Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಸೇರ್ಪಡೆಯಾದ ಜಗದೀಶ್ ಶೆಟ್ಟರ್​: ಬಿಜೆಪಿಯೊಂದಿಗಿನ ಮೂರು ದಶಕಗಳ ಹೆಚ್ಚಿನ ನಂಟು ಮುರಿದುಕೊಂಡ ಮಾಜಿ ಸಿಎಂ

ಟಿಕೆಟ್​ ಕಿರಾಕರಿಸಿದ್ದಕ್ಕೆ ಬೇಸರಗೊಂಡು ಬಿಜೆಪಿ ತೊರೆದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.

Follow us
ರಮೇಶ್ ಬಿ. ಜವಳಗೇರಾ
|

Updated on:Apr 17, 2023 | 1:05 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್(Jagadish Shettar) ಅವರು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್(Congress) ಸೇರ್ಪಡೆಯಾದರು. ಇಂದು(ಏಪ್ರಿಲ್ 17) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್​ ಸೇರಿದರು. ಇದರೊಂದಿಗೆ 35 ವರ್ಷಕ್ಕೂ ಹೆಚ್ಚು ಕಾಲ ಬಿಜೆಪಿಯೊಂದಿಗಿ ನಂಟು ಕಳೆದುಕೊಂಡರು. ಇನ್ನು ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಜಗದೀಶ್​ ಶೆಟ್ಟರ್, ಬಿಜೆಪಿಯೊಳಗಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು.

ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ರಾಜ್ಯ ಬಿಜೆಪಿ ಬೆಳವಣಿಗೆ ವರಿಷ್ಠರ ಗಮನಕ್ಕೆ ಬಂದಿಲ್ಲ ಅನ್ನಿಸುತ್ತೆ. ಕೆಲ ಬಿಜೆಪಿ ನಾಯಕರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ. ನಾನು ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಟೀಕೆ ಮಾಡುತ್ತಿಲ್ಲ. ಲಿಂಗಾಯತ ನಾಯಕರಲ್ಲಿ ಬಿಎಸ್​ವೈ ಬಿಟ್ಟರೆ ನಾನೇ ಹಿರಿಯ. ಅದಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕಿರಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ನನಗೆ ಎಲ್ಲಾ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಟಿಕೆಟ್​ ಇಲ್ಲ ಎಂದಾಗ ನನಗೆ ಆಘಾತವಾಯಿತು. ನಾನು ಜನಸಂಘ, ಸಂಘ ಪರಿವಾರದ ಕುಟುಂಬದಿಂದ ಬಂದ ವ್ಯಕ್ತಿ. ಕಳೆದ 6 ತಿಂಗಳಿನಿಂದ ಕಡೆಗಣಿಸಿದ್ದರು, ನನಗೆ ಗೌರವ ಕೊಡಲಿಲ್ಲ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು.

ಹಲವಾರಿ ತಿಂಗಳ ಹಿಂದೆ ಹಿರಿಯ ನಾಯಕನಾಗಿ ನನಗೆ ಏನು ವೇದನೆ ಆಗಿದೆ ಎನ್ನುವುದು ಯಾರ ಗಮನಕ್ಕೂ ಬರಲಿಲ್ಲ. ನಾನು ಯಡಿಯೂರಪ್ಪ ಅನಂತ್ ಕುಮಾರ್ ಮಾರ್ಗದರ್ಶನದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ಎಲ್ಲ ರೀತಿ ಗೌರವ ಸ್ಥಾನ ಮಾನ ನೀಡಿದೆ. ಅದಕ್ಕೆ ಪ್ರತಿಯಾಗಿ ನಾನೂ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಆದರೆ ಆರು ಬಾರಿ 1994ರಿಂದ ಸ್ಪರ್ಧೆ ಮಾಡಿದ್ದೇನೆ. ಇದು ಏಳನೇ ಬಾರಿ ನಾನು ಸ್ಪರ್ಧೆ ಮಾಡಬೇಕಾಗಿರುವುದು. ಸಹಜವಾಗಿ ಟಿಕೆಟ್​ ಇಲ್ಲ ಅಂದಾಗ ಆಘಾತ ಆಯ್ತು, ವೇದನೆ ಆಯ್ತು. ಹಿರಿಯ ನಾಯಕನಾಗಿ ನನಗೆ ಗೌರವ ಕೊಡಲಿಲ್ಲ .ಅಧಿಕಾರದ ಲಾಲಸೆಗಾಗಿ ನಾನು ಅಧಿಕಾರಕ್ಕೆ ಬಂದವನಲ್ಲ. ಜನ ಸಂಘದ ಸಂಘ ಪರಿವಾರದ ಕುಟುಂಬದಿಂದ ಬಂದ ವ್ಯಕ್ತಿ. ಕಳೆದ ಆರು ತಿಂಗಳಿಂದ ವೇದನೆ ಅನುಭವಿಸಿದ್ದೇನೆ. ಅಧಿಕಾರ ಬೇಕಾಗಿಲ್ಲ ನನಗೆ. ಒಂದು ವಾರದ ಮುಂಚೆ ಸೂಚನೆ ನೀಡಿದ್ದರು. ಬೆಳಗ್ಗೆ ಫೋನ್ ಮಾಡಿ ನಿಮಗೂ ಈಶ್ವರಪ್ಪಗೂ ಟಿಕೆಟ್​ ಇಲ್ಲ ಒಪ್ಪಿಗೆ ಪತ್ರ ಕೊಡಿ ಎಂದು ಹೇಳಿದರು. ಒಬ್ಬ ಸಣ್ಣ ಬಾಲಕನಿಗೆ ಹೇಳಿದ ಹಾಗೆ ಹೇಳುತ್ತಾರೆ. ಮೊದಲೇ ಎಲ್ಲ ನಾಯಕರೂ ಬಂದು ಮಾತನಾಡಬೇಕಿತ್ತಲ್ಲ. ಕ್ಷೇತ್ರದ ಜನರ ಸ್ವಾಭಿಮಾನಕ್ಕೂ ಪೆಟ್ಟು ಹಿರಿಯನಾಗಿ ನನಗೂ ಅವಮಾನವಾಗಿದೆ. ಯಾವ ಪಕ್ಷ ಕಟ್ಟಿ ಬೆಳೆಸಿದ್ದೀವೋ ಅಂತ ಪಕ್ಷದ ಮನೆಯಿಂದ ಹೊರಹಾಕಿದ್ದಾಗ ನೋವಾಗುತ್ತಿದೆ ಎಂದರು.

ಇನ್ನಷ್ಟು ಕರ್ನಾಟಕ ವಿಧಾನಸಭಾ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:35 am, Mon, 17 April 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್