ಚುನಾವಣಾ ರಾಜಕೀಯದಿಂದ ವೈಎಸ್​ವಿ ದತ್ತ ನಿವೃತ್ತಿ; ಕಡೂರಿನಲ್ಲಿ ಪಶ್ಚಾತ್ತಾಪದ ಪಾದಯಾತ್ರೆ

ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್​ನ ವೈಎಸ್​ವಿ ದತ್ತ ಅವರು ಇದೀಗ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.

ಚುನಾವಣಾ ರಾಜಕೀಯದಿಂದ ವೈಎಸ್​ವಿ ದತ್ತ ನಿವೃತ್ತಿ; ಕಡೂರಿನಲ್ಲಿ ಪಶ್ಚಾತ್ತಾಪದ ಪಾದಯಾತ್ರೆ
ಚುನಾವಣಾ ರಾಜಕೀಯದಿಂದ ವೈಎಸ್​ವಿ ದತ್ತ ನಿವೃತ್ತಿ
Follow us
Rakesh Nayak Manchi
|

Updated on: May 16, 2023 | 9:51 PM

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್​ನ ವೈಎಸ್​ವಿ ದತ್ತ (YSV Datta) ಅವರು ಇದೀಗ ಚುನಾವಣಾ ರಾಜಕೀಯದಿಂದ ಹಿಂದೆಸರಿದಿದ್ದಾರೆ. ಮಾತ್ರವಲ್ಲದೆ, ಚನಾವಣೆ ಸಮಯದಲ್ಲಿ ನಡೆದ ಬೆಳವಣಿಗೆಯಿಂದ ಪಶ್ಚಾತ್ತಾಪ ಪಟ್ಟಿರುವ ದತ್ತ ಅವರು, ಇದೀಗ ಕ್ಷೇತ್ರದಲ್ಲಿ ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡು ಜನರಲ್ಲಿ ಕ್ಷಮೆ ಕೋರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸುದೀರ್ಘ ಪತ್ರ ಬರೆದಿದ್ದಾರೆ.

ಕಡೂರು ವಿಧಾನಸಭಾ ಕ್ಷೇತ್ರದ ಮತದಾರ ಬಂಧುಗಳಿಗೆ ನಿಮ್ಮ ದತ್ತಣ್ಣ ಮಾಡುವ ನಮಸ್ಕಾರಗಳು ಎಂದು ಹೇಳಿ ಸುದೀರ್ಘವಾದ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ, ಕ್ಷೇತ್ರದ ನೂತನ ಶಾಸಕರಿಗೆ ಮಂತ್ರಿಯಾಗಲೆಂದು ಶುಭ ಹಾರೈಸಿದರು. ಸದ್ಯ ನಾನೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ನಾನು ಎಲ್ಲಿ ಎಡವಿದೆ, ನನ್ನ ಮತದಾರ ಬಂಧುಗಳಾದ ನಿಮ್ಮ ನಿರೀಕ್ಷೆಯನ್ನು ಮುಟ್ಟಲು ನಾನು ಎಲ್ಲಿ ವಿಫಲನಾಗಿದ್ದೇನೆ ಎಂಬ ಬಗ್ಗೆ ಚಿಂತನ ಮಂಥನ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

2023ರ ಚುನಾವಣೆ ನನ್ನ ಪಾಲಿಗೆ ಅವಿಸ್ಮರಣೀಯ ಚುನಾವಣೆ ಅಗಬಹುದೆಂಬ ಅಶಾಭಾವನೆ ಮೂಡಿತ್ತು. ಅದೂ ಅಲ್ಲದೇ ಇದೇ ನನ್ನ ಕಡೆಯ ಚುನಾವಣೆ ಎಂಬುದನ್ನೂ ತಮ್ಮಲ್ಲಿ ತಿಳಿಸಿದ್ದೆ. ಆದರೆ, ಚುನಾವಣೆ ಮುಗಿದು ಫಲಿತಾಂಶ ಹೊರಬಂದ ಮೇಲೆ ನನಗೆ ವಾಸ್ತವ ದರ್ಶನವಾಯಿತು ಎಂದು ತಮ್ಮ ಸೋಲಿನ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಬಂದಿದ್ದರೂ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ್ ​ರೈ

2006ರಲ್ಲಿ ಕಡೂರು ಕ್ಷೇತ್ರಕ್ಕೆ ನಾನು ಅನಿವಾರ್ಯವಾಗಿ ಕಾಲಿಟ್ಟ ದಿನದಿಂದ 2023ರವರೆಗಿನ ನನ್ನ ನಡೆವಳಿಕೆ, ನಿರ್ಧಾರಗಳು ಹಾಗೂ ಮತದಾರರೊಂದಿಗಿನ ನನ್ನ ಸಂಬಂಧದ ಬಗ್ಗೆ ನಾನೇ ಎಲ್ಲೋ ಎಡವಿದ್ದೇನೆ ಎಂಬ ಅನುಮಾನ ನನ್ನನ್ನು ಸದಾ ಕಾಡತೊಡಗಿದೆ. ಚುನಾವಣಾ ಫಲಿತಾಂಶದ ಬಗ್ಗೆ ನಾನೆಂದೂ ತಲೆಕಡೆಸಿಕೊಂಡವನಲ್ಲ. ನನ್ನ ರಾಜಕೀಯ ಜೀವನದಲ್ಲಿ ಗೆಲುವಿಗಿಂತ ಸೋಲನ್ನೇ ಜಾಸ್ತಿ ನೋಡಿದವನು. ಸೋಲು ಗೆಲುವು ಎರಡನ್ನೂ ಸಮಚಿತ್ತದಿಂದ ಸಮಭಾವದಿಂದ ನೋಡುವ ಮನಸ್ಥಿತಿ ನನ್ನದು. ಹಾಗಾಗಿ ಬಂದ ಫಲಿತಾಂಶದ ಬಗ್ಗೆ ನನಗೆ ಎಳ್ಳಷ್ಟೂ ಬೇಸರವಿಲ್ಲ ಎಂದಿದ್ದಾರೆ.

ಕಳೆದ 17 ವರ್ಷಗಳಿಂದ ನೀವು ತೋರಿರುವ ಪ್ರೀತಿ, ಬೆಂಬಲ, ಅಭಿಮಾನದ ಕಾರಣದಿಂದ ನಿಮ್ಮ ಋಣ ತೀರಿಸುವ ಹಾಗೂ ನನ್ನ ಕೊನೆಯ ಉಸಿರು ಇರುವವರೆಗೂ ನಾನು ನಿಮ್ಮೊಂದಿಗೆ ಇದ್ದು ನಿಮ್ಮಲ್ಲಿಯೇ ಒಬ್ಬನಾಗಿ ಈ ನನ್ನ ನೆಲದಲ್ಲಿ ಮಣ್ಣಾಗಬೇಕೆಂಬ ದೃಢ ಸಂಕಲ್ಪ ಮಾಡಿದ್ದೇನೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ