AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಗೆ ಬರುವ ಪ್ರಧಾನಿಗೆ ಹೂವಿನ ಸ್ವಾಗತ: ಅಭಿಮಾನ ತೋರಿದ ಇಕ್ಬಾಲ್ ಅನ್ಸಾರಿ

Iqbal Ansari wants Narendra Modi to be PM again: ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷದ ಸಾಧನೆ ಉತ್ತಮವಾಗಿದೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಬಾಬ್ರಿ ಮಸೀದಿ ಪರ ಕಕ್ಷಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ಬಯಸಿದ್ದಾರೆ. ಅಯೋಧ್ಯೆಗೆ ಇಂದು ಭಾನುವಾರ ಆಮಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಹೂವಿನಿಂದ ಸ್ವಾಗತಿಸಲು ತಯಾರಾಗಿರುವುದಾಗಿ ಅನ್ಸಾರಿ ಹೇಳಿದ್ದಾರೆ. ಅಯೋಧ್ಯೆ ಇರುವ ಫೈಜಾಬಾದ್ ಸೇರಿದಂತೆ ಉತ್ತರಪ್ರದೇಶದ 14 ಸ್ಥಾನಗಳಿಗೆ ಮೇ 20ರಂದು ಮತದಾನ ನಡೆಯುತ್ತಿದೆ.

ಅಯೋಧ್ಯೆಗೆ ಬರುವ ಪ್ರಧಾನಿಗೆ ಹೂವಿನ ಸ್ವಾಗತ: ಅಭಿಮಾನ ತೋರಿದ ಇಕ್ಬಾಲ್ ಅನ್ಸಾರಿ
ಇಕ್ಬಾಲ್ ಅನ್ಸಾರಿ, ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 05, 2024 | 5:01 PM

Share

ನವದೆಹಲಿ, ಮೇ 5: ಪ್ರಧಾನಿ ನರೇಂದ್ರ ಮೋದಿ ಇಂದು ಭಾನುವಾರ ಉತ್ತರಪ್ರದೇಶದ ಅಯೋಧ್ಯೆ ನಗರದಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆ (Lok Sabha elections 2024) ನಡುವೆ ಅವರು ಮೊದಲ ಬಾರಿಗೆ ಅಯೋಧ್ಯೆಗೆ ಹೋಗುತ್ತಿರುವುದು. ಪ್ರಧಾನಿ ಭೇಟಿಗಾಗಿ ಅಯೋಧ್ಯೆಯಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ರಾಮಮಂದಿರವನ್ನು ಸುಂದರವಾಗಿ ಅಲಂಕರಿಸಲಾಗಿದೆ. ಅವರ ಭೇಟಿಯ ಬಗ್ಗೆ ಜನರಲ್ಲಿ ಅಪಾರ ಉತ್ಸಾಹವಿದೆ. ಸಂಜೆ 7 ಗಂಟೆ ಸುಮಾರಿಗೆ ರಾಮಮಂದಿರದಲ್ಲಿರುವ ರಾಮಲಲ್ಲಾದ ದರ್ಶನ ಮಾಡಲಿದ್ದಾರೆ. ಇದಾದ ಬಳಿಕ ನರೇಂದ್ರ ಮೋದಿ ಅವರಿಂದ ರೋಡ್ ಶೋ ನಡೆಯಲಿದೆ.

ಇದೇ ವೇಳೆ, ಬಾಬ್ರಿ ಮಸೀದಿ ರಾಮ ಜನ್ಮಭೂಮಿ ವಿವಾದದ ಕೋರ್ಟ್ ಕೇಸ್​ನಲ್ಲಿ ಮಸೀದಿ ಪರವಾಗಿ ಕಕ್ಷಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ಪ್ರಧಾನಿ ಬಗ್ಗೆ ಶ್ಲಾಘನೆಯ ಮಾತುಗಳನ್ನಾಡಿದ್ದಾರೆ. ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ತಮಗೆ ಖುಷಿ ಕೊಟ್ಟಿದೆ ಎಂದ ಅವರು, ಕಳೆದ 10 ವರ್ಷದ ಮೋದಿ ಸರ್ಕಾರದ ಸಾಧನೆಯನ್ನು ಪ್ರಶಂಸಿಸಿದ್ದು, ಮತ್ತೊಮ್ಮೆ ಅವರೇ ಪ್ರಧಾನಿ ಆಗಲಿ ಎಂದು ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಯೋಧ್ಯೆ ಮಂಗಳಕರವಾಗಿದೆ. ಅವರ ರ್ಯಾಲಿ ಯಶಸ್ವಿಯಾಗಲಿ ಎಂದು ಹೇಳಿರುವ ಇಕ್ಬಾಲ್ ಅನ್ಸಾರಿ, ಅಯೋಧ್ಯೆಗೆ ಬರುವ ಪ್ರಧಾನಿ ಅವರನ್ನು ಹೂವಿನ ಅರ್ಚೆ ಮೂಲಕ ಸ್ವಾತಿಸಲು ಸಿದ್ಧರಿರುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಹೇಮಂತ್ ಕರ್ಕರೆಯನ್ನು ಕೊಂದಿದ್ದು ಪೊಲೀಸರು, ಕಸಬ್​ ನಿರಪರಾಧಿ ಎಂದ ಕಾಂಗ್ರೆಸ್​ ನಾಯಕ

ಇಕ್ಬಾಲ್ ಅನ್ಸಾರಿ ಮಸೀದಿ ಮಂದಿರ ವಿವಾದದಲ್ಲಿ ಬಾಬ್ರಿ ಪರ ಕಕ್ಷಿದಾರರಾಗಿದ್ದರೂ ಸುಪ್ರೀಂಕೋರ್ಟ್​ನಿಂದ ಹಿಂದೂಗಳ ಪರವಾಗಿ ತೀರ್ಪು ಬಂದಾಗ ಅದನ್ನು ಸ್ವಾಗತಿಸಿದ ಕೆಲವೇ ಮುಸ್ಲಿಮರಲ್ಲಿ ಅವರೂ ಒಬ್ಬರು.

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ದಿನಚರಿ

ನರೇಂದ್ರ ಮೋದಿ ಅವರು ನಿನ್ನೆ ಶನಿವಾರ ಸಂಜೆ ಉತ್ತರಪ್ರದೇಶಕ್ಕೆ ಆಗಮಿಸಿದರು. ಇಂದು ಮಧ್ಯಾಹ್ನ 2:45ಕ್ಕೆ ಇತಾವಾ ಎಂಬ ಎಸ್​ಬಿ ಭದ್ರಕೋಟೆಯಲ್ಲಿ ಭಾಷಣ ಮಾಡಿದ್ದಾರೆ. ಧೌರಾಹರ ಎಂಬಲ್ಲಿ ಮತ್ತೊಂದು ಚುನಾವಣಾ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇದಾದ ಬಳಿಕ ಅಯೋಧ್ಯೆ ತಲುಪಲಿರುವ ಮೋದಿ, ಸಂಜೆ 7ಕ್ಕೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬಾಲರಾಮನ ದರ್ಶನದ ಬಳಿಕ ಅವರು ಅಯೋಧ್ಯೆಯಲ್ಲಿ 2 ಕಿಮೀ ರೋಡ್​ಶೋ ನಡೆಸಲಿದ್ದಾರೆ. ಸುಗ್ರೀವ ಕೋಟೆಯಿಂದ ಲತಾ ಚೌಕ್​ವರೆಗೆ ಈ ರ್ಯಾಲಿ ಇರಲಿದೆ. ಈ ಮಾರ್ಗದುದ್ದಕ್ಕೂ ಪುಷ್ಟಗಳಲ್ಲಿ ಅಲಂಕಾರಣ ಮಾಡಲಾಗಿದೆ. ಕಟ್ಟುನಿಟ್ಟಿನ ಭದ್ರತೆಯನ್ನೂ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ, ಮೂವರು ಭಾರತೀಯರ ಬಂಧನ: ಜೈಶಂಕರ್​ ಪ್ರತಿಕ್ರಿಯೆ

ಮೇ 20 ರಂದು ಅಯೋಧ್ಯೆಯಲ್ಲಿ ಮತದಾನ

ಮೇ 20 ರಂದು ಅಯೋಧ್ಯೆ ಇರುವ ಫೈಜಾಬಾದ್‌ನಲ್ಲಿ ಐದನೇ ಹಂತದ ಮತದಾನ ನಡೆಯಲಿದೆ. ಫೈಜಾಬಾದ್​ನಲ್ಲಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಪರ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ. ಲಲ್ಲು ಸಿಂಗ್ 2014 ಮತ್ತು 2019 ರಲ್ಲಿ ಸತತ ಎರಡು ಬಾರಿ ಗೆದ್ದಿದ್ದರು. ಬಿಜೆಪಿ ಸತತ ಮೂರನೇ ಬಾರಿಗೆ ಅವರನ್ನು ಇಲ್ಲಿಂದ ಕಣಕ್ಕಿಳಿಸಿದೆ. ರಾಮ್ ಲಲ್ಲಾ ದರ್ಶನದ ನಂತರ ಪ್ರಧಾನಿ ಮೋದಿಯವರ ಮೆಗಾ ರೋಡ್ ಶೋ ನಡೆಯಲಿದೆ. ಸುಮಾರು ಎರಡು ಕಿಲೋಮೀಟರ್ ರೋಡ್ ಶೋ ನಡೆಯಲಿದೆ. ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಮೇ 20 ರಂದು ಫೈಜಾಬಾದ್ ಸೇರಿದಂತೆ ಉತ್ತರ ಪ್ರದೇಶದ 14 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ