Yeshwanthpur Election Results: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ, ಸಚಿವ ಎಸ್‌.ಟಿ. ಸೋಮಶೇಖರ್ ಜಯ

Yeshwanthpur nagar Assembly Election Result 2023 Live Counting Updates: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ, ಸಚಿವ ಎಸ್‌.ಟಿ. ಸೋಮಶೇಖರ್ ಜಯ ಸಾಧಿಸಿದ್ದಾರೆ.

Yeshwanthpur Election Results: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ, ಸಚಿವ ಎಸ್‌.ಟಿ. ಸೋಮಶೇಖರ್ ಜಯ
ಯಶವಂತಪುರ ಕ್ಷೇತ್ರದಲ್ಲಿ ಹಾಲಿ ಶಾಸಕ, ಸಚಿವ ಎಸ್‌.ಟಿ. ಸೋಮಶೇಖರ್ ಜಯ
Follow us
ಸಾಧು ಶ್ರೀನಾಥ್​
|

Updated on:May 13, 2023 | 7:33 PM

Yeshwanthpur nagar Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections 2023) ಫಲಿತಾಂಶ ಪ್ರಕಟಗೊಂಡಿದೆ.  ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ, ಸಚಿವ ಎಸ್‌.ಟಿ. ಸೋಮಶೇಖರ್ ಜಯ ಸಾಧಿಸಿದ್ದಾರೆ. ಮೇ 10 ರಂದು ನಡೆದ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ (Yeshwanthpur Assembly Elections 2023) ಶೇ. 63.7 ರಷ್ಟು ಮತದಾನವಾಗಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಅತ್ಯಧಿಕ ಮತದಾನ ಕಂಡ ಕ್ಷೇತ್ರ ಇದಾಗಿತ್ತು. ಯಶವಂತಪುರ ಕ್ಷೇತ್ರದಲ್ಲಿರುವ ಮತದಾರರು 5,64,172. ಪುರುಷರು -2,87,823. ಮಹಿಳೆಯರು -2,26,266. ಲೈಂಗಿಕ ಅಲ್ಪಸಂಖ್ಯಾತರು 83. 14 ಕಣದಲ್ಲಿರುವ ಒಟ್ಟು ಅಭ್ಯರ್ಥಿಗಳು.

ಗ್ರಾಮೀಣ ಮತ್ತು ನಗರ ಪ್ರದೇಶ ಒಳಗೊಂಡ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ, ಸಚಿವ ಎಸ್‌.ಟಿ. ಸೋಮಶೇಖರ್ ಅವರದ್ದೇ ಬಿಗಿ ಹಿಡಿತ. ‌ಕಾಂಗ್ರೆಸ್‌ ತೆಕ್ಕೆಯಿಂದ ಬಿಜೆಪಿಗೆ ಹೊರಳಿರುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲೀಗ ಪಕ್ಷಕ್ಕಿಂತ ಶಾಸಕ ಎಸ್‌.ಟಿ. ಸೋಮಶೇಖರ್ ಹಿಡಿತ ಹೆಚ್ಚಿದೆ. ಮೂರು ಬಾರಿ ಪೈಪೋಟಿ ನೀಡಿ ಸೋತಿರುವ ಜೆಡಿಎಸ್ ಅಭ್ಯರ್ಥಿ ಟಿ.ಎನ್. ಜವರಾಯಿಗೌಡ ಈ ಬಾರಿ ಪುಟಿದೇಳುವ ತವಕದಲ್ಲಿದ್ದಾರೆ. ತುಮಕೂರು ರಸ್ತೆಯ ಚಿಕ್ಕಬಿದರಕಲ್ಲಿನಿಂದ ಆರಂಭವಾಗಿ ಮೈಸೂರು ರಸ್ತೆ ದಾಟಿ ಕನಕಪುರ ರಸ್ತೆಯ ಕಗ್ಗಲಿಪುರ ತನಕ, ಇತ್ತ ಮೈಸೂರು ರಸ್ತೆಯಲ್ಲಿ ಬಿಡದಿವರೆಗೆ, ಮಾಗಡಿ ರಸ್ತೆಯಲ್ಲಿ ತಿಪ್ಪಗೊಂಡನಹಳ್ಳಿ ಹತ್ತಿರಕ್ಕೆ ಈ ಕ್ಷೇತ್ರ ವ್ಯಾಪಿಸಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳನ್ನು ಕ್ಷೇತ್ರ ಒಳಗೊಂಡಿದೆ.

2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಮೊದಲ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಎಸ್.ಟಿ. ಸೋಮಶೇಖರ್ ಸೋಲು ಕಂಡಿದ್ದರು. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದ ಬಳಿಕ ಸೋಲು ಕಂಡಿಲ್ಲ. 2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು, ‘ಆಪರೇಷನ್ ಕಮಲ’ಕ್ಕೆ ಒಳಗಾದರು. ಬಿಜೆಪಿ ಸೇರಿ ಸಚಿವರಾಗಿ 2019ರ ಆಗಸ್ಟ್‌ನಲ್ಲಿ ಎದುರಿಸಿದ ಚುನಾವಣೆಯಲ್ಲೂ ಗೆದ್ದರು.

ಮೂರು ಬಾರಿಯೂ ಪ್ರಬಲ ಪೈಪೋಟಿ ನೀಡಿರುವ ಜೆಡಿಎಸ್‌ ಪಕ್ಷದ ಟಿ.ಎನ್. ಜವರಾಯಿಗೌಡ ಈಗ ನಾಲ್ಕನೇ ಬಾರಿ ಎದುರಾಳಿಯಾಗಿದ್ದಾರೆ. ಸತತ ಸೋಲಿನಿಂದ ಬೇಸರಗೊಂಡಿದ್ದ ಅವರಿಗೆ ಕಾರ್ಯಕರ್ತರ ಜತೆಗೆ ಸ್ವತಃ ಎಚ್.ಡಿ.ಕುಮಾರಸ್ವಾಮಿ ಅವರೇ ಆತ್ಮವಿಶ್ವಾಸ ತುಂಬಿ ಸ್ಪರ್ಧೆಗೆ ಇಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಒಕ್ಕಲಿಗ ಸಮುದಾಯದ ಮತದಾರರಿದ್ದಾರೆ. ಕಣದಲ್ಲಿರುವ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳೂ ಒಂದೇ ಸಮುದಾಯದವರಾಗಿದ್ದಾರೆ. ಮೇಲ್ನೋಟಕ್ಕೆ ಎರಡು ಪಕ್ಷಗಳ ನಡುವೆ ನೇರ ಹಣಾಹಣಿ ಎಂಬಂತೆ ಕಾಣಿಸುತ್ತಿದೆ.

ಜನರ ಕಷ್ಟ ಸುಖಗಳಿಗೆ ಸದಾ ಸ್ಪಂದಿಸಿದ್ದೇನೆ. ಕೋವಿಡ್ ಕಷ್ಟ ಕಾಲದಲ್ಲಿ ಅವರ ಜೊತೆಯಲ್ಲಿದ್ದೆ. ಅಭಿವೃದ್ಧಿ ಕೆಲಸಗಳಿಗೆ ಜನ ಮತ ಹಾಕಲಿದ್ದಾರೆ ಎಂಬ ವಿಶ್ವಾಸದಲ್ಲಿ ಸೋಮಶೇಖರ್ ಇದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ಈ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಕಾರ್ಯಕರ್ತರ ಹುರುಪು ಹೆಚ್ಚಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 3:40 am, Sat, 13 May 23

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ