AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sandur Election Result 2024: ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲವು

ಸಂಡೂರು ಕ್ಷೇತ್ರ ಉಪಚುನಾವಣೆ ವ್ಯಕ್ತಿ ಪ್ರತಿಷ್ಠೆಗೆ ಸಾಕ್ಷಿಯಾಗಿದೆ. ನವೆಂಬರ್​ 13 ರಂದು ಮತದಾನ ನಡೆದಿದ್ದು, ಶನಿವಾರ ಫಲಿತಾಂಶ ಪ್ರಕಟವಾಗಿದೆ. ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಗೆಲುವಾಗಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ಪರಾಭವಗೊಂಡಿದ್ದಾರೆ.

Sandur Election Result 2024: ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲವು
ಅನ್ನಪೂರ್ಣ ತುಕಾರಾಂ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Nov 23, 2024 | 2:26 PM

Share

ಬಳ್ಳಾರಿ ಗಣಿಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ  ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ.

2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ ತುಕಾರಾಂ ಅವರು ಲೋಕಸಭೆಗೆ ಸ್ಪರ್ಧಿಸಿ ಗೆಲವು ಸಾಧಿಸಿದರು. ಬಳಿಕ, ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದರು.

ಹೀಗಾಗಿ, ತೆರುವಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರಿಗೆ ವಿಜಯಲಕ್ಷ್ಮಿ ಒಲೆದಿದ್ದಾಳೆ. ಇನ್ನು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಆಪ್ತ, ಪಕ್ಷಕ್ಕೆ ನಿಷ್ಠಾವಂತನಾಗಿರುವ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ.

ಸಂಡೂರಿನಲ್ಲಿ ಅಭ್ಯರ್ಥಿಗಳು ಪಡೆದ ಮತಗಳು

  • ಈ. ಅನ್ನಪೂರ್ಣ (ಕಾಂಗ್ರೆಸ್)- 93606
  • ಬಂಗಾರ ಹನುಮಂತ (ಬಿಜೆಪಿ)- 83961
  • ಆಂಜನೆಪ್ಪ ಎನ್. (ಕರ್ನಾಟಕ ಜನತಾ ಪಕ್ಷ) – 632
  • ಟಿ.ಎಂ. ಮಾರುತಿ (ಪಕ್ಷೇತರ)- 211
  • ಟಿ. ಯರ್ರಿಸ್ವಾಮಿ (ಪಕ್ಷೇತರ)- 278
  • ಎನ್. ವೆಂಕಣ್ಣ (ಪಕ್ಷೇತರ)- 461
  • ನೋಟ- 1040

ಕಾಂಗ್ರೆಸ್ ಅಭ್ಯರ್ಥಿ ಈ ಅನ್ನಪೂರ್ಣ ಅವರು ಬಿಜೆಪಿಯ ಬಂಗಾರ ಹನುಮಂತ ಅವರಿಗಿಂತ 9,645 ಕ್ಕೂ ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಅನ್ನಪೂರ್ಣಗೆ ವರವಾಗಿರುವ ಅಂಶಗಳು

ಭರ್ಜರಿ ಬಹುಮತಗಳ ಮೂಲಕ ಗೆಲವು ಸಾಧಿಸಿರುವ ಅನ್ನಪೂರ್ಣ ಅವರಿಗೆ ಹಲವು ಅಂಶಗಳು ವರವಾಗಿವೆ. ಅನ್ನಪೂರ್ಣ ತುಕಾರಾಂ ಪತಿ ಇ ತುಕಾರಾಂ ಕಳೆದ 20 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅಲ್ಲದೇ, ಸಂಸದ ತುಕಾರಾಂ ಕ್ಷೇತ್ರದ ಪ್ರತಿ ಮನೆಗೆ ಚಿರ ಪರಿಚಿತರಾಗಿದ್ದಾರೆ. ಹಾಗೇ ವೈಯಕ್ತಿವಾಗಿ ಅನ್ನಪೂರ್ಣ ತುಕಾರಾಂ ಅವರು ಕೂಡ ಕ್ಷೇತ್ರದಲ್ಲಿ ತಮ್ಮ ಪ್ರಭಾವವನ್ನು ಹೊಂದಿದ್ದಾರೆ. ಇದೇ ಪ್ರಭಾವವನ್ನು ಇಟ್ಟುಕೊಂಡು ಚುನಾವಣೆ ಸಂದರ್ಭದಲ್ಲಿ ಅನ್ನಪೂರ್ಣ ಅವರು ಮಹಿಳಾ ಮತದಾರರನ್ನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಗೆಲವಿಗೆ ಪ್ರಮುಖ ಕಾರಣವಾಗಿದೆ.

ಜೊತೆಗೆ, ಬಿಜೆಪಿ ಹೊರಗಿನ ವ್ಯಕ್ತಿಯನ್ನು ಕರೆತಂದು ಕ್ಷೇತ್ರದಲ್ಲಿ ಟಿಕೆಟ್ ಕೊಟ್ಟಿದ್ದು ಕೂಡ ಕಾಂಗ್ರೆಸ್​ಗೆ ವರದಾನವಾಗಿದೆ. ಹಾಗೇ, ಸಚಿವ ಸಂತೋಷ್​ ಲಾಡ್​​ ಅವರ ವೈಯಕ್ತಿಕ ವರ್ಚಸ್ಸು ಕೆಲಸ ಮಾಡಿದೆ. ಇದರಿಂಧ ಕಾರ್ಮಿಕರ ಮತಗಳು ಕಾಂಗ್ರೆಸ್​​ಗೆ ಬಂದಿವೆ.

ಬಂಗಾರು ಹನುಮಂತಗೆ ಮೈನಸ್ ಆಗಿರುವ ಅಂಶಗಳು

ಸಂಡೂರಿನ ರಾಜಮನೆತನದ ಕಾರ್ತಿಕ್​ ಘೋರ್ಪಡೆ ಬಿಜೆಪಿ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ. ಇದು ಬಿಜೆಪಿಯ ಬಂಗಾರು ಹನುಮಂತು ಸೋಲಿಗೆ ಕಾರಣವಾಗಿದೆ ಎಂಬ ಚರ್ಚೆ ಇದೆ. ಇನ್ನು ಜನಾರ್ದನ ರೆಡ್ಡಿ ಬಂದಿದ್ದನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ರೆಡ್ಡಿ ಮತ್ತು ಗಣಿಗಾರಿಕೆ ವಿಚಾರ ಇಟ್ಟುಕೊಂಡು ಕ್ಯಾಂಪೇನ್ ಮಾಡಿತ್ತು. ಇದರ ಜೊತೆಗೆ ರೆಡ್ಡಿ ಆಪ್ತ ಕೆ.ಎಸ್.ದಿವಾಕರ್​ಗೆ ಟಿಕೆಟ್ ನಿಡದ ಅಸಮಾಧಾನವೂ ತಳಮಟ್ಟದ ಕಾರ್ಯಕರ್ತರಲ್ಲಿ ಇತ್ತು. ಇದನ್ನು ಶಮನ ಮಾಡುವಲ್ಲಿ ಬಿಜೆಪಿ ವಿಫಲವಾಗಿದೆ. ಅಲ್ಲದೇ, ಸಚಿವ ಸಂತೋಷ್ ಲಾಡ್ ಸಂಡೂರಿನಲ್ಲಿ ಹಿಡಿತ ಹೊಂದಿದ್ದು, ಅವರೇ ಕ್ಷೇತ್ರದ ಉಸ್ತುವಾರಿ ವಹಿಸಿದ್ದು ಬಿಜೆಪಿಗೆ ಮೈನಸ್ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಲೈವ್ ಅಪ್​ಡೇಟ್ ಇಲ್ಲಿದೆ

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:55 am, Sat, 23 November 24

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!