AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ 2024: ವಾರಾಣಸಿಯಲ್ಲಿ ಮೋದಿ ವಿರುದ್ಧ ತೃತೀಯ ಲಿಂಗಿ ಸ್ಪರ್ಧೆ

ಈ ಬಾರಿ 2024 ರ ಲೋಕಸಭಾ ಚುನಾವಣಾ ಕದನ ಬಹಳ ರೋಚಕ ಮತ್ತು ಆಸಕ್ತಿದಾಯಕವಾಗಿರುವುದರಲ್ಲಿ ಆಶ್ಚರ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ(Narendra Modi) ಉತ್ತರ ಪ್ರದೇಶದ ವಾರಾಣಸಿ(Varanasi) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ದೇಶದ ಮೊದಲ ತೃತೀಯ ಲಿಂಗಿ ಹಿಮಾಂಗಿ ಸಖಿ ಅವರನ್ನು ಚುನಾವಣಾ ಕದನದಲ್ಲಿ ಕಣಕ್ಕಿಳಿಸಲಾಗಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಅವರಿಗೆ ಚುನಾವಣಾ ಟಿಕೆಟ್ ನೀಡಿದೆ. 5 ಭಾಷೆಗಳಲ್ಲಿ ಭಗವತ್ ಕಥಾವನ್ನು ಹೇಳುವ ಹಿಮಾಂಗಿ ಅವರು ಏಪ್ರಿಲ್ 10 ರೊಳಗೆ ವಾರಾಣಸಿಗೆ ಬರಲಿದ್ದಾರೆ.

ಲೋಕಸಭಾ ಚುನಾವಣೆ 2024: ವಾರಾಣಸಿಯಲ್ಲಿ ಮೋದಿ ವಿರುದ್ಧ ತೃತೀಯ ಲಿಂಗಿ ಸ್ಪರ್ಧೆ
ನರೇಂದ್ರ ಮೋದಿ, ಹಿಮಾಂಗಿImage Credit source: News24
ನಯನಾ ರಾಜೀವ್
|

Updated on:Apr 08, 2024 | 11:32 AM

Share

ಈ ಬಾರಿ 2024 ರ ಲೋಕಸಭಾ ಚುನಾವಣಾ ಕದನ ಬಹಳ ರೋಚಕ ಮತ್ತು ಆಸಕ್ತಿದಾಯಕವಾಗಿರುವುದರಲ್ಲಿ ಆಶ್ಚರ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ(Narendra Modi) ಉತ್ತರ ಪ್ರದೇಶದ ವಾರಾಣಸಿ(Varanasi) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇದೇ ಕ್ಷೇತ್ರದಿಂದ ತೃತೀಯ ಲಿಂಗಿ ಹಿಮಾಂಗಿ ಸಖಿ ಅವರನ್ನು ಚುನಾವಣಾ  ಕಣಕ್ಕಿಳಿಸಲಾಗಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಅವರಿಗೆ ಚುನಾವಣಾ ಟಿಕೆಟ್ ನೀಡಿದೆ. 5 ಭಾಷೆಗಳಲ್ಲಿ ಭಗವತ್ ಕಥಾವನ್ನು ಹೇಳುವ ಹಿಮಾಂಗಿ ಅವರು ಏಪ್ರಿಲ್ 10 ರೊಳಗೆ ವಾರಾಣಸಿಗೆ ಬರಲಿದ್ದಾರೆ.

ಅವರೇ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಿಷಿ ಕುಮಾರ್ ತ್ರಿವೇದಿ ಅವರು ನಿನ್ನೆ ಉತ್ತರ ಪ್ರದೇಶದ 20 ಲೋಕಸಭಾ ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಇವುಗಳಲ್ಲಿ ಅತ್ಯಂತ ವಿಶೇಷವಾದದ್ದು ಮಹಾಮಂಡಲೇಶ್ವರ ಹಿಮಾಂಗಿ.

ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾದ ನಂತರ ತೃತೀಯ ಲಿಂಗಿಗಳಿಗೆ ಅವರ ಹಕ್ಕು ಮತ್ತು ಗೌರವವನ್ನು ಒದಗಿಸುವ ಕೆಲಸ ಮಾಡುತ್ತೇನೆ ಎನ್ನುತ್ತಾರೆ ಹಿಮಾಂಗಿ ಸಖಿ.

ಪ್ರಧಾನಿ ಮೋದಿಯವರ ಬೇಟಿ ಬಚಾವೋ-ಬೇಟಿ ಪಢಾವೋ ಘೋಷಣೆ ಚೆನ್ನಾಗಿದೆ, ಆದರೆ ಅವರು ಕಿನ್ನರ್ ಬಚಾವೋ-ಕಿನ್ನರ್ ಪಢಾವೋ ಬಗ್ಗೆ ಎಂದಿಗೂ ಮಾತನಾಡಲಿಲ್ಲ, ನಾನು ಅದರ ಮೇಲೆ ಕೆಲಸ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ವಾರಾಣಸಿಯಲ್ಲಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ; ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ

ತೃತೀಯಲಿಂಗಿಗಳಿಗೂ ಉದ್ಯೋಗ, ಲೋಕಸಭೆ, ವಿಧಾನಸಭೆ, ಶಾಲಾ-ಕಾಲೇಜುಗಳಲ್ಲಿ ಮೀಸಲಾತಿ ಸಿಗಬೇಕು. ಅವರ ಪ್ರತಿನಿಧಿಯೂ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಬೇಕು, ಅವರ ಹಿತಾಸಕ್ತಿಯಲ್ಲಿ ಕೆಲಸ ಮಾಡಬಹುದು. ಯಾರನ್ನೂ ಅಥವಾ ಪ್ರಧಾನಿಯನ್ನು ಸೋಲಿಸುವುದು ಉದ್ದೇಶವಲ್ಲ, ಆದರೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಜನರ ವಿಶ್ವಾಸ ಗಳಿಸುವುದು ಮುಖ್ಯ.

ಅವರು ಹಿಂದಿ, ಇಂಗ್ಲಿಷ್, ಪಂಜಾಬಿ, ಗುಜರಾತಿ, ಮರಾಠಿ ಭಾಷೆಗಳಲ್ಲಿ ಭಗವತ್ ಕಥಾವನ್ನು ಹೇಳುತ್ತಾರೆ. ಅವರ ತಂದೆ ಗುಜರಾತಿ. ತಾಯಿ ಪಂಜಾಬಿ ಕುಟುಂಬದಿಂದ ಬಂದವರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:27 am, Mon, 8 April 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ