Sandur Election Result 2024: ಸಂಡೂರು ಉಪಚುನಾವಣೆಯಲ್ಲಿ ಸೋತರೂ ಬಿಜೆಪಿಗೆ ಬಂಗಾರು ಬಂಗಾರ..!

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಸೋತರೂ, ಮತಗಳಿಕೆಯಲ್ಲಿ ಯಶಸ್ವಿಯಾಗಿದ್ದಾರೆ. ಈ ಬಾರಿ ಬಿಜೆಪಿ ಸೋತರೂ ಹಿಂದಿನ ಚುನಾವಣೆಗಿಂತ ಹೆಚ್ಚು ಮತವನ್ನು ಗಳಿಸಿದೆ. ಯಾವ ಅಭ್ಯರ್ಥಿಗೆ ಎಷ್ಟು ಮತಗಳು ಎಂಬ ವಿವರ ಇಲ್ಲಿದೆ.

Sandur Election Result 2024: ಸಂಡೂರು ಉಪಚುನಾವಣೆಯಲ್ಲಿ ಸೋತರೂ ಬಿಜೆಪಿಗೆ ಬಂಗಾರು ಬಂಗಾರ..!
ಸಂಡೂರು ಉಪಚುನಾವಣೆಯಲ್ಲಿ ಸೋತರೂ ಬಿಜೆಪಿಗೆ ಬಂಗಾರು ಬಂಗಾರ..!
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 23, 2024 | 3:38 PM

ಬಳ್ಳಾರಿ, ನವೆಂಬರ್​ 23: ಕರ್ನಾಟಕದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಬೈ ಎಲೆಕ್ಷನ್​ನ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಜಿಲ್ಲೆಯ ಸಂಡೂರು (Sandur) ಕ್ಷೇತ್ರದಲ್ಲಿ ಅನ್ನಪೂರ್ಣ ತುಕಾರಾಂ ಅವರು 9,645 ಮತಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಆ ಮೂಲಕ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ ಸೋಲಾಗಿದೆ. ಸಂಡೂರಿನಲ್ಲಿ ಬಿಜೆಪಿ ಸೋತರು ಕೂಡ ಮತಗಳಿಕೆಯಲ್ಲಿ ಚೇತರಿಕೆ ಕಂಡಿದೆ. ಹೇಗೆಂದರೆ 2023ರಲ್ಲಿ ಬಿಜೆಪಿ 49,701 ಮತಗಳನ್ನು ಗಳಿಸಿತ್ತು. ಆದರೆ ಈ ಬಾರಿ 83,967 ಮತಗಳನ್ನು ಪಡೆದುಕೊಂಡಿದೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಕಾರಣ ಎನ್ನಲಾಗುತ್ತಿದೆ.

ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 9,645 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಬಂಗಾರು ಹನುಮಂತು ಸೋತರು ಕೂಡ ಬಿಜೆಪಿಗೆ ಹೆಚ್ಚಿನ ಮತಗಳನ್ನು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಕೂಡ ಕಾರಣ.  ಜನಾರ್ದನ ರೆಡ್ಡಿ ವಾಪಸ್​ ಬಳ್ಳಾರಿ ಪ್ರವೇಶಿಸಿದರಿಂದ ಬಿಜೆಪಿಗೆ ಮತ್ತಷ್ಟು ಬಲಬಂದಿತ್ತು.

ಇದನ್ನೂ ಓದಿ: Sandur Election Result 2024: ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲವು

ಬಳ್ಳಾರಿ ಜಿಲ್ಲೆಯ ಸಂಡೂರು ಆಂಧ್ರ ಪ್ರದೇಶದ ಜೊತೆ ಗಡಿಯನ್ನು ಹಂಚಿಕೊಂಡಿರುವ ಕ್ಷೇತ್ರ. ಸಂಡೂರು ಕ್ಷೇತ್ರ ಮೊದಲಿನಿಂದಲ್ಲೂ ಕಾಂಗ್ರೆಸ್​ ಭದ್ರಕೋಟೆ. ಇದೇ ಕ್ಷೇತ್ರದಿಂದ ಇ ತುಕಾರಾಂ ಅವರು ಮೂರು ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು. 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ ತುಕಾರಾಂ ಅವರು ಲೋಕಸಭೆಗೆ ಸ್ಪರ್ಧಿಸಿ ಗೆಲವು ಸಾಧಿಸಿದರು. ಹೀಗಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಹೀಗೆ ತೆರವಾಗಿದ್ದ ಕ್ಷೇತ್ರದಲ್ಲಿ ತಮ್ಮ ಪತ್ನಿಯನ್ನು ಕಣ್ಣಕ್ಕಿಳಿಸುವ ಮೂಲಕ ಅವರು ಕೂಡ ಇದೀಗ ಗೆದ್ದು ಬೀಗಿದ್ದಾರೆ.

ಸಾಮಾನ್ಯ ಕ್ಷೇತ್ರವಾಗಿದ್ದ ಇದು 2008ರ ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಎಸ್‌ಟಿ ಮೀಸಲು ಕ್ಷೇತ್ರವಾಗಿ ಬದಲಾಗಿದ್ದು, ಕಾಂಗ್ರೆಸ್ ಪ್ರಾಬಲ್ಯ ಇರುವ ಕ್ಷೇತ್ರ ಎಂದು ಅಂಕಿ ಅಂಶಗಳು ಹೇಳುತ್ತವೆ. 2008ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಇ. ತುಕಾರಾಂ 49,535 ಮತಗಳನ್ನು ಪಡೆದು, ಬಿಜೆಪಿಯ ಟಿ. ನಾಗರಾಜ್ (28,816 ಮತ) ಸೋಲಿಸಿದ್ದರು.

ಹಾಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ತವರು ಕ್ಷೇತ್ರವಿದು. 2004ರಲ್ಲಿ ಜೆಡಿಎಸ್‌ನ ಸಂತೋಷ್‌ ಲಾಡ್‌ 65,600 ಮತ ಪಡೆದು ಕಾಂಗ್ರೆಸ್‌ ಅಭ್ಯರ್ಥಿ ರಾಜಮನೆತನದ ವೆಂಕಟರಾವ್ ಘೋರ್ಪಡೆ ಸೋಲಿಸಿದ್ದರು.

ಇದನ್ನೂ ಓದಿ: Karnataka Assembly By-Elections Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು

2013ರಲ್ಲಿ ಮತ್ತೆ ಇ. ತುಕಾರಾಂ 62,246 ಮತಗಳನ್ನು ಪಡೆದು, ಜೆಡಿಎಸ್‌ನ ಧನಂಜಯ ಆರ್. (27,615 ಮತ) ಸೋಲಿಸಿದ್ದರು. 2018ರ ಚುನಾವಣೆಯಲ್ಲಿ 78,106 ಮತಗಳನ್ನು ಪಡೆದು, ಇ. ತುಕರಾಂ ಬಿಜೆಪಿಯ ಡಿ. ರಾಘವೇಂದ್ರ (64,096 ಮತ) ಸೋಲಿಸಿದ್ದರು. 2023ರಲ್ಲಿ ಇ. ತುಕಾರಾಂ 85,223 ಮತಗಳನ್ನು ಪಡೆದು ಬಿಜೆಪಿಯ ಶಿಲ್ಪಾ ರಾಘವೇಂದ್ರ (49,701 ಮತ) ಸೋಲಿಸಿದ್ದರು. ಕ್ಷೇತ್ರದಲ್ಲಿ ಬಿಜೆಪಿ 2008ರಲ್ಲಿ 28,816, 2013ರಲ್ಲಿ 62,32595 , 2018ರಲ್ಲಿ 64,096ಮತ, 2023ರಲ್ಲಿ 49,701, 2024ರಲ್ಲಿ 83,961 ಮತಗಳನ್ನು ಗಳಿಸಿದೆ.

ಯಾರಿಗೆ ಎಷ್ಟು ಮತಗಳು

  • ಈ. ಅನ್ನಪೂರ್ಣ (ಕಾಂಗ್ರೆಸ್)- 93616
  • ಬಂಗಾರ ಹನುಮಂತ (ಬಿಜೆಪಿ)- 83967
  • ಆಂಜನೆಪ್ಪ ಎನ್. (ಕರ್ನಾಟಕ ಜನತಾ ಪಕ್ಷ) – 632
  • ಟಿ.ಎಂ. ಮಾರುತಿ (ಪಕ್ಷೇತರ)- 211
  • ಟಿ. ಯರ್ರಿಸ್ವಾಮಿ (ಪಕ್ಷೇತರ)- 278
  • ಎನ್. ವೆಂಕಣ್ಣ (ಪಕ್ಷೇತರ)- 461
  • ನೋಟ- 1040

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:36 pm, Sat, 23 November 24

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ