AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election: ಮೋದಿಯವರ ಅಭಿವೃದ್ಧಿ ಕೆಲಸ ನೋಡಿ ಬಿಜೆಪಿ ಸೇರಿದ್ದೇನೆ: ಎಟಿ ರಾಮಸ್ವಾಮಿ

ಎಟಿ ರಾಮಸ್ವಾಮಿ ಪಕ್ಷ ಸೇರ್ಪಡೆಯಿಂದ ಬಿಜೆಪಿಗೆ ಶಕ್ತಿ ಸಿಗಲಿದೆ ಎಂದು ದೆಹಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್​ ಹೇಳಿದ್ದಾರೆ. ರಾಮಸ್ವಾಮಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮಾತನಾಡಿ, ಅವರು ಸೂಕ್ತವಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದರು.

Karnataka Election: ಮೋದಿಯವರ ಅಭಿವೃದ್ಧಿ ಕೆಲಸ ನೋಡಿ ಬಿಜೆಪಿ ಸೇರಿದ್ದೇನೆ: ಎಟಿ ರಾಮಸ್ವಾಮಿ
ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಸಮ್ಮುಖದಲ್ಲಿ ಬಿಜೆಪಿ ಸೇರಿದ ಜೆಡಿಎಸ್ ಮಾಜಿ ಶಾಸಕ ಎಟಿ ರಾಮಸ್ವಾಮಿ
Rakesh Nayak Manchi
|

Updated on:Apr 01, 2023 | 5:08 PM

Share

ದೆಹಲಿ: ಮಾಜಿ ಶಾಸಕ ಎಟಿ ರಾಮಸ್ವಾಮಿ (AT Ramaswamy) ಪಕ್ಷ ಸೇರ್ಪಡೆಯಾಗಿರುವುದು ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನ ಜಿಲ್ಲೆಯಲ್ಲಿ ಪ್ರಬಲ ನಾಯಕರ ಕೊರತೆಯನ್ನು ಎದುರಿಸುತ್ತಿದ್ದ ಬಿಜೆಪಿಗೆ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮಯದಲ್ಲಿ ಪ್ಲಸ್ ಪಾಯಿಂಟ್ ಆಗಿ ಪರಿಣಮಿಸಿದೆ. ನಿನ್ನೆಯಷ್ಟೇ (ಮಾರ್ಚ್ 31) ಅರಕಲಗೂಡು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷದಿಂದ ಹೊರಬಂದಿದ್ದ ಎಟಿ ರಾಮಸ್ವಾಮಿ ಇಂದು (ಏಪ್ರಿಲ್ 1) ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Singh Thakur) ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಟಿ ರಾಮಸ್ವಾಮಿ, ನಾನು ಭೂಗಳ್ಳರ ವಿರುದ್ಧ ಹೋರಾಟ ಮಾಡಿದ್ದೇನೆ. ಸದ್ಯ ಯಾವುದೇ ಷರತ್ತು ಹಾಕದೆ ಬಿಜೆಪಿ ಸೇರಿದ್ದೇನೆ. ಅತ್ಯಂತ ಸಂತೋಷದಿಂದ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದರು.

ಯಾವುದೇ ಸ್ಥಾನದ ಆಕಾಂಕ್ಷಿ ನಾನು ಆಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕೆಲಸ ನೋಡಿ ಬಿಜೆಪಿ ಸೇರಿದ್ದೇನೆ. ಬಿಜೆಪಿಗೆ ಕಪ್ಪು ಚುಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ. ಇಂದು ಸಂಜೆ ಮತ್ತೆ ನಾಳೆ ಬೆಳಿಗ್ಗೆ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದೇನೆ. ನನಗೆ ಬಹಳ ಸಂತೋಷ ಆಗುತ್ತಿದೆ. ಯಾಕೆಂದರೆ ನಮ್ಮ ರಾಷ್ಟ್ರ ಭಾರತ ಇಡೀ ವಿಶ್ವದಲ್ಲಿ ದಾಪುಗಾಲು ಹಾಕುತ್ತಿದೆ. ಇದಕ್ಕೆ ಕಾರಣ ಮೋದಿ ಹಾಗೂ ಬಿಜೆಪಿ ಪಕ್ಷ. ಇಂದು ಅಂತಹ ಪಕ್ಷಕ್ಕೆ ನಾನು ಸೇರ್ಪಡೆಯಾಗಿದ್ದೇನೆ ಎಂದರು.

ಎ.ಟಿ.ರಾಮಸ್ವಾಮಿ ಪಕ್ಷ ಸೇರ್ಪಡೆಯಿಂದ ಬಿಜೆಪಿಗೆ ಶಕ್ತಿ: ಅನುರಾಗ್ ಸಿಂಗ್ ಠಾಕೂರ್

ಎಟಿ ರಾಮಸ್ವಾಮಿ ಪಕ್ಷ ಸೇರ್ಪಡೆಯಿಂದ ಬಿಜೆಪಿಗೆ ಶಕ್ತಿ ಸಿಗಲಿದೆ ಎಂದು ದೆಹಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್​ ಹೇಳಿದ್ದಾರೆ. ರಾಮಸ್ವಾಮಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮಾತನಾಡಿದ ಅವರು, ರಾಮಸ್ವಾಮಿ ದೇಶದ ಅತಿದೊಡ್ಡ ಪಕ್ಷ ಭಾರತೀಯ ಜನತಾ ಪಾರ್ಟಿ ಸೇರಿದ್ದಾರೆ. ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಹೆಚ್ಚು ಕೆಲಸ ಮಾಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಒಗ್ಗೂಡಿ ಕೆಲಸ ಮಾಡುತ್ತಿದ್ದೇವೆ. ಎ.ಟಿ.ರಾಮಸ್ವಾಮಿ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದರು.

ಇದನ್ನೂ ಓದಿ: Karnataka Assembly Election 2023: ಬಿಜೆಪಿ ಕೋರ್​ ಟೀಂ ಸಭೆ: ರಾಜಧಾನಿಯಲ್ಲಿ ಬೀಡುಬಿಟ್ಟ ಹಾಲಿ, ಮಾಜಿ ಶಾಸಕರು ಹಾಗೂ ಬೆಂಬಲಿಗರು

ಒಂದು ವರ್ಷದ ಹಿಂದೆ ಜೆಡಿಎಸ್ ನಾಯಕತ್ವದೊಂದಿಗೆ ವಿವಿಧ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದ ರಾಮಸ್ವಾಮಿ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಅಂತಿಮವಾಗಿ ಮಾರ್ಚ್ ತಿಂಗಳಾಂತ್ಯದಲ್ಲಿ ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೇಳಿಕೇಳಿ ಹಾಸನ ಜೆಡಿಎಸ್ ಭದ್ರಕೋಟೆ. ಏಳು ಅಭ್ಯರ್ಥಿಗಳ ಪೈಕಿ ಪಕ್ಷವು 2018 ರ ವಿಧಾನಸಭಾ ಚುನಾವಣೆಯಲ್ಲಿ ಆರು ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಹೊರತುಪಡಿಸಿ ಉಳಿದ ಏಕೈಕ ಶಾಸಕ ಬಿಜೆಪಿಯ ಪ್ರೀತಮ್ ಗೌಡ.

ರಾಮಸ್ವಾಮಿ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸದ್ಯ ಅವರ ಸೇರ್ಪಡೆಯೊಂದಿಗೆ ಬಿಜೆಪಿ ಹಾಸನದಲ್ಲಿ ಎರಡನೇ ಕ್ಷೇತ್ರದ (ಅರಕಲಗೂಡು) ಗೆಲುವಿನ ಮೇಲೆ ಮೇಲೆ ಕಣ್ಣಿಟ್ಟಿದೆ. ಮಾತ್ರವಲ್ಲದೆ, ಪ್ರಬಲ ನಾಯಕರ ಕೊರತೆಯನ್ನು ಎದುರಿಸುತ್ತಿದ್ದ ಬಿಜೆಪಿಗೆ ರಾಮಸ್ವಾಮಿ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಹಾಗೂ ಅರಕಲಗೂಡು ನೆರೆಯ ಕ್ಷೇತ್ರಗಳಲ್ಲಿ ಅವರ ಪ್ರಭಾವವನ್ನು ಬಳಸಲು ಯೋಜಿಸುತ್ತಿದೆ. ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಬಿಜೆಪಿ ಮುಖಂಡ ಎ.ಮಂಜು ಅವರಿಗೆ ಜೆಡಿಎಸ್ ಈಗಾಗಲೇ ಅರಕಲಗೂಡು ಟಿಕೆಟ್ ಘೋಷಿಸಿದೆ.

ವಿಧಾನಸಭೆ ಚುನಾವಣೆಯ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Sat, 1 April 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ