Karnataka Assembly Election 2023 Highlights: ರಾಜ್ಯದ ಕೆಲವು ಭಾಗದಲ್ಲಿ ಜೆಡಿಎಸ್ ಸ್ಪಲ್ಪ ವೀಕ್ ಇದೆ, ಒಪ್ಪಿಕೊಳ್ತೇವೆ, ಕಾಂಗ್ರೆಸ್ & ಬಿಜೆಪಿಯವರು ಒಪ್ಪಿಕೊಳ್ತಾರಾ: ಕುಮಾರಸ್ವಾಮಿ
Breaking News Today Highlights Updates: ಚುನಾವಣೆ ಹಿನ್ನೆಲೆ ರಾಜ್ಯ ರಾಜಕೀಯ ವಲಯದಲ್ಲಾಗುತ್ತಿರುವ ಕ್ಷಣ ಕ್ಷಣದ ಬೆಳವಣಿಗೆಯ ಮಾಹಿತಿ ಪಡೆಯಲು ಟಿವಿ9 ಕನ್ನಡ ಡಿಜಿಟಲ್ ಲೈವ್ ಫಾಲೋ ಮಾಡಿ.
ರಾಜ್ಯ ವಿಧಾನ ಸಭಾ ಚುನಾವಣೆ ಘೋಷಣೆ(Karnataka Assembly Elections 2023) ಬೆನ್ನಲ್ಲೆ ರಾಜಕೀಯ ಪಕ್ಷಗಳಲ್ಲಿ ಪ್ರಚಾರ ಗರಿಗೆದರಿದೆ. ಕಾಂಗ್ರೆಸ್(Congress), ಜೆಡಿಎಸ್(JDS) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಬಿಜೆಪಿ(BJP) ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಆದರೂ ಬೆಳಗಾವಿ, ಶಿವಮೊಗ್ಗ ಸೇರಿದಂತೆ ಕೆಲವೆಡೆ ಅಭ್ಯರ್ಥಿಗಳ ಆಯ್ಕೆ ಬಿಜೆಪಿಗೆ ಬಿಸಿ ತುಪ್ಪವಾಗಿದೆ. ಹೀಗಾಗಿ ಪಟ್ಟಿ ಫೈನಲ್ ಮಾಡಲು ಮೀಟಿಂಗ್ ಮೇಲೆ ಮೀಟಿಂಗ್ ಆಗ್ತಿವೆ. ಇದರ ನಡುವೆ ಕೆಲ ಅಸಮಾಧಾನಿತರು ಪಕ್ಷ ಬದಲಾವಣೆ ಮಾಡಿ ತಮ್ಮ ಲಕ್ ಪ್ರಯೋಗಿಸಲು ಮುಂದಾಗಿದ್ದಾರೆ. ಮತ್ತೊಂದೆಡೆ ತಮ್ಮ ನಾಯಕನಿಗೆ ಟಿಕೆಟ್ ನೀಡಬೇಕು ಎಂದು ಬೆಂಬಲಿಗರ ಕೂಗು ಹೆಚ್ಚಾಗುತ್ತಿದೆ. ಸದ್ಯ ರಾಜ್ಯ ರಾಜಕೀಯ ವಲಯದಲ್ಲಿ ಚುನಾವಣೆ ದಿನ ಸಮೀಪವಾಗುತ್ತಿದ್ದಂತೆ ದಿನದಿಂದ ದಿನಕ್ಕೆ ಅನೇಕ ಬೆಳವಣಿಗೆಗಳು, ಬದಲಾವಣೆಗಳಾಗುತ್ತಿವೆ. ಬನ್ನಿ ಟಿವಿ9 ಡಿಜಿಟಲ್ ಮೂಲಕ ರಾಜಕೀಯದ ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯಿರಿ.
LIVE NEWS & UPDATES
-
Karnataka Assembly Election 2023 Live: ರಾಜ್ಯದ ಕೆಲವು ಭಾಗದಲ್ಲಿ ಜೆಡಿಎಸ್ ಸ್ಪಲ್ಪ ವೀಕ್ ಇದೆ, ಒಪ್ಪಿಕೊಳ್ತೇವೆ
ಬೆಂಗಳೂರು: ರಾಜ್ಯದ ಕೆಲವು ಭಾಗದಲ್ಲಿ ಜೆಡಿಎಸ್ ಸ್ಪಲ್ಪ ವೀಕ್ ಇದೆ, ಒಪ್ಪಿಕೊಳ್ಳುವೆ ಆದರೆ ಕಾಂಗ್ರೆಸ್ ಮತ್ತು ಬಿಜೆಪಿಯವರು ಒಪ್ಪಿಕೊಳ್ಳಾತ್ತಾರಾ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ನಮಗೆ ಮತ ಹಾಕಲು ಜನ ಸಿದ್ಧರಿದ್ದಾರೆ. ಅವರನ್ನು ಸಮರ್ಥವಾಗಿ ಸೆಳೆಯಲು JDS ಅಭ್ಯರ್ಥಿ ಕೊರತೆಯಿದೆ. ಅಂತಹ ಕಡೆ ಮತವಾಗಿ ಪರಿವರ್ತಿಸುವ ನಾಯಕರು ಬಂದಾಗ ಚಿಂತನೆ ಮಾಡುತ್ತೇವೆ. ಕೆಲವೆಡೆ ಸಂಘಟನೆ, ಮತವಾಗಿ ಪರಿವರ್ತಿಸುವ ಅಭ್ಯರ್ಥಿ ಕೊರತೆಯಿದೆ ಎಂದು ಹೇಳಿದರು.
-
Karnataka Assembly Election 2023 Live: ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ ವಿಚಾರ: ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿದೆ. ಬಿಜೆಪಿ ನಿಯೋಗದಿಂದ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ ಬಿಜೆಪಿ ಮುಖಂಡ ಅಶ್ವತ್ಥ್ ನಾರಾಯಣ ಹೇಳಿದರು. ಅಭ್ಯರ್ಥಿಗಳ ನಕಲಿ ಪಟ್ಟಿ ರಿಲೀಸ್ ಹಿಂದೆ ಕಾಂಗ್ರೆಸ್ ಕೈವಾಡ ಆರೋಪ ಕೇಳಿಬಂದಿದೆ. ಬಿಜೆಪಿಯ ಕೇಂದ್ರ ನಾಯಕರ ಹೆಸರು ಬಳಸಿ ನಕಲಿ ಪಟ್ಟಿ ಬಿಟ್ಟಿದ್ದಾರೆ. ಈ ಘಟನೆ ಸಂಬಂಧ ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದೇವೆ. ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡ್ತೇವೆ ಎಂದರು.
-
Karnataka Assembly Election 2023 Live: ಅವರ ಹಣದ ದಾಹ ಪ್ರತಿ ಹಳ್ಳಿಗೂ ಗೊತ್ತಿದೆ ಎಂದ ಕುಮಾರಸ್ವಾಮಿ
ಬೆಂಗಳೂರು: ಜೆಡಿಎಸ್ 100 ಸ್ಥಾನ ಗೆಲ್ಲಲ್ಲ ಎಂಬ ಡಾ.ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಅವರ ಹಣದ ದಾಹ ಪ್ರತಿ ಹಳ್ಳಿಗೂ ಗೊತ್ತಿದೆ. ಜನರಿಗೆ ಟಿವಿ, ಫ್ರಿಡ್ಜ್, ಸ್ಟವ್ ಸೇರಿದಂತೆ ಎಲ್ಲವನ್ನೂ ಹಂಚಿದ್ದಾರೆ ಪಾಪ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಂಪದ್ಭರಿತವಾಗಿದ್ದಾರೆ. ಇವರು ಇಷ್ಟೊಂದು ಮಾಡಿದ್ದಾರಲ್ಲ ಅಂತಾ ಮನೆಯಲ್ಲೇ ಕೂರಿಸಿಬಿಟ್ರೆ. ಆಗ ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ವಲ್ಲಾ. ಆ ರೀತಿ ಆದರೆ ಏನ್ಮಾಡುತ್ತಾರೆ, ಸ್ವಲ್ಪ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು ಎಂದು ಹೇಳಿದರು.
Karnataka Assembly Election 2023 Live: ಜೆಡಿಎಸ್ 120 ಸ್ಥಾನ ಗೆದ್ದರೆ ರಾಜಕೀಯವಾಗಿ ನಿವೃತ್ತಿ: ಕೆ ಸುಧಾಕರ್
ಚಿಕ್ಕಬಳ್ಳಾಪುರ: ಪ್ರಸ್ತುತ ಚುನಾವಣೆಯಲ್ಲಿ ಜೆಡಿಎಸ್ಗೆ 120 ಸ್ಥಾನಗಳಲ್ಲಿ ಗೆಲುವು ಸಾದಿಸಿದ್ದೆ ಆದರೆ ತಾವು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು. ರಾಜ್ಯದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳ ಆಡಳಿತವನ್ನು ಕಂಡು ರೋಸಿಹೋಗಿರುವ ರಾಜ್ಯದ ಜನತೆ, ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Karnataka Assembly Election 2023 Live: ಮಂಗಳವಾರವಾಗಿದ್ದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಭ್ಯಾಗವಿಲ್ಲ: ಕುಮಾರಸ್ವಾಮಿ
ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಹೆಚ್ಚು ಕಡಿಮೆ ಸಿದ್ಧವಾಗಿದೆ. ಮಂಗಳವಾರವಾಗಿದ್ದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ನಾಳೆ ಸಂಜೆ ಅಥವಾ ಗುರುವಾರ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ನಾವೇನು ಡೆಲ್ಲಿಗೆ ಪಟ್ಟಿ ಕಳುಹಿಸಿ ಅಪ್ರೂವಲ್ ಪಡೆಯಬೇಕಿಲ್ಲ. ಬಹುಶಃ ನಾಳೆ ಹೆಚ್.ಡಿ.ದೇವೇಗೌಡರು ಬೆಂಗಳೂರಿಗೆ ಬರಲಿದ್ದಾರೆ ಎಂದು ಹೇಳಿದರು.
Karnataka Assembly Election 2023 Live: ರಾಜ್ಯದ ಜನತೆಯ ದಾರಿ ತಪ್ಪಿಸಲಾಗುತ್ತಿದೆ: ನಳಿನ್ ಕುಮಾರ್ ಕಟೀಲ್
ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ. ಆದರೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿಯೊಂದನ್ನು ಹರಿಬಿಡುತ್ತಿದ್ದಾರೆ. ಈ ಕುರಿತಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದು, ಇದು ಸುಳ್ಳು, ರಾಜ್ಯದ ಜನತೆಯ ದಾರಿ ತಪ್ಪಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ. pic.twitter.com/JJo2sDIL16
— Nalinkumar Kateel (@nalinkateel) April 4, 2023
Karnataka Assembly Election 2023 Live: ಹಾಸನ ಕ್ಷೇತ್ರದ ಬಗ್ಗೆ ಅಷ್ಟೊಂದು ಅರ್ಜೆಂಟ್ ಯಾಕೆ-ಇಬ್ರಾಹಿಂ
ಬೆಂಗಳೂರು: ಹಾಸನ ವಿಧಾನಸಭಾ ಕ್ಷೇತ್ರದ JDS ಟಿಕೆಟ್ಗಾಗಿ ಪೈಪೋಟಿ ವಿಚಾರವಾಗಿ ನಗರದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಹಾಸನ ಕ್ಷೇತ್ರದ ಬಗ್ಗೆ ಅಷ್ಟೊಂದು ಅರ್ಜೆಂಟ್ ಯಾಕೆ. ಕಾಂಗ್ರೆಸ್ ಪಕ್ಷ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗೊಂದಲ ಇಲ್ಲವೇ ಎಂದು ಪ್ರಶ್ನಿಸಿದರು. ಹಾಸನ ಜಿಲ್ಲೆಯಲ್ಲಿ ರೇವಣ್ಣ ಕುಟುಂಬದವ್ರು 24 ಗಂಟೆ ಮಾಡುತ್ತಾರೆ. ರೇವಣ್ಣ ನನಗೇ ಟಿಕೆಟ್ ಬೇಕು ಅಂತಾ ಪ್ರಚಾರ ಮಾಡಿದರೆ ತಪ್ಪಿಲ್ಲ ಎಂದು ಹೇಳಿದರು.
Karnataka Assembly Election 2023 Live: 2ನೇ ಪಟ್ಟಿ ಬಿಡುಗಡೆಗೆ ಸಿದ್ಧವಾದ ಕಾಂಗ್ರೆಸ್ ಹೈಕಮಾಂಡ್
2ನೇ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದವಾಗಿದ್ದು, ಇಂದು ರಾತ್ರಿಯೇ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎನ್ನಲಾಗುತ್ತಿದೆ. ಕಾಂಗ್ರೆಸ್ನ 2ನೇ ಪಟ್ಟಿಯಲ್ಲಿ 40 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗುತ್ತಿದೆ. ಗೊಂದಲವಿರುವ 20 ಕ್ಷೇತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿಲ್ಲ. ಸಂಜೆಯೇ ಮತ್ತೊಮ್ಮೆ ಕಾಂಗ್ರೆಸ್ ನಾಯಕರು ಸಭೆ ನಡೆಸಲಿದ್ದು, 60 ಕ್ಷೇತ್ರಗಳ ಬಗ್ಗೆ ಚರ್ಚಿಸಲಿದ್ದಾರೆ.
Karnataka Assembly Election 2023 Live: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ: ಅರುಣ್ ಸಿಂಗ್
ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಈಗ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.
Karnataka Assembly Election 2023 Live: ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೆಚ್ಡಿ ರೇವಣ್ಣ ಲೇವಡಿ
ಹಾಸನ: ಕಾಂಗ್ರೆಸ್ನವರು ತಮ್ಮ ಡಕೋಟಾ ಬಸ್ ಹತ್ತಲಿ ಅಂತಾ ಕಾಯುತ್ತಿದ್ದಾರೆ. ಪಾಪ ಶಿವಲಿಂಗೇಗೌಡ ಆ ಬಸ್ ಹತ್ತಿದ್ದಾರೆ, ಎಲ್ಲಿ ನಿಲ್ಲುತ್ತೋ ಗೊತ್ತಿಲ್ಲ ಎಂದು ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೆಚ್.ಡಿ.ರೇವಣ್ಣ ಲೇವಡಿ ಮಾಡಿದರು. ಅರಸೀಕೆರೆ ಶಾಸಕರಾಗಿದ್ದ ಶಿವಲಿಂಗೇಗೌಡರನ್ನು 15 ವರ್ಷ ಸಾಕಿದ್ದೇನೆ. ಈಗ ಶಿರಸಿಗೆ ಹೋಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀನೇ ಸಾಕಿದಾ ಗಿಣಿ ಎಂದು ಅರಸೀಕೆರೆ ಕ್ಷೇತ್ರದ ಜನ ಹೇಳುತ್ತಿದ್ದಾರೆ. ದೇವರೇ ಶಿಕ್ಷೆ ಕೊಡುವ ಕಾಲ ಬರುತ್ತೆ ಎಂದು ಹೆಚ್.ಡಿ.ರೇವಣ್ಣ ವಾಗ್ದಾಳಿ ಮಾಡಿದರು.
Karnataka Assembly Election 2023 Live: ಸಿ.ಟಿ.ರವಿ ವಿರುದ್ಧ ಪೋಸ್ಟ್ ಮಾಡಿದ್ದ ‘ಕೈ’ ಕಾರ್ಯಕರ್ತರ ವಿರುದ್ಧ FIR
ಲಿಂಗಾಯತರಿಗೆ ಪ್ರಾಮುಖ್ಯತೆ ನೀಡಬೇಕಿಲ್ಲ ಎಂದಿದ್ದಾರೆ ಎಂಬ ಸಿ.ಟಿ.ರವಿ ವಿರುದ್ಧ ಪೋಸ್ಟ್ ಮಾಡಿದ್ದ ‘ಕೈ’ ಕಾರ್ಯಕರ್ತರ ವಿರುದ್ಧ FIR ದಾಖಲಾಗಿದೆ. ಕಾರ್ಯಕರ್ತರಾದ ಹರೀಶ್, ಗುರುಪಾಟೀಲ್, ಸುವರ್ಣಗಿರಿ ವಿರುದ್ಧ ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇವರು ಕಾಂಗ್ರೆಸ್ನ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಕಾರ್ಯಕರ್ತರು. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಲ್ಮರುಡಪ್ಪ ದೂರು ನೀಡಿದ್ದರು.
Karnataka Assembly Election 2023 Live: ಅವಾಚ್ಯ ಶಬ್ದಗಳಿಂದ ನಿಂದಿಸಿದ ಮುಖಂಡ ಸಿ.ಜಿ. ಪಾಟೀಲ್ ಸಂಬಂಧ ಕೈ ಶಾಸಕಿ ಪ್ರತಿಕ್ರಿಯೆ
ತಮ್ಮ ವಿರುದ್ಧ ಬಂಡಾಯದ ಬಗ್ಗೆ ಶಾಸಕಿ ಕುಸುಮಾ ಶಿವಳ್ಳಿ ಪ್ರತಿಕ್ರಿಯಿಸಿದ್ದಾರೆ. ಅವರು ಆಕಾಂಕ್ಷಿಗಳು. ಅವರ ಬಗ್ಗೆ ಮಾತಾಡಲ್ಲ. ನನ್ನ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಅವರನ್ನು ನಾನು ತಂದೆ ಸಮಾನ ಎಂದುಕೊಂಡಿದ್ದೆ. ಅವರು ಆ ರೀತಿ ಮಾತನಾಡಬಾರದಿತ್ತು ಎಂದ ಕುಸುಮಾ ಹೇಳಿದರು.
Karnataka Assembly Election 2023 Live: ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೆಚ್.ಡಿ.ರೇವಣ್ಣ ಲೇವಡಿ
ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೆಚ್.ಡಿ.ರೇವಣ್ಣ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ನವರು ತಮ್ಮ ಡಕೋಟಾ ಬಸ್ ಹತ್ತಲಿ ಅಂತಾ ಕಾಯುತ್ತಿದ್ದಾರೆ. ಪಾಪ ಶಿವಲಿಂಗೇಗೌಡ ಆ ಬಸ್ ಹತ್ತಿದ್ದಾರೆ, ಎಲ್ಲಿ ನಿಲ್ಲುತ್ತೋ ಗೊತ್ತಿಲ್ಲ. ಅರಸೀಕೆರೆ ಶಾಸಕರಾಗಿದ್ದ ಶಿವಲಿಂಗೌಡರನ್ನು 15 ವರ್ಷ ಸಾಕಿದ್ದೇನೆ. ಈಗ ಶಿರಸಿಗೆ ಹೋಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀನೇ ಸಾಕಿದಾ ಗಿಣಿ ಎಂದು ಅರಸೀಕೆರೆ ಕ್ಷೇತ್ರ ಜನ ಹೇಳುತ್ತಿದ್ದಾರೆ. ದೇವರೇ ಶಿಕ್ಷೆ ಕೊಡುವ ಕಾಲ ಬರುತ್ತೆ ಎಂದು ಹಾಸನದಲ್ಲಿ ಶಿವಲಿಂಗೇಗೌಡ ವಿರುದ್ಧ ಹೆಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದರು.
Karnataka Assembly Election 2023 Live: ಆಟೋಗಳ ಮೇಲೆ ರಾಜಕಾರಣಿಗಳ ಭಾವಚಿತ್ರ, ಪಕ್ಷಗಳ ಚಿಹ್ನೆ ಇದ್ರೆ ದಂಡ
ನೀತಿ ಸಂಹಿತೆ ಹಿನ್ನೆಲೆ ಬೆಂಗಳೂರಿನಲ್ಲಿ ಆರ್ಟಿಒ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಪಕ್ಷದ ಚಿಹ್ನೆ, ರಾಜಕಾರಣಿ ಫೋಟೋ ಅಂಟಿಸಿರುವ ಆಟೋಗಳ ಮೇಲೆ ನಿಗಾ ಇಡಲಾಗುತ್ತಿದೆ. ಆಟೋಗಳ ಮೇಲೆ ರಾಜಕಾರಣಿಗಳ ಭಾವಚಿತ್ರ, ಪಕ್ಷಗಳ ಚಿಹ್ನೆ ಇದ್ರೆ ದಂಡ ಹಾಕಲಾಗುತ್ತಿದೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆಟೋ ಮೇಲೆ ರಾಜಕೀಯ ಪ್ರೇರಿತ ಫೋಟೋ, ಚಿಹ್ನೆ ಇದ್ದರೆ ₹5,000 ದಂಡ ವಿಧಿಸುತ್ತಿದ್ದಾರೆ. JDS ಪರ ಪ್ರಚಾರ ಮಾಡುವಂತೆ ಕವರ್ ಅಂಟಿಸಿದ್ದ ಆಟೋ ಚಾಲಕನಿಗೆ RTO ಅಧಿಕಾರಿಗಳು 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಹಾಗೂ ಅಧಿಕಾರಿಗಳು ಪರ್ಮಿಟ್ ಉಲ್ಲಂಘನೆ ಕೇಸ್ ದಾಖಲು ಮಾಡುತ್ತಿದ್ದಾರೆ. ಕೇಸ್ ಹಾಕಿ 2 ಸಾವಿರ ರೂಪಾಯಿ ಫೈನ್ ಹಾಕುತ್ತಿದ್ದಾರೆ. ಸದ್ಯ ಎರಡು ಆಟೋಗಳಿಗೆ ದಂಡ ಹಾಕಲಾಗಿದೆ.
Karnataka Assembly Election 2023 Live: ಮೂಡಿಗೆರೆ ಕುಮಾರಸ್ವಾಮಿ ವಿರುದ್ಧ ಮುಂದುವರೆದ ಕಾರ್ಯಕರ್ತರ ಆಕ್ರೋಶ
ಚಿಕ್ಕಮಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ ಮುಂದುವರಿದಿದೆ. ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ ನಡ್ಡಾ, ಶೋಭಾ ಕರಂದ್ಲಾಜೆ ಅವರಿಗೆ ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ ಅಂತ ಪತ್ರ ಬರೆದು ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. 10 ಪಾಯಿಂಟ್ ಗಳ ಮಾಹಿತಿಯುಳ್ಳ ಪತ್ರವನ್ನ ಬಿಜೆಪಿ ನಾಯಕರಿಗೆ ಮೇಲ್ ಮಾಡಿದ್ದಾರೆ.
Karnataka Assembly Election 2023 Live: ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ -ಅನಿತಾ ಕುಮಾರಸ್ವಾಮಿ ಟ್ವೀಟ್
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ಅನಿತಾ ಕುಮಾರಸ್ವಾಮಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. 1/7
— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) April 4, 2023
Karnataka Assembly Election 2023 Live: ಅಕ್ರಮವಾಗಿ ಸಾಗಿಸುತ್ತಿದ್ದ 2 ಲಕ್ಷ 36 ಸಾವಿರ ರೂಪಾಯಿ ಜಪ್ತಿ
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಕೇರಿ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಲಕ್ಷ 36 ಸಾವಿರ ರೂಪಾಯಿ ಜಪ್ತಿ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಿಂದ ಹುಲಕೋಟಿ ಗ್ರಾಮಕ್ಕೆ ಬೈಕ್ ಮೇಲೆ ಸಾಗಿಸುತ್ತಿದ್ದ 1 ಲಕ್ಷ 50 ಸಾವಿರ ರೂಪಾಯಿ ಜಪ್ತಿ ಮಾಡಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಕಾರಿನಲ್ಲಿ ಸಾಗಿಸುವಾಗ 86 ಸಾವಿರ ವಶಕ್ಕೆ ಪಡೆಯಲಾಗಿದೆ. ಮುಂಡರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ದಾಖಲು ದಾಖಲಾಗಿದೆ.
Karnataka Assembly Election 2023 Live: ಆದಾಪುರ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ
ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರ ವ್ಯಾಪ್ತಿಯ ಆದಾಪುರ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. ಆದಾಪುರ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯ ಕಟ್ಟಡ ಇಲ್ಲ. ಬಹಳಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಆಗಿಲ್ಲ. ಹೀಗಾಗಿ ಚುನಾವಣೆ ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಕೊಪ್ಪಳ ಜಿಲ್ಲಾ ಚುನಾವಣಾ ಅಧಿಕಾರಿಗೆ ಪತ್ರ ಬರೆದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
Karnataka Assembly Election 2023 Live: ದೆಹಲಿಯಲ್ಲಿ ಮಾಧ್ಯಮಗಳ ಮೇಲೆ ಹರಿಹಾಯ್ದ ಶಾಸಕ ಭೈರತಿ ಸುರೇಶ್
ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಶಾಸಕ ಭೈರತಿ ಸುರೇಶ್ ಹರಿಹಾಯ್ದರು. ಪತ್ರಕರ್ತರ ಮೇಲೆ ಹಲ್ಲೆ ನಡೆಸಲು ಮುಂದಾದರು. ಪರಿಸ್ಥಿತಿ ನೋಡಿ ಸುರೇಶ್ಗೆ ಸುಮ್ನಿರಯ್ಯ ಎಂದು ಸಿದ್ದರಾಮಯ್ಯ ಗದರಿದರು.
Karnataka Assembly Election 2023 Live: ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಯಾದಗಿರಿಯ ಗುರುಮಠಕಲ್ ತಾಲೂಕಿನ ಯದ್ಲಾಪುರ ಗ್ರಾಮದಲ್ಲಿ ನಿನ್ನೆ (ಏಪ್ರಿಲ್ 03) ನಡೆದ ಮೌಲಾಲಿ ದರ್ಗಾ ಜಾತ್ರೆಯಲ್ಲಿ ಗ್ರಾಮಸ್ಥರು ಮಾಂಸದಡಿಗೆ ಮಾಡಿದ್ದರು. ಜಾತ್ರೆಗೆ ಕಾಂಗ್ರೆಸ್ ನ ನಾಯಕ ಬಾಬುರಾವ್ ಚಿಂಚನಸೂರ್ ಗೆ ಆಹ್ವಾನ ನೀಡಿದ್ರು. ಚಿಂಚನಸೂರ್ ಜಾತ್ರೆ ಬಂದಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರು ಅಡ್ಡಿ ಪಡಿಸಿದ್ದರು. ಚುನಾವಣೆ ಇದೆ ರಾಜಕೀಯ ಮುಖಂಡರಾಗಿ ಜಾತ್ರೆಗೆ ಯಾಕೆ ಬಂದ್ರಿ ಎಂದು ತಗಾದೆ ತೆಗೆದಿದ್ದರು. ಇದೇ ಕಾರಣಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
Karnataka Assembly Election 2023 Live: ಮುಸ್ಲಿಂ ಮುಖಂಡರನ್ನ ಜೆಡಿಎಸ್ಗೆ ಸೆಳೆಯಲು ಮುಂದಾದ ನಿಖಿಲ್
ಮುಸ್ಲಿಂ ಮುಖಂಡರನ್ನ ಜೆಡಿಎಸ್ಗೆ ಸೆಳೆಯಲು ನಿಖಿಲ್ ಕುಮಾರಸ್ವಾಮಿ ಮುಂದಾಗಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ನವರು ಅಪಪ್ರಚಾರ ಮಾಡಿದ್ರು. ಜೆಡಿಎಸ್ ನ ಮೇಲೆ ಸುಳ್ಳಿನ ಆರೋಪ ಮಾಡಿದ್ರು. ಬಿಜೆಪಿಯ ಬಿ ಟೀಂ ಎಂದು ಬಿಂಬಿಸಿದ್ರು. ಹೀಗಾಗಿ ಇಡೀ ಮುಸ್ಲಿಂ ಸಮುದಾಯ ಕಾಂಗ್ರೆಸ್ ಜೊತೆ ನಿಂತಿಕೊಳ್ತು. ರಾಮನಗರದಲ್ಲೂ ಅದೇ ಪರಿಸ್ಥಿತಿ ನಿರ್ಮಾಣ ಆಯ್ತು. ಈ ಬಾರಿ ಬಿಜೆಪಿ ಗೊಂದಲ ಸೃಷ್ಟಿ ಮಾಡಿತು. ಮುಸ್ಲಿಂ ಸಮುದಾಯದ ಜೊತೆ ನಿಂತುಕೊಂಡಿದ್ದು ಕುಮಾರಸ್ವಾಮಿ. ಅದರ ಅರಿವು ಇವತ್ತು ಮುಸ್ಲಿಂ ಸಮುದಾಯದರಿಗೆ ಇದೆ. ಈ ಬಾರಿ ಜೆಡಿಎಸ್ ಜೊತೆ ಮುಸ್ಲಿಂ ಸಮುದಾಯ ಇದೆ. ಯಾವುದೇ ಬೇಡಿಕೆ ಇಲ್ಲದೆ ಈ ಬಾರಿ ಹಲವು ಮುಸ್ಲಿಂ ಮುಖಂಡರು ಜೆಡಿಎಸ್ ಬರುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ರಾಮನಗರದಲ್ಲಿ ಹೇಳಿಕೆ ನೀಡಿದರು.
Karnataka Assembly Election 2023 Live: 33 ಮಂದಿ ಲಿಂಗಾಯತ ನಾಯಕರಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ಗೆ ಒತ್ತಡ
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ವೀರಶೈವ, ಲಿಂಗಾಯತರಿಗೆ ಹೆಚ್ಚು ಆದ್ಯತೆ ನೀಡುವಂತೆ ಲಿಂಗಾಯತ ನಾಯಕರು ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ. 33 ಮಂದಿ ಲಿಂಗಾಯತ ನಾಯಕರಿಗೆ ಟಿಕೆಟ್ ನೀಡುವಂತೆ ಒತ್ತಡ ಹಾಕಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿ ಮಾಡಿ ವೀರಶೈವ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.
Karnataka Assembly Election 2023 Live: ಪ್ರಚಾರಕ್ಕೆ ಹೋಗಿದ್ದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿಗೆ ಗ್ರಾಮಸ್ಥರ ತರಾಟೆ
ಪ್ರಚಾರಕ್ಕೆ ಹೋಗಿದ್ದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿಗೆ ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡರು. ಚುನಾವಣಾ ಪ್ರಚಾರಕ್ಕೆ ಹೋಗಿದ್ದಾಗ ಶಾಸಕರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಸಮಸ್ಯೆಗೆ ಸ್ಪಂದಿಸಿಲ್ಲ ಎಂದು ಕ್ಲಾಸ್ ತೆಗೆದುಕೊಂಡರು. ಬಳಿಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ ಗ್ರಾಮಸ್ಥರನ್ನು ಸಮಾಧಾನಪಡಿಸಿದರು.
Karnataka Assembly Election 2023 Live: ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ಆರಂಭ
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ಆರಂಭವಾಗಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಇಸಿ ಪದಾಧಿಕಾರಿಗಳು ಹಾಗೂ ರಾಜ್ಯದ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಬಾಕಿ ಉಳಿದಿರುವ 100 ಕ್ಷೇತ್ರಗಳ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ.
Karnataka Assembly Election 2023 Live: ನನ್ನ ಹೇಳಿಕೆಯನ್ನು ತಿರುಚಲಾಗಿದೆ -ಸಿದ್ದರಾಮಯ್ಯ
ಖಾಸಗಿ ಮಾಧ್ಯಮದಲ್ಲಿ ಸಿಎಂ ಅಭ್ಯರ್ಥಿ ಎಂದು ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ದೆಹಲಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಸಿಎಂ ಆಯ್ಕೆ ಆಗಲಿದೆ ಎಂದರು.
Karnataka Assembly Election 2023 Live: ಡಿಕೆ ಶಿವಕುಮಾರ್,ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ, ಅದು ನನಸಾಗಲ್ಲ -ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಏನೋ ಭಯಸಿದ್ದಾರೆ ಜನರ ನಾಡಿಮಿಡಿತ ಏನಿದೆಯೋ? ಚುನಾವಣಾ ಫಲಿತಾಂಶ ಬಂದ ಬಳಿಕ ಜನರ ನಾಡಿಮಿಡಿತ ಗೊತ್ತಾಗುತ್ತೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜನರ ಬೆಂಬಲ ಇದ್ದರೆ ಮಾತ್ರ ಶಾಸಕರಾಗುವುದು, ಇಲ್ಲಂದ್ರೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ. ಡಿಕೆಶಿ ಕೂಡ ಹೋದ ಕಡೆ ನನಗೆ ಆಶೀರ್ವಾದ ಮಾಡಿ ಅಂತಿದ್ದಾರೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಕನಸು ಕಾಣುತ್ತಿದ್ದಾರೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ಕನಸು ನನಸಾಗಲ್ಲ ಎಂದರು.
Karnataka Assembly Election 2023 Live: ಏಪ್ರಿಲ್ 7 ಮತ್ತು 8ರಂದು ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ
ವಿಧಾನಸಭೆ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಏಪ್ರಿಲ್ 7 ಮತ್ತು 8ರಂದು ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸಂಭಾವ್ಯ ಪಟ್ಟಿ ರವಾನೆಯಾದ ಬಳಿಕ ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಚುನಾವಣಾ ಸಮಿತಿ ಸಂಭಾವ್ಯ ಪಟ್ಟಿ ರವಾನೆ ಮಾಡಲಿದೆ.
Karnataka Assembly Election 2023 Live: ನಾನು ಕಿಂಗ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ -ಹೆಚ್ಡಿ ಕುಮಾರಸ್ವಾಮಿ
ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಯಕೆ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ನಾನು ಕಿಂಗ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಬಾರಿ ನಾವು 100-120 ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್ ಹಾಗೂ ಬಿಜೆಪಿ 60ರಿಂದ 70 ಸ್ಥಾನ ದಾಟುವುದಿಲ್ಲ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಗಳ ಕೋಟಾ ದೊಡ್ಡದಿದೆ. ಸಿದ್ದರಾಮಯ್ಯ ನಾನೇ ಸಿಎಂ ಆಗ್ತೀನಿ ಅಂತಾ ಅನ್ಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದರು.
Karnataka Assembly Election 2023 Live: ಮತದಾರರನ್ನು ಸೆಳೆಯಲು ಹಂಚಲಾಗಿದ್ದ ಕುಕ್ಕರ್ ಸ್ಫೋಟ
ಮತದಾರರನ್ನು ಸೆಳೆಯಲು ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಶಾನುವಳ್ಳಿಯ ದೇವರಾಜ್ ಎಂಬುವರ ಮನೆಯಲ್ಲಿ ತರಕಾರಿ ಬೇಯಿಸಲು ಇಟ್ಟಿದ್ದಾಗ ಕುಕ್ಕರ್ ಸ್ಫೋಟಗೊಂಡಿದೆ. ತಾಯಿ, ಮಗು ಹೊರಗಡೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಕುಕ್ಕರ್ ಹಂಚಿದ್ದ ಆರೋಪ ಕೇಳಿ ಬಂದಿದ್ದು ಕಳಪೆ ಕುಕ್ಕರ್ ನೀಡಿ ಜನರ ಜೀವದ ಜೊತೆ ಚಲ್ಲಾಟ ಆಡ್ತಿದ್ದಾರೆಂದು ಜನ ಕಿಡಿಕಾರಿದ್ದಾರೆ.
Karnataka Assembly Election 2023 Live: ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ, ಅನೇಕರಿಂದ ಬಿಜೆಪಿ ಸೇರ್ಪಡೆ
ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದ್ದು ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ. ಅಪ್ಪಾಜಿ ಗೌಡ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅಪ್ಪಾಜಿ ಗೌಡ ಕನಕಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಮುಖಂಡ ಕೃಷ್ಣಾ ನಾಯಕ್, ಹೂವಿನಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಮೇಶ್ವರಪ್ಪ ಮತ್ತು ವಾಲ್ಮೀಕಿ ಸಮುದಾಯದ ಮುಖಂಡ ಕೋಟೆಪ್ಪ ಕೂಡ ಬಿಜೆಪಿ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಶ್ರೀರಾಮುಲು ಸಮ್ಮುಖದಲ್ಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಕೂಡಾ ಬಿಜೆಪಿ ಸೇರಿದರು.
Karnataka Assembly Election 2023 Live: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು
ರೋಡ್ಶೋ ವೇಳೆ ಕಲಾವಿದರತ್ತ ಡಿಕೆ ಶಿವಕುಮಾರ್ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾ.28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ಡಿಕೆಶಿ ಹಣ ಎರಚಿದ್ದರಉ. ಚುನಾವಣಾ ಅಧಿಕಾರಿ JMFC ಕೋರ್ಟ್ನಲ್ಲಿ ದೂರು ದಾಖಲಿಸಿದ್ದರು. ದೂರು ಬಳಿಕ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿತ್ತು. NCR ಬಳಿಕ ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದ್ದು ನ್ಯಾಯಾಲಯದ ಆದೇಶದಂತೆ ನಿನ್ನೆ ಡಿಕೆಶಿ ವಿರುದ್ಧ FIR ದಾಖಲಾಗಿದೆ.
Karnataka Assembly Election 2023 Live: ಹಾಸನ ರಾಜಕಾರಣವೇ ಬೇರೆ, ನನ್ನ ಪತ್ನಿ ರಾಜಕಾರಣವೇ ಬೇರೆ -ಹೆಚ್ಡಿ ಕುಮಾರಸ್ವಾಮಿ
ಜೆಡಿಎಸ್ ಅಭ್ಯರ್ಥಿಗಳ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಹಾಸನ ಕ್ಷೇತ್ರದ JDS ಟಿಕೆಟ್ ವಿಚಾರವಾಗಿಯೂ ಗೊಂದಲವಿಲ್ಲ. ಬೆಂಗಳೂರಿಗೆ ಬರುವುದು ತಡವಾಯ್ತು, ಹಾಗಾಗಿ ಪಟ್ಟಿ ರಿಲೀಸ್ ಆಗಿಲ್ಲ. ಅನಿತಾ ಕುಮಾರಸ್ವಾಮಿ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಪಕ್ಷದ ಗೌರವ ಉಳಿಸಲು ಕಳೆದ ಚುನಾವಣೆಯಲ್ಲಿ ಅನಿತಾ ಸ್ಪರ್ಧೆ ಮಾಡಿದ್ದರು. ಹಾಸನ ರಾಜಕಾರಣವೇ ಬೇರೆ, ನನ್ನ ಪತ್ನಿ ರಾಜಕಾರಣವೇ ಬೇರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
Karnataka Assembly Election 2023 Live: ಕಗ್ಗಂಟಾದ ಕೊಳ್ಳೇಗಾಲ ಕಾಂಗ್ರೆಸ್ ಟಿಕೆಟ್ ವಿಚಾರ
ಕೊಳ್ಳೇಗಾಲ ಕಾಂಗ್ರೆಸ್ ಟಿಕೆಟ್ ವಿಚಾರ ದಿನೇ ದಿನೇ ಕಗ್ಗಂಟಾಗುತ್ತಿದೆ. ಕೊಳ್ಳೇಗಾಲ ಕ್ಷೇತ್ರದ ಕೈ ಟಿಕೆಟ್‌ಗೆ ನಾಲ್ವರು ಮಾಜಿ ಶಾಸಕರ ಪೈಪೋಟಿ. ಕೊಳ್ಳೇಗಾಲ ಶಾಸಕ ಎನ್ ಮಹೇಶ್ ವಿರುದ್ದ ಸ್ಪರ್ಧೆಗೆ ನಾಲ್ವರು ಮಾಜಿ ಶಾಸಕರ ಕಸರತ್ತು. ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಸ್.ಬಾಲರಾಜು, ಎಸ್.ಜಯಣ್ಣ ಹಾಗು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಜಿ.ಎನ್‌ನಂಜುಂಡಸ್ವಾಮಿ ಟಿಕೆಟ್ ಆಕಾಂಕ್ಷಿಗಳು.
Karnataka Assembly Election 2023 Live: 1.47 ಕೋಟಿ ರೂ. ಮೌಲ್ಯದ ಚಿನ್ನದ ಲೇಪನದ ಆಭರಣಗಳು ಜಪ್ತಿ
ಹಲಸೂರು ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮತದಾರರಿಗೆ ಹಂಚಲು ತಂದಿದ್ದ 1.47 ಕೋಟಿ ರೂ. ಮೌಲ್ಯದ ಚಿನ್ನದ ಲೇಪನದ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಹಾಗೇ ಪಂಕಜ್ ಗೌಡ, ಭಗವಾನ್ ಸಿಂಗ್, ವಡಿವೇಲು ಎಂಬ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಚುನಾವಣಾಧಿಕಾರಿ ಮುನಿಯ ನಾಯಕ ದೂರಿನ ಮೇರೆಗೆ ದಾಳಿ ನಡೆಸಿ ಚಿನ್ನದ ಲೇಪನದ ಆಭರಣಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
Karnataka Assembly Election 2023 Live: ಪಿಸ್ತೂಲ್, ಬಂದೂಕು ಇಟ್ಟುಕೊಳ್ಳಲು ವಿನಾಯಿತಿ ಕೋರಿ 42 ಜನರಿಂದ ಅರ್ಜಿ
ಲೈಸೆನ್ಸ್ ಹೊಂದಿರುವ ಪಿಸ್ತೂಲ್, ರಿವಾಲ್ವರ್, ಬಂದೂಕು ಜಮಾ ಹಿನ್ನೆಲೆ ಪಿಸ್ತೂಲ್, ಬಂದೂಕು ಇಟ್ಟುಕೊಳ್ಳಲು ವಿನಾಯಿತಿ ಕೋರಿ ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ಗೆ 42 ಜನರು ಅರ್ಜಿ ಸಲ್ಲಿಸಿದ್ದಾರೆ. ರಾಜಕಾರಣಿಗಳು, ಬ್ಯಾಂಕ್ ಮ್ಯಾನೇಜರ್, ಉದ್ಯಮಿಗಳಿಂದ ಮನವಿ ಸಲ್ಲಿಸಲಾಗಿದೆ. ಆತ್ಮರಕ್ಷಣೆ, ವ್ಯಾಪಾರ ವಹಿವಾಟು ದೃಷ್ಟಿಯಿಂದ ವಿನಾಯಿತಿಗೆ ಮನವಿ ಮಾಡಿದ್ದಾರೆ. ಮೈಸೂರಿನ ದೇವರಾಜ ವಿಭಾಗದಿಂದ 13, ಕೃಷ್ಣರಾಜ ವಿಭಾಗದಿಂದ 8, ನರಸಿಂಹರಾಜ ವಿಭಾಗದಿಂದ 13, ವಿಜಯನಗರ ವಿಭಾಗದಿಂದ 8 ಸೇರಿಸಿ ಒಟ್ಟು 42 ಜನರು ವಿನಾಯತಿಗೆ ಮನವಿ ಸಲ್ಲಿಸಿದ್ದಾರೆ.
ನೀತಿ ಸಂಹಿತೆ ಜಾರಿ ಹಿನ್ನೆಲೆ ಶಸ್ತ್ರಾಸ್ತ್ರ ಬಳಕೆ ನಿಷೇಧ: ವಿನಾಯಿತಿ ನೀಡುವಂತೆ ಮೈಸೂರು ಪೊಲೀಸ್ ಕಮಿಷನರ್ಗೆ ಪರವಾನಿಗೆದಾರರ ಮನವಿ#mysore #ModelCodeOfConduct #KarnatakaElection2023 https://t.co/1ccQuZ1PD5
— TV9 Kannada (@tv9kannada) April 4, 2023
Karnataka Assembly Election 2023 Live: ನೀತಿ ಸಂಹಿತೆ ಉಲ್ಲಂಘನೆ, ಕಲಬುರಗಿ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ದ ದೂರು
ನೀತಿ ಸಂಹಿತೆ ಉಲ್ಲಂಘಿಸಿದ್ದ ಕಲಬುರಗಿ ಜಿಲ್ಲಾ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ದ ದೂರು ದಾಖಲಾಗಿದೆ. ಚುನಾವಣಾ ಅಧಿಕಾರಿಗಳು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಕಲಬುರಗಿ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೆವಾಡಗಿ ಸೇರಿ ಐವರ ವಿರುದ್ದ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೇ ಬಿಜೆಪಿ ಪಕ್ಷದ ಚಿಹ್ನೆ ಮತ್ತು ಜಿಲ್ಲಾಧ್ಯಕ್ಷನ ಹೆಸರಲ್ಲಿ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.
Karnataka Assembly Election 2023 Live: ವರುಣ ವಿಧಾನಸಭಾ ಕ್ಷೇತ್ರದಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ
ವರುಣ ವಿಧಾನಸಭಾ ಕ್ಷೇತ್ರದಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದ್ದು ಪ್ರಚಾರದ ವೇಳೆ ಯತೀಂದ್ರ ಸಿದ್ದರಾಮಯ್ಯ ಆತಂಕ ಹೊರಹಾಕಿದ್ದಾರೆ. ವರುಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಶಾಸಕ ಡಾ.ಯತೀಂದ್ರ ಮಾತನಾಡಿದ್ದು, ಸಿದ್ದರಾಮಯ್ಯ ಎಲ್ಲೇ ನಿಂತರು ಸೋಲಿಸಲು ಎಲ್ಲರೂ ಒಂದಾಗುತ್ತಾರೆ. ಸಿದ್ದರಾಮಯ್ಯ ಸೋಲಿಸಲು ಬಿಜೆಪಿ, ಜೆಡಿಎಸ್ನವರು ಒಂದಾಗುತ್ತಾರೆ. ಒಟ್ಟಾಗಿ ಸೇರಿ ಷಡ್ಯಂತ್ರ ರೂಪಿಸುತ್ತಾರೆ, ಹಣದ ಹೊಳೆ ಹರಿಸುತ್ತಾರೆ. ತಂದೆಗೆ 76 ವರ್ಷ ಆಗಿದೆ, ಇದು ಸಿದ್ದರಾಮಯ್ಯಗೆ ಕೊನೆಯ ಚುನಾವಣೆ. ತಂದೆಯವರು ಗೆದ್ದು ಗೌರವಯುತವಾಗಿ ನಿವೃತ್ತಿ ಪಡೆಯಬೇಕು ಎಂದು ಚುನಾವಣೆಯಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಲು ಕಾರ್ಯಕರ್ತರಿಗೆ ಶಾಸಕ ಡಾ.ಯತೀಂದ್ರ ಕರೆ ಕೊಟ್ಟಿದ್ದಾರೆ.
Karnataka Assembly Election 2023 Live: ಪಿಎಸ್ಐ ನೇಮಕಾತಿ ಅಕ್ರಮದ ಕಿಂಗ್ ಪಿನ್ಗೆ ಮಣೆ ಹಾಕಿದ ಜನಾರ್ದನ ರೆಡ್ಡಿ
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದ ಪ್ರಮುಖ ಕಿಂಗ್ ಪಿನ್ ರುದ್ರಗೌಡ ಪಾಟೀಲ್ಗೆ ಟಿಕೆಟ್ ನೀಡಲು ಜನಾರ್ಧನ ರೆಡ್ಡಿ ಮುಂದಾಗಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಟಿಕೆಟ್ ನೀಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸದ್ಯ ನೇಮಕಾತಿ ಅಕ್ರಮದಲ್ಲಿ ರುದ್ರಗೌಡ ಪಾಟೀಲ್ ಜೈಲಿನಲ್ಲಿದ್ದಾರೆ. ಏಪ್ರಿಲ್ ಹತ್ತರಂದು ಅಫಜಲಪುರಕ್ಕೆ ಜನಾರ್ದನ ರೆಡ್ಡಿ ಆಗಮಿಸುತ್ತಿದ್ದಾರೆ. ಅಂದು ರುದ್ರಗೌಡ ಪಾಟೀಲ್ ಸಹೋದರ ಮತ್ತು ಬೆಂಬಲಿಗರು ಕೆಆರ್ಪಿಪಿ ಪಕ್ಷ ಸೇರಲಿದ್ದಾರೆ. ಜಾಮೀನು ಸಿಗದೇ ಇದ್ರೆ ಜೈಲಿನಲ್ಲಿ ಇದ್ದೇ ಸ್ಪರ್ಧೆ ಮಾಡಲು ರುದ್ರಗೌಡ ಪಾಟೀಲ್ ಚಿಂತಿಸಿದ್ದಾರೆ.
Karnataka Assembly Election 2023 Live: ಡಾ.ಅಪ್ಪಾಜಿ ಗೌಡ ಇಂದು ಬಿಜೆಪಿ ಸೇರ್ಪಡೆ
ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ.ಅಪ್ಪಾಜಿ ಗೌಡ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಬೆಳಗ್ಗೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸೇರ್ಪಡೆಯಾಗಲಿದ್ದಾರೆ. ಕನಕಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಲಿದ್ದಾರೆ. ಹಾಗೂ ಓರ್ವ ಮಾಜಿ ಶಾಸಕ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಕೂಡ ಬಿಜೆಪಿ ಸೇರಲಿದ್ದಾರೆ.
Karnataka Assembly Election 2023 Live: ಯಲಹಂಕದ ಖಾಸಗಿ ರೆಸಾರ್ಟ್‌ನಲ್ಲಿ ಬಿಜೆಪಿ ಸಭೆ
ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಬಿಜೆಪಿ ಸಭೆ ವಿಚಾರಕ್ಕೆ ಸಂಬಂಧಿಸಿ ನಾಳೆ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆಯ ಸ್ಥಳ ಶಿಫ್ಟ್ ಮಾಡಲಾಗುತ್ತಿದೆ. ಬಿಜೆಪಿ ರಾಜ್ಯ ಕಚೇರಿಯಿಂದ ಯಲಹಂಕ ರೆಸಾರ್ಟ್‌ಗೆ ಸಭೆ ಶಿಫ್ಟ್ ಆಗಲಿದೆ.
Published On - Apr 04,2023 9:49 AM