗ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದಾರೆ. ಈ ಬಾರಿ ಇಬ್ಬರು ಪಕ್ಷ ಬದಲಿಸಿಕೊಂಡವರ ನಡುವೆ ಬಿಗ್ ಪೈಟ್ ನಡೆಯಲಿದೆ. ಇನ್ನು ಕ್ಷೇತ್ರದಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಇನ್ನು ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ಗೆ ಉತ್ತಮ ಪ್ರತಿಕ್ರಿಯೆ ಇದ್ದು, ಇತ್ತ ವಿಎಸ್ ಪಾಟೀಲ್ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ, ಮತದಾರ ಯಾರ ಕೈಹಿಡಿಯಲಿದ್ದಾರೆ ಎಂದು ಕಾದು ನೋಡಬೇಕಿದೆ.
Published On - 4:25 am, Sat, 13 May 23