ಟಿಕೆಟ್​​ ಕೊಡಿಸಿದ್ದು ನಾನು, ಕುತ್ತಿಗೆ ಕೊಯ್ದು ಹೋದವನು ನೀನು: ಸಚಿವ ನಾರಾಯಣಗೌಡ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಒಬ್ಬರನ್ನ ಬೆಳೆಸಲು ಇನ್ನೊಬ್ಬರನ್ನು ಕುಮಾರಸ್ವಾಮಿ ಕುಟುಂಬ ತುಳಿಯುತ್ತದೆ ಎಂಬ ಸಚಿವ ಕೆಸಿ ನಾರಯಣಗೌಡ ಹೇಳಿಕೆಗೆ ತಿರುಗೇಟು ನೀಡಿದ ಹೆಚ್ ಡಿ ಕುಮಾರಸ್ವಾಮಿ, ನಿನ್ನಿಂದ ಪಾಠ ಕಲಿಯುವ ಅಗತ್ಯ ನನಗಿಲ್ಲ ಎಂದು ಹೇಳಿದ್ದಾರೆ.

ಟಿಕೆಟ್​​ ಕೊಡಿಸಿದ್ದು ನಾನು, ಕುತ್ತಿಗೆ ಕೊಯ್ದು ಹೋದವನು ನೀನು: ಸಚಿವ ನಾರಾಯಣಗೌಡ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಕೆಸಿ ನಾರಾಯಣಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ
Follow us
Rakesh Nayak Manchi
|

Updated on:Apr 01, 2023 | 3:29 PM

ಬೆಂಗಳೂರು: ಟಿಕೆಟ್​​ ಕೊಡಿಸಿದ್ದು ನಾನು, ಕುತ್ತಿಗೆ ಕೊಯ್ದು ಹೋದವನು ನೀನು. ನಿನ್ನಿಂದ ಪಾಠ ಕಲಿಯುವ ಅಗತ್ಯ ನನಗಿಲ್ಲ ಎಂದು ಸಚಿವ ಕೆಸಿ ನಾರಾಯಣಗೌಡ (KC Narayana Gowda) ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದರು. ಒಬ್ಬರನ್ನ ಬೆಳೆಸಲು ಇನ್ನೊಬ್ಬರನ್ನು ಕುಮಾರಸ್ವಾಮಿ ಕುಟುಂಬ ತುಳಿಯುತ್ತದೆ ಎಂಬ ಸಚಿವ ನಾರಯಣಗೌಡ ಹೇಳಿಕೆಗೆ ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ತಿರುಗೇಟು ನೀಡಿದ ಅವರು, ಇವರನ್ನು ಬೆಳೆಸುವುದಕ್ಕೆ ನಾನು ಪಕ್ಷ ಹಾಳುಮಾಡಿಕೊಳ್ಳಬೇಕಾ? ಇವರೇನು ಮಹಾನ್​​ ಕೆಲಸ ಮಾಡಿದ್ದಾರಾ ಎಂದು ಖಾರವಾಗಿ ಪ್ರಶ್ನಿಸಿದರು. ಅಂದು ಕೃಷ್ಣ ವಿರುದ್ಧ ಅಭ್ಯರ್ಥಿ ಆಗಬೇಕು ಬಂದಾಗ ಪರಿಜ್ಞಾನ ಇರಲಿಲ್ವಾ ಎಂದು ನಾರಾಯಣಗೌಡರನ್ನು ಪ್ರಶ್ನಿಸಿದ ಕುಮಾರಸ್ವಾಮಿ, ನಿನ್ನ ನಡವಳಿಕೆ ನೋಡಿ ಟಿಕೆಟ್ ನೀಡಲಿಲ್ಲ. ಎರಡನೇ ಬಾರಿಗೆ ಟಿಕೆಟ್ ಕೊಡಬಾರದು ಅಂತ ಇದ್ದಿದ್ದು. ನಿನ್ನ ನಡವಳಿಕೆ ನೋಡಿ ಟಿಕೆಟ್ ಬೇಡ ಅಂತ ಇದ್ದೆವು. ಆದರೆ ಟಿಕೆಟ್ ಕೊಟ್ಟವರು ಯಾರು? ಟಿಕೆಟ್ ಕೊಡಿಸಿದವನು ನಾನು, ಕುತ್ತಿಗೆ ಕುಯ್ದು ಹೋದವನು ನೀನು. ನಿನ್ನಿಂದ ಪಾಠ‌ ಕಲಿಬೇಕಿಲ್ಲ ನಿನ್ನ ಕಾಲ ಮುಗಿದಿದೆ. ಈ ಬಾರಿಯ ಚುನಾವಣೆಯಲ್ಲಿ ಕೆ ಆರ್ ಪೇಟೆ ಜನ ಪಾಠ ಕಲಿಸುತ್ತಾರೆ ಎಂದರು.

ಪಕ್ಷಂತಾರಿ, ಪಕ್ಷಕ್ಕೆ ಚೂರಿ ಹಾಕಿ ಹೋದವನು ನನಗೆ ಪಾಠ ಹೇಳುತ್ತಾನಾ? ಇವನಿಂದ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಾ? ಕಾರ್ಯಕರ್ತರನ್ನ ಹೇಗೆ ಉಳಿಸಿಕೊಳ್ಳಬೇಕು ಅನ್ನೋದು ನನಗೆ ಗೊತ್ತಿದೆ ಎಂದು ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ, ಕೆ ಆರ್ ಪೇಟೆಯಲ್ಲಿ ಬೆಳಗ್ಗೆ 10 ಗಂಟೆಗೆ ಜೆಡಿಎಸ್ ಪರ ಫಲಿತಾಂಶ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಕಾರ್ಯಕರ್ತರಿಗೆ ಧಮ್ಕಿ, ಕಿರುಕುಳ ನೀಡಲಾಗುತ್ತಿದೆ: ಕುಮಾರಸ್ವಾಮಿ ಆರೋಪ

ಜೆಡಿಎಸ್ ಕಾರ್ಯಕರ್ತರಿಗೆ ಅಧಿಕಾರಿಗಳಿಂದ ಕಿರುಕುಳ ಆರೋಪ ಸಂಬಂಧ ಗರಂ ಆದ ಕುಮಾರಸ್ವಾಮಿ, ನಮ್ಮ ಕಾರ್ಯಕರ್ತರಿಗೆ ಧಮ್ಕಿ, ಕಿರುಕುಳ ನೀಡುವುದು ನಡೆಯುತ್ತಿದೆ. ಬೇರೆ ಪಕ್ಷದಿಂದ ಬೇಸತ್ತು ಜೆಡಿಎಸ್ ಪಕ್ಷಕ್ಕೆ ಬರುವವರಿಗೆ ಬೆದರಿಕೆ ಹಾಕಲಾಗುತ್ತಿದೆ. ಕೆಲವೊಂದು ಕಡೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ಹೆದರಿಸುತ್ತಿದ್ದಾರೆ. ಪೊಲೀಸರಿಗೆ ಎಚ್ಚರಿಕೆ ನೀಡುತ್ತಿದ್ದೇನೆ, 1 ತಿಂಗಳಷ್ಟೇ ನಿಮ್ಮ ಸಮಯ. ಸರ್ಕಾರಿ ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕೆಲಸ ಮಾಡಬೇಕು. ಶಾಸಕರಿಗೆ ಅಡಿಯಾಳಾಗಿ ಕೆಲಸ ಮಾಡಿದರೆ ಪ್ರಾಯಶ್ಚಿತ್ತವಾಗುತ್ತದೆ. ಜೂನ್ ಬಳಿಕ ಅಧಿಕಾರಿಗಳಿಗೆ ಪ್ರಾಯಶ್ಚಿತ್ತವಾಗಲಿದೆ. ರಾಜ್ಯದ ಜನತೆಯ ತೆರಿಗೆಯ ಹಣದಿಂದ ನೀವು ಕೆಲಸ ಮಾಡುತ್ತಿದ್ದೀರಿ. ಎಲ್ಲಾ ಅಧಿಕಾರಿಗಳು ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಈಗಾಗಲೇ ನಾನು ಎರಡು ಬಾರಿ ಸಿಎಂ ಆಗಿ ಕೆಲಸ ಮಾಡಿದ್ದೇನೆ, ಬದಲಾವಣೆ ಮಾಡಬೇಕಿದೆ ಎಂದರು.

ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್​ ಪಂಚರತ್ನ ಯಾತ್ರೆ

ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್​ ಪಂಚರತ್ನ ಯಾತ್ರೆ ನಡೆಯಿತು. ಯಾತ್ರೆಗೆ ಆಗಮಿಸಿದ ಕುಮಾರಸ್ವಾಮಿ ಅವರಿಗೆ ಮುದ್ದಿನಪಾಳ್ಯದಲ್ಲಿ ಬೃಹತ್​ ಹಾರ ಹಾಕುವ ಮೂಲಕ ಸ್ವಾಗತ ಕೋರಲಾಯಿತು. ಈ ವೇಳೆ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಉಪಸ್ಥಿತರಿದ್ದರು.

ವಿಧಾನಸಭೆ ಚುನಾವಣೆಯ ತಾಜಾ ಸುದ್ದಿಗಳನ್ನು  ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Sat, 1 April 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು