AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election Results 2024: ಗೆಲುವು ಸಾಧಿಸಿದ ಅಮಿತ್ ಶಾ, ಗಾಂಧಿನಗರದಲ್ಲಿ ಕಾಂಗ್ರೆಸ್​​​ ಧೂಳಿಪಟ

ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಅಂತರದಲ್ಲಿ ಗೆಲುವು ಸಾಧಿಸಿ ಕೇಂದ್ರ ಸಚಿವ ಅಮಿತ್​​ ಶಾ.

Lok Sabha Election Results 2024: ಗೆಲುವು ಸಾಧಿಸಿದ ಅಮಿತ್ ಶಾ, ಗಾಂಧಿನಗರದಲ್ಲಿ ಕಾಂಗ್ರೆಸ್​​​ ಧೂಳಿಪಟ
ಅಮಿತ್ ಶಾ
ಅಕ್ಷಯ್​ ಪಲ್ಲಮಜಲು​​
|

Updated on:Jun 04, 2024 | 12:28 PM

Share

ಗಾಂಧಿ ನಗರ, ಜೂ.4: ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಲ್ಲಿ ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​​​​​ ಅಭ್ಯರ್ಥಿ ಸೋನಾಲ್ ಪಟೇಲ್ ಅವರು ಅಮಿತ್​​​ ಶಾ ಮುಂದೆ ಸ್ಪರ್ಧಿಸಿದರು. 2014ರಲ್ಲಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಈ ಕ್ಷೇತ್ರದಿಂದ ಸ್ವರ್ಧಿಸಿದರು. ಇದಕ್ಕೂ ಮೊದಲು 1996ರಲ್ಲಿ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕೂಡ ಈ ಕ್ಷೇತ್ರದಿಂದ ಸ್ವರ್ಧಿಸಿ ಗೆಲುವು ಸಾಧಿಸಿದರು. ಗಾಂಧಿ ನಗರ ಬಿಜೆಪಿ ಭದ್ರತಕೋಟೆ ಕೂಡ ಹೌದು.

ಮೇ 7 ರಂದು ಮೂರನೇ ಹಂತದ ಚುನಾವಣೆ ನಡೆಯಿತು. ಬಿಜೆಪಿ ಇಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿಕೊಂಡು ಬಂದಿದೆ. ದೇಶದ ಬೇರೆ ಬೇರೆ ಕಡೆ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ಇದರ ಜತೆಗೆ ಕಾಂಗ್ರೆಸ್​​ ಮೈತ್ರಿಕೂಟ ಇಂಡಿಯಾ ಕೂಡ ಭಾರೀ ಪೈಪೋಟಿಯನ್ನು ನೀಡುತ್ತಿದೆ. ಗುಜರಾತ್‌ನ ಗಾಂಧಿನಗರ ನಗರ ಕ್ಷೇತ್ರದಿಂದ ಅಮಿತ್​​ ಶಾ ಎರಡನೇ ಭಾರೀ ಗೆಲುವು ಸಾಧಿಸಿದ್ದಾರೆ. ಇನ್ನು ಈ ಕ್ಷೇತ್ರದಿಂದ ಬೇರೆ ಬೇರೆ ಪಕ್ಷ ನಾಯಕರು ಈ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದರು.

ಇದನ್ನೂ ಓದಿ:ಮೊದಲ ಚುನಾವಣಾ ಗೆಲುವಿನತ್ತ ಪವನ್ ಕಲ್ಯಾಣ್: ಭಾರಿ ಮುನ್ನಡೆ

ಗುಜರಾತ್‌ನಲ್ಲಿ ಬಿಜೆಪಿ ಸುಮಾರು 25-26 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮತಗಟ್ಟೆ ಸಮೀಕ್ಷೆ ಹೇಳಿದೆ. ಕಾಂಗ್ರೆಸ್​​​ ಗುಜರಾತ್​​​ನಲ್ಲಿ ತನ್ನ ಖಾತೆ ತೆರೆಯಲು ಹೆಣಗಾಡುತ್ತಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:17 pm, Tue, 4 June 24

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್