KGF Babu: ಮನೆ ಮನೆಗೆ ಕೆಜಿಎಫ್ ಬಾಬು ಕಳುಹಿಸಿದ್ದ 30 ಲಕ್ಷದ ಡಿಡಿ ಜಪ್ತಿ ಮಾಡಿದ ಪೊಲೀಸರು

ಕರ್ನಾಟಕ ಚುನಾವಣೆ ಹಿನ್ನೆಲೆ ಮತದಾರರ ಮನೆಮನೆಗೆ ಕೆಜಿಎಫ್ ಬಾಬು ಅವರು ಡಿಡಿ ಕಳುಹಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಸಿದ್ದಾಪುರ ಪೊಲೀಸರು, ಕೆಜಿಎಫ್ ಬಾಬು ಕಳುಹಿಸಿದ್ದ ಡಿಡಿಗಳನ್ನು ಜಪ್ತಿ ಮಾಡಿದ್ದಾರೆ.

KGF Babu: ಮನೆ ಮನೆಗೆ ಕೆಜಿಎಫ್ ಬಾಬು ಕಳುಹಿಸಿದ್ದ 30 ಲಕ್ಷದ ಡಿಡಿ ಜಪ್ತಿ ಮಾಡಿದ ಪೊಲೀಸರು
ಕೆಜಿಎಫ್ ಬಾಬು
Follow us
Rakesh Nayak Manchi
|

Updated on:Apr 03, 2023 | 11:14 PM

ಬೆಂಗಳೂರು: ಕರ್ನಾಟಕ ಚುನಾವಣೆ (Karnataka Assembly Elections 2023) ಹಿನ್ನೆಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮತದಾರರ ಮನೆಮನೆಗೆ ಡಿಡಿ ಕಳುಹಿಸುತ್ತಿದ್ದ ಕೋಟಿ ಕುಬೇರ ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು (KGF Babu) ಅವರಿಗೆ ಸಿದ್ದಾಪುರ ಠಾಣಾ ಪೊಲೀಸರು ಶಾಕ್ ನೀಡಿದ್ದಾರೆ. ಡಿಡಿ ಕಳುಹಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಪೊಲೀಸರು, ಸುಮಾರು 30 ಲಕ್ಷದ ಡಿಡಿಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದಾಪುರ ಠಾಣಾ ವ್ಯಾಪ್ತಿಯ ಕೆ.ಎಂ.ಕಾಲೋನಿಯಲ್ಲಿ 3 ಸಾವಿರ ಜನರಿಗೆ ತಲಾ 1,105 ರೂ.ನಂತೆ ಡಿಡಿ ನೀಡಲಾಗಿತ್ತು. ಜನರನ್ನು ಗಂಪು ಕಟ್ಟಿಕೊಂಡು ಡಿಡಿ ಹಂಚುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಡಿಡಿಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಜಿಎಫ್​ ಬಾಬು ತಯಾರಿ ನಡೆಸಿದ್ದಾರೆ. ಈ ಮೊದಲು ಕೋಲಾರಿಂದ ಸ್ಪರ್ಧೆ ಮಾಡಬೇಕು ಎಂದು ಕೊಂಡಿದ್ದ ಬಾಬು ಬಳಿಕ ಅಲ್ಲಿಂದ ಬೆಂಗಳೂರಿನ ಚಿಕ್ಕಪೇಟೆಯಿಂದ ಅಖಾಡಕ್ಕಿಳಿಯಲು ಪ್ಲಾನ್ ಮಾಡಿದ್ದಾರೆ. ಇದರ ಮಧ್ಯೆ  ಪಕ್ಷ ವಿರೋಧಿ ಆರೋಪದ ಮೇಲೆ ಕಾಂಗ್ರೆಸ್​ನಿಂದ ಅಮಾನತುಗೊಂಡು ಏಕಾಂಗಿಯಾಗಿದ್ದಾರೆ. ಮೂಲಗಳ ಪ್ರಕಾರ ಪಕ್ಷೇತರ ಬದಲು ಜೆಡಿಎಸ್​ನಿಂದ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ: 6 ದಿನಗಳಲ್ಲಿ 47 ಕೋಟಿಗೂ ಹೆಚ್ಚು ಮೌಲ್ಯದ ವಸ್ತು ಸೇರಿದಂತೆ 12 ಕೋಟಿಗೂ ಹೆಚ್ಚು ನಗದು ಜಪ್ತಿ

ಕಳೆದ ಮೇ ತಿಂಗಳಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿಎಫ್​ ಬಾಬು ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. 6 ಕಾರುಗಳಲ್ಲಿ 3 ತಂಡವಾಗಿ ಬಂದಿದ್ದ ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ಉದ್ಯಮಿ ಹಾಗೂ ರಾಜಕಾರಣಿ ಕೆಜಿಎಫ್‌ ಬಾಬು ನಿವಾಸ ಹಾಗೂ ಕಚೇರಿಗಳಲ್ಲಿ ದಾಳಿ ಮಾಡಿ ಶೋಧ ನಡೆಸಿದ್ದರು. ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬುಗೆ ಇಡಿ ಶಾಕ್ ನೀಡಿತ್ತು. ಬಾಬು ಒಡೆತನದ ಬಂಗಲೆ, ಕಚೇರಿ ಸೇರಿ 7 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು. ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 pm, Mon, 3 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ