Karnataka Polls: ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ

ಸಮೀಪಿಸುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಅದರಂತೆ ಟಿಕೆಟ್ ಘೋಷಣೆಯಾದ 124 ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಲಿದೆ.

Karnataka Polls: ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ
Follow us
Rakesh Nayak Manchi
|

Updated on: Mar 26, 2023 | 11:49 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಈಗಾಗಲೇ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಟಿಕೆಟ್ ಘೋಷಣೆಯಾದ 124 ಕೈ ಅಭ್ಯರ್ಥಿಗಳಿಗೆ ಬುಲಾವ್ ನೀಡಿದ ಸ್ಕ್ರೀನಿಂಗ್ ಕಮಿಟಿ (Congress Screening Committee) ನಾಳೆ (ಮಾರ್ಚ್ 27) ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದೆ. ಬೆಂಗಳೂರು ಅಥವಾ ಹೊರವಲಯದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala), ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಭಾಗಿಯಾಗಲಿದ್ದಾರೆ.

ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಈಗಾಗಲೇ ಬಸ್ ಯಾತ್ರೆ, ಪ್ರಜಾಧ್ವನಿ ಯಾತ್ರೆ ಮೂಲಕ ಅಬ್ಬರದ ಪ್ರಚಾರ ನಡೆಸಿರುವ ಕಾಂಗ್ರೆಸ್, ಚುನಾವಣೆಗೆ ಕಣಕ್ಕಿಳಿಯುವ 224 ಕ್ಷೇತ್ರಗಳ ಪೈಕಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಅಂತಿಮಗೊಳಿಸಿದೆ. ಅದರಂತೆ ಚುನಾವಣೆ ಸಮೀಪದಲ್ಲಿ ಪ್ರಚಾರಕ್ಕೆ ಇನ್ನಷ್ಟು ವೇಗ ನೀಡಲು ನಾಳೆ ಕರೆದಿರುವ ಅಭ್ಯರ್ಥಿಗಳೊಂದಿಗಿನ ಸಭೆಯಲ್ಲಿ ಚುನಾವಣಾ ಪ್ರಚಾರ ಹಾಗೂ ರಣತಂತ್ರಗಳ ಬಗ್ಗೆ ಸ್ಕ್ರೀನಿಂಗ್ ಕಮಿಟಿ ಚರ್ಚಿಸಲಿದೆ.

ಇದನ್ನೂ ಓದಿ: ಈಗ ಗ್ಯಾರಂಟಿ ಕೊಡುವ ಕಾಂಗ್ರೆಸ್ಸಿಗರು ಅಧಿಕಾರದಲ್ಲಿದ್ದಾಗ ಕಡುಬು ತಿಂತಾ ಇದ್ದರಾ; ಬಿಎಸ್​ವೈ ಪ್ರಶ್ನೆ

ಮೊದಲ ಪಟ್ಟಿಯಲ್ಲಿ ಲಿಂಗಾಯತ ನಾಯಕರದ್ದೇ ಸಿಂಹಪಾಲಾಗಿದ್ದು, 22 ಎಸ್ ಸಿ, 10 ಎಸ್ ಟಿ ಅಭ್ಯರ್ಥಿಗಳಿಗೆ ಟಿಕೆಟ್​ ನೀಡಲಾಗಿದೆ. ತೀರ್ವ ಕೂತೂಹಲ ಮೂಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರ ಫಿಕ್ಸ್ ಆಗಿದ್ದು, ಕೋಲಾರದಿಂದಲೂ ಸ್ಪರ್ಧಿಸಲು ಚಿಂತಿಸುತ್ತಿದ್ದಾರೆ. ಹೈಕಮಾಂಡ್ ಒಪ್ಪಿಗೆ ಸೂಚಿಸಿದರೆ ಕೋಲಾರದಿಂದಲೂ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಅವರೇ ಹೇಳಿಕೆ ನೀಡಿದ್ದಾರೆ. ಇನ್ನುಳಿದಂತೆ, ಕಾಂಗ್ರೆಸ್​ನ ಪ್ರಬಲ ನಾಯಕರಾದ ಡಿ.ಕೆ ಶಿವಕುಮಾರ್​ ಅವರಿಗೆ ಕನಕಪುರ, ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕ್ರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್​ ಅವರಿಗೆ ಬಬಲೇಶ್ವರ ಟಿಕೆಟ್ ನೀಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಮತ್ತೆ ಸಿಇಸಿ ಸಭೆ ನಡೆಸುತ್ತಿದೆ. ಸದ್ಯ ಒಂದೇ ಹೆಸರು ಇರುವ ಕ್ಷೇತ್ರಗಳ ಪಟ್ಟಿ ಅಂತಿಮಗೊಳಿಸಲಾಗಿದೆ. ಟಿಕೆಟ್ ಘೋಷಣೆಗೂ ಮುನ್ನ 50ಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಲಾಬಿ ನಡೆಸಲು ದೆಹಲಿಗೆ ತೆರಳಿದ್ದರು. ಲಿಂಗಾಯತ ಸಮುದಾಯಕ್ಕೆ 68 ಸ್ಥಾನಗಳನ್ನು ನೀಡಬೇಕೆಂದು ಒತ್ತಾಯಿಸಿದ್ದರು. ಇದರಲ್ಲಿ ವಿವಾದಿತ ಚಿಕ್ಕಪೇಟೆ ಮತ್ತು ರಾಜಾಜಿನಗರ ಕ್ಷೇತ್ರವೂ ಸೇರಿವೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ