ಬಾಗಲಕೋಟೆ ಲೋಕಸಭಾ ಚುನಾವಣೆ 2024 ಫಲಿತಾಂಶ: ಐದನೇ ಬಾರಿ ಗೆದ್ದು ದಾಖಲೆ ನಿರ್ಮಿಸಿದ ಗದ್ದಿಗೌಡರ್​

Bagalkot Lok Sabha Election Results 2024 Live Counting Updates: ಲೋಕಸಭಾ ಚುನಾವಣೆ-2024 ಫಲಿತಾಂಶ ಪ್ರಕಟವಾಗಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪಿಸಿ ಗದ್ದಿಗೌಡರ್ ಅವರು ಗೆದ್ದಿದ್ದಾರೆ. ಕಾಂಗ್ರೆಸ್​ ನಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ, ಸಂಯುಕ್ತ ಪಾಟೀಲ್​​ ಅವರು ಸೋತಿದ್ದಾರೆ.

ಬಾಗಲಕೋಟೆ ಲೋಕಸಭಾ ಚುನಾವಣೆ 2024 ಫಲಿತಾಂಶ: ಐದನೇ ಬಾರಿ ಗೆದ್ದು ದಾಖಲೆ ನಿರ್ಮಿಸಿದ ಗದ್ದಿಗೌಡರ್​
ಪಿಸಿ ಗದ್ದಿಗೌಡರ್, ಸಂಯಕ್ತಾ ಪಾಟೀಲ್​
Follow us
ವಿವೇಕ ಬಿರಾದಾರ
|

Updated on:Jun 04, 2024 | 3:15 PM

ಬಾಗಲಕೋಟೆ, ಜೂನ್​ 4: ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ (Bagalkot Lok Sabha Constituency) ಬಿಜೆಪಿ (BJP) ಈ ಬಾರಿಯೂ ಕೂಡ ಪಿಸಿ ಗದ್ದಿಗೌಡರ್ (PC Gaddigoudar)​ ಅವರು ಗೆಲುವಿನ ನಗೆ ಬೀರಿದ್ದಾರೆ. ಸತತ ನಾಲ್ಕು ಬಾರಿ ಗೆದ್ದಿದ್ದ ಪಿಸಿ ಗದ್ದಿಗೌಡರ್​ ಅವರು ಐದನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆ ನಿರ್ಮಿಸಿದ್ದಾರೆ . ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ,​ ಯುವ ಮುಖ ಸಂಯಕ್ತಾ ಪಾಟೀಲ್​ (Samyukta Shivanand Patil) ಅವರನ್ನು ಅಖಾಡಕ್ಕಿಳಿಸಿತ್ತು. ಆದರೆ ಸಂಯುಕ್ತ ಪಾಟೀಲ್​ ಅವರಿಗೆ ಗಜಕೇಸರಿ ಯೋಗ ಕೈ ಹಿಡಿದಿಲ್ಲ, ಸೋಲುಂಡಿದ್ದಾರೆ.

ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,06,183 ಮತದಾರರಿದ್ದಾರೆ. ಇದರಲ್ಲಿ 13,12,319 ಮತದಾರರು ಮತ ಚಲಾಯಿಸಿದ್ದಾರೆ. ಒಟ್ಟು ಶೇ 72.66 ರಷ್ಟು ಮತದಾನವಾಗಿದೆ.

ಪಿಸಿ ಗದ್ದಿಗೌಡರ: ಮತ ಅಂತರಗಳಿಂದ ಮುನ್ನಡೆ

ಸಂಯುಕ್ತ ಪಾಟೀಲ್​: 

ಪಿಸಿ ಗದ್ದಿಗೌಡರ ಕಳೆದ ಒಂದು ದಶಕದಿಂದ ಬಾಗಲೋಟೆ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಪಿಸಿ ಗದ್ದಿಗೌಡರ್​ ಅವರು 6,64,638 ಮತಗಳನ್ನು ಪಡೆದಿದ್ದರು. ಇನ್ನು ಇವರ ವಿರುದ್ಧ ನಿಂತಿದ್ದ ವೀಣಾ ಕಾಶಪ್ಪನವರ್​ 4,96,451 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಈ ಮೂಲಕ ವೀಣಾ ಕಾಶಪ್ಪನವರ್ ಅವರು ಪಿಸಿ ಗದ್ದಿಗೌಡರ್ ಅವರ ಎದುರು ಪರಾಭವಗೊಂಡಿದ್ದರು.

2014ರ ಲೋಕಸಭಾ ಚುನಾವಣೆಯಲ್ಲಿ ಪಿಸಿ ಗದ್ದಿಗೌಡರ್ ಅವರು ವೀಣಾ ಕಾಶಪ್ಪನವರ್​ ಅವರ ವಿರುದ್ಧ ಒಂದು ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈ ಚುನಾವಣೆಯಲ್ಲಿ ಪಿಸಿ ಗದ್ದಿಗೌಡರ್​ 5,71,548 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್​ನ ವೀಣಾ ಕಾಶಪ್ಪನವರ್​ 4,54,988 ಮತಗಳನ್ನು ಪಡೆದಿದ್ದರು.

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್​ ಹಂಚಿಕೆ ಕಾಂಗ್ರೆಸ್​ಗೆ ಕಗ್ಗಂಟಾಗಿತ್ತು. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​ ಅವರ ಪತ್ನಿ ವೀಣಾ ಕಾಶಪ್ಪನವರ್​ ಅವರು ಕೂಡ ಟಿಕೆಟ್​ಗಾಗಿ ಸಾಕಷ್ಟು ಪ್ರಯತ್ನ ಪಟ್ಟರೂ ಸಿಗಲಿಲ್ಲ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:28 am, Tue, 4 June 24

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್