ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅದರಂತೆ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು.

ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
ವಿನಯ್ ಕುಲಕರ್ಣಿ
Follow us
Rakesh Nayak Manchi
|

Updated on:Apr 11, 2023 | 8:47 PM

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ (Yogesh Gowda Murder Case) ಸಂಬಂಧ ತನಗೆ ಧಾರವಾಡಕ್ಕೆ ಪ್ರವೇಶ ನೀಡುವಂತೆ ಕೋರಿ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ (Vinay Kulkarni) ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ (ಏಪ್ರಿಲ್ 12) ಮುಂದೂಡಿದೆ. ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಅದರಂತೆ ಕೋರ್ಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ವೇಳೆ ವಾದ ಮಂಡಿಸಿದ ಕುಲಕರ್ಣಿ ಪರ ವಕೀಲರಾದ ಸಿ ಹೆಚ್ ಹನುಮಂತರಾಯ, ಚುನಾವಣೆಗೆ ನಾಮಪತ್ರ ಸಲ್ಲಿಸಿ ಪ್ರಚಾರ ನಡೆಸಬೇಕಿದೆ. ಹೀಗಾಗಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿದ್ದಾರೆ.

ವಿಚಾರಣಾ ನ್ಯಾಯಾಲಯಕ್ಕೆ ಷರತ್ತು ಸಡಿಲಿಸಲು ಅಧಿಕಾರವಿದೆ. ಷರತ್ತು ಸಡಿಲಿಸಲು ಅರ್ಜಿ ಸಲ್ಲಿಸಬಹುದೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸದ್ಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಪ್ರಚಾರ ನಡೆಸಬೇಕಿದೆ. ಹೀಗಾಗಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ ‌ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿ ಹೆಚ್ ಹನುಮಂತರಾಯ ಅವರು ಮನವಿ ಮಾಡಿದರು. ಪ್ರತಿವಾದ ಮಂಡಿಸಿದ ಸಿಬಿಐ ಪರ ವಕೀಲರು, ಯೋಗೇಶ್ ಗೌಡ ಕೊಲೆ ಪ್ರಕರಣದ 90 ಸಾಕ್ಷಿಗಳು ಧಾರವಾಡ ಜಿಲ್ಲೆಯಲ್ಲೇ ಇದ್ದಾರೆ ಎಂಬುದನ್ನು ಕೋರ್ಟ್​ ಗಮನಕ್ಕೆ ತಂದರು. ಅಲ್ಲದೆ, ಸೂಚಕರ ಮೂಲಕವೇ ನಾಮಪತ್ರ ಸಲ್ಲಿಸುವ ಅವಕಾಶ ಇದೆ ಅಂತ ಹೇಳಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್, ವಿಚಾರಣೆಯನ್ನು ನಾಳೆಗೆ ಮುಂದೂಡಿತು.

ಧಾರವಾಡ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ್ದ ಸುಪ್ರೀಂ

ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶ ಅನುಮತಿಯನ್ನು ಈ ಹಿಂದೆ ಸುಪ್ರೀಂಕೋರ್ಟ್​ ನಿರಾಕರಿಸಿತ್ತು. 1200 ಹಸುಗಳಿವೆ, 2400 ಮೇಕೆಗಳ ನಿರ್ವಹಣೆ ಮಾಡಬೇಕು. ಪತ್ನಿ, ಮಕ್ಕಳಿಂದ ಸೂಕ್ತ ನಿರ್ವಹಣೆ ಸಾಧ್ಯವಿಲ್ಲ. ವಿಧಾನಸಭೆ ಚುನಾವಣೆ ಇರುವುದರಿಂದ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಹೀಗಾಗಿ ಧಾರವಾಡ ಭೇಟಿಗೆ ಅನುಮತಿ ನೀಡುವಂತೆ ಕೋರಿದ್ದರು. ಆದರೆ ಜಾಮೀನು ಷರತ್ತು ಸಡಿಲಿಕೆಗೆ ಸುಪ್ರೀಂಕೋರ್ಟ್ ನಿರಾಕರಿಸಿತ್ತು. ಜಾಮೀನು ನೀಡುವ ವೇಳೆ ವಾರಕ್ಕೆರಡು ಬಾರಿ ಸಿಬಿಐ ಕಚೇರಿಗೆ ಹಾಜರಾಗಬೇಕೆಂಬ ಷರತ್ತು ಸಡಿಲಿಸಲೂ ಮನವಿ ಮಾಡಿದ್ದು, ವಾರಕ್ಕೊಮ್ಮೆ ಮಾತ್ರ ಸಿಬಿಐ ಕಚೇರಿಗೆ ಹಾಜರಾಗಲು ಸುಪ್ರೀಂ ಸೂಚನೆ ನೀಡಿದೆ.

ಇದನ್ನೂ ಓದಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಧಾರವಾಡ ಎಂಟ್ರಿಗೆ ಅನುಮತಿ ನಿರಾಕರಿಸಿದ ಸುಪ್ರೀಂ

ಏನಿದು ಪ್ರಕರಣ? ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಗೌಡರ್ ಅವರನ್ನು ಜೂನ್ 2016 ರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 2020 ರಲ್ಲಿ ಕಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಅಲ್ಲದೆ, ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ಧಪಡಿಸುವುದಾಗಿ ಕೋರ್ಟ್ ಎಚ್ಚರಿಕೆ ನೀಡಿತ್ತು.

ವಿನಯ್ ಕುಲಕರ್ಣಿ ಅವರು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎಂಬ ಊಹಾಪೋಹಗಳು ಹರಡಿದ್ದವು. ಸದ್ಯ ಎರಡು ಬಾರಿ ಗೆಲುವು ದಾಖಲಿಸಿದ ಸ್ವಕ್ಷೇತ್ರ ಧಾರವಾಡದಿಂದಲೇ ವಿನಯ್ ಕುಲಕರ್ಣಿ ಚುನಾವಣಾಗೆ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಈಗಾಗಲೇ ಟಿಕೆಟ್ ಘೋಷಣೆ ಮಾಡಿದೆ. ಸದ್ಯ ಕ್ಷೇತ್ರದ ಪ್ರಚಾರ ಕೈಗೊಳ್ಳಲು ಪ್ರವೇಶಕ್ಕೆ ಅನುಮತಿ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿರುವ ಕುಲಕರ್ಣಿಗೆ ಪ್ರವೇಶ ಸಿಗಲಿದೆಯಾ ಎಂಬುದನ್ನು ಕಾದುನೋಡಬೇಕಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Tue, 11 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ