ಎಎಪಿಯೇ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ಮಾಡಬಹುದು: ಬಿಜೆಪಿ

ದೆಹಲಿ ಮೆಟ್ರೋ ನಿಲ್ದಾಣಗಳು ಮತ್ತು ರೈಲುಗಳಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಬೆದರಿಕೆ ಹಾಕುವ ಹಲವಾರು ಗ್ರಾಫಿಟಿ ಕಾಣಿಸಿಕೊಂಡಿದ್ದು, ದೆಹಲಿ ಮುಖ್ಯಮಂತ್ರಿಗೆ ದೈಹಿಕವಾಗಿ ಹಾನಿ ಮಾಡಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಸಿಂಗ್, ಅತಿಶಿ ಮತ್ತು ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಏತನ್ಮಧ್ಯೆ, ಅರವಿಂದ್ ಕೇಜ್ರಿವಾಲ್ ಅವರ ನಿವಾಸದೊಳಗೆ ಥಳಿಸಲಾಗಿದೆ ಎಂಬ ಆಪ್ ಸಂಸದೆ ಸ್ವಾತಿ ಮಲಿವಾಲ್ ಅವರ ಆಪಾದನೆಯಿಂದ ಗಮನವನ್ನು ಬೇರೆಡೆ ಸೆಳೆಯಲು ಈ ಗ್ರಾಫಿಟಿ ಎಎಪಿಯ ತಂತ್ರ ಎಂದ ಬಿಜೆಪಿ.

ಎಎಪಿಯೇ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ಮಾಡಬಹುದು: ಬಿಜೆಪಿ
ಅರವಿಂದ್ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on: May 20, 2024 | 8:39 PM

ದೆಹಲಿ ಮೇ 20: ಲೋಕಸಭೆ ಚುನಾವಣೆಗೆ (Lok Sabha Election) ಮುನ್ನ ಸಹಾನುಭೂತಿ ಗಳಿಸಲು ಆಮ್ ಆದ್ಮಿ ಪಕ್ಷವೇ (AAP) ತಮ್ಮ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮೇಲೆ ದಾಳಿ ಮಾಡಬಹುದು ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿ ಮೇಲೆ ದಾಳಿ ನಡೆಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಆರೋಪಿಸಿದಕ್ಕೆ ಬಿಜೆಪಿ ಈ ರೀತಿ ಪ್ರತಿಕ್ರಿಯಿಸಿದ್ದು, ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗ ಅರವಿಂದ್ ಕೇಜ್ರಿವಾಲ್ ಅವರ ಭದ್ರತೆಯನ್ನು ಹೆಚ್ಚಿಸಬೇಕು ಎಂದು ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ದೆಹಲಿ ಮೆಟ್ರೋ ನಿಲ್ದಾಣಗಳು ಮತ್ತು ರೈಲುಗಳಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಬೆದರಿಕೆ ಹಾಕುವ ಹಲವಾರು ಗ್ರಾಫಿಟಿ ಕಾಣಿಸಿಕೊಂಡಿದ್ದು, ದೆಹಲಿ ಮುಖ್ಯಮಂತ್ರಿಗೆ ದೈಹಿಕವಾಗಿ ಹಾನಿ ಮಾಡಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಸಿಂಗ್, ಅತಿಶಿ ಮತ್ತು ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಏತನ್ಮಧ್ಯೆ, ಅರವಿಂದ್ ಕೇಜ್ರಿವಾಲ್ ಅವರ ನಿವಾಸದೊಳಗೆ ಥಳಿಸಲಾಗಿದೆ ಎಂಬ ಆಪ್ ಸಂಸದೆ ಸ್ವಾತಿ ಮಲಿವಾಲ್ ಅವರ ಆಪಾದನೆಯಿಂದ ಗಮನವನ್ನು ಬೇರೆಡೆ ಸೆಳೆಯಲು ಈ ಗ್ರಾಫಿಟಿ ಎಎಪಿಯ ತಂತ್ರ ಎಂದು ಸಚ್‌ದೇವ ಹೇಳಿದ್ದಾರೆ.

ಕೇಜ್ರಿವಾಲ್ ಅವರ ಮನೆಯಲ್ಲಿ ಮಲಿವಾಲ್ ಹಲ್ಲೆ ಘಟನೆಯ ಬಗ್ಗೆ ಅವರು ಯಾವಾಗ ಮೌನ ಮುರಿಯುತ್ತಾರೆ ಎಂಬುದು ನನ್ನ ಏಕೈಕ ಪ್ರಶ್ನೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸ್ವಾತಿ ಮಲಿವಾಲ್ ಬಗ್ಗೆ ಸಂಜಯ್ ಸಿಂಗ್ ಒಂದೇ ಒಂದು ಮಾತನ್ನೂ ಆಡಿಲ್ಲ ಎಂದು ಅವರು ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಮೇಲೆ ಅವರ ಪಕ್ಷದ ಕಾರ್ಯಕರ್ತರೇ ಎರಡು ಬಾರಿ ದಾಳಿ ನಡೆಸಿದ್ದಾರೆ ಎಂದು ಸಚ್‌ದೇವ ಹೇಳಿಕೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ಮೇಲೆ ಯಾವಾಗ ಶೂ ಎಸೆಯಬೇಕು ಎಂಬುದನ್ನು ಎಎಪಿ ನಿರ್ಧರಿಸಿದೆ. “ಈ ಕುಶಲತೆಗಳನ್ನು ಮತ್ತೆ ಮತ್ತೆ ಅನ್ವಯಿಸಲಾಗುವುದಿಲ್ಲ. ಇಂದು ಸಿಂಗ್ ಪ್ರಸ್ತುತಪಡಿಸಿದ ಸ್ಕ್ರಿಪ್ಟ್ ಕೇಜ್ರಿವಾಲ್ ಮೇಲೆ ಶೂಗಳನ್ನು ಎಸೆಯುವ ದಿನಗಳನ್ನು ಮತ್ತು ಅವರ ಮೇಲೆ ದಾಳಿ ಮಾಡುವ ದಿನಗಳನ್ನು ಎಎಪಿ ನಿರ್ಧರಿಸಿದೆ ಎಂದು ಸೂಚಿಸುತ್ತದೆ”

ಇದನ್ನೂ ಓದಿ: ಆಮ್ ಆದ್ಮಿ ಪಕ್ಷಕ್ಕೆ ವಿದೇಶಗಳಿಂದ 7 ಕೋಟಿ ದೇಣಿಗೆ; ಗೃಹ ಸಚಿವಾಲಯಕ್ಕೆ ಪತ್ರ ಬರೆದ ಇಡಿ

ಕೇಜ್ರಿವಾಲ್‌ಗೆ ಏನಾದರೂ ಸಂಭವಿಸಿದರೆ ಎಎಪಿಯೇ ಹೊಣೆ. ಹಾಗಾಗಿ ಅವರ ಭದ್ರತಾ ವ್ಯವಸ್ಥೆಯನ್ನು ದ್ವಿಗುಣಗೊಳಿಸುವಂತೆ ಅವರು ಪೊಲೀಸರು ಮತ್ತು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. “ಸುಳ್ಳುಗಳನ್ನು ಹೇಳುವುದು, ಅದನ್ನು ಹರಡುವುದು ಮತ್ತು ಹೊಸ ನಾಟಕವನ್ನು ಪ್ರದರ್ಶಿಸುವುದು ಆಮ್ ಆದ್ಮಿ ಪಕ್ಷದ ಲಕ್ಷಣವಾಗಿದೆ. ನಿರಂತರವಾಗಿ ಸುಳ್ಳು ಹೇಳುವುದು ಅವರ ಕೆಲಸದ ಶೈಲಿಯಾಗಿದೆ ಆದರೆ ಜನರು ಇನ್ನು ಮುಂದೆ ಅವರಿಂದ ಮೋಸ ಹೋಗುವುದಿಲ್ಲ” ಎಂದು ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ದೆಹಲಿಯಲ್ಲಿ ಮೇ 25 ರಂದು ಮತದಾನ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್