Ballari Lok Sabha Election Result 2024: ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಸೋಲು, ಇ ತುಕಾರಾಂಗೆ ಗೆಲುವು

Ballari Lok Sabha Election Results 2024: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಸೋಲಾಗಿದೆ. ಸಂಡೂರಿನ ನಾಲ್ಕು ಬಾರಿ ಶಾಸಕರಾಗಿರುವ ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಮ್ ಅವರಿಗೆ ಗೆಲುವಾಗಿದೆ.

Ballari Lok Sabha Election Result 2024: ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಸೋಲು, ಇ ತುಕಾರಾಂಗೆ ಗೆಲುವು
ಇ. ತುಕಾರಾಂ
Follow us
|

Updated on:Jun 04, 2024 | 10:17 PM

ಬಳ್ಳಾರಿ, ಜೂನ್​ 04: ಗಣಿನಾಡು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ (Lok Sabha Elections) ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸೋಲಾಗಿದೆ. ಕಾಂಗ್ರೆಸ್​ ಅಭ್ಯರ್ಥಿ ಇ.ತುಕಾರಾಂ ಗೆಲವು ಸಾಧಿಸಿದ್ದಾರೆ.98,992 ಮತಗಳಿಂದ ಇ.ತುಕಾರಾಮ್‌ ಜಯ ಗಳಿಸಿದ್ದು, 6,31,853 ಮತಗಳಿಂದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲುಗೆ ಸೋತ್ತಿದ್ದಾರೆ. ಒಟ್ಟು 8 ಕ್ಷೇತ್ರದಲ್ಲಿ ಕಾಂಗ್ರೆಸ್ 730845 ಮತಗಳು ಪಡೆದುಕೊಂಡಿದೆ.

ಕ್ಷೇತ್ರದಲ್ಲಿ ಸುಮಾರು 1.6 ಮಿಲಿಯನ್ ಮತದಾರರಿದ್ದಾರೆ. ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಸುಮಾರು 21.6% ಮತ್ತು ಪರಿಶಿಷ್ಟ ಪಂಗಡಗಳು 18.38%. ಹೂವಿನ ಹಡಗಲಿ, ಹಗರಿಬೊಮ್ಮನಹಳ್ಳಿ, ವಿಜಯನಗರ, ಕಂಪ್ಲಿ, ಬಳ್ಳಾರಿ, ಬಳ್ಳಾರಿ ನಗರ, ಸಂಡೂರು, ಕೂಡ್ಲಗಿ ಎಂಟು ವಿಧಾನಸಭಾ ಕ್ಷೇತ್ರಗಳು ಬಳ್ಳಾರಿ (Ballari) ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತವೆ. ಬಳ್ಳಾರಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಕಾಂಗ್ರೆಸ್​ 15 ಬಾರಿ ಗೆಲುವು ಸಾಧಿಸಿತ್ತು. ಆದರೆ, 2004 ರಿಂದ ಬಿಜೆಪಿ ಸತತವಾಗಿ ನಾಲ್ಕು ಬಾರಿ ವಿಜಯಶಾಲಿಯಾಗಿತ್ತು. 2014 ರಲ್ಲಿ ಬಿಜೆಪಿ ಈ ಸ್ಥಾನವನ್ನು ಗೆದ್ದುಕೊಂಡಿತು, ಆದರೆ 2018ರ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಪಾಲಾಯಿತು.

ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಭಾರಿ ಪೈಪೋಟಿ ಇತ್ತು. ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯಿಂದ ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಸಚಿವ ಬಿ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್, ಅಳಿಯ ಮುರಳಿ ಕೃಷ್ಣ, ವಕೀಲ ಗುಜ್ಜಲ ನಾಗರಾಜ್ ಸೇರಿದಂತೆ ಮುಂತಾದವರು ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಅಂತಿಮವಾಗಿ ಕಾಂಗ್ರೆಸ್ ಇ.ತುಕಾರಾಂ ಪುತ್ರಿ ಚೈತನ್ಯ ಅವರನ್ನು ಅಖಾಡಕ್ಕಿಳಿಸಲು ನಿರ್ಧರಿಸಿತ್ತು. ಆದರೆ ವಿರೋಧ ಪಕ್ಷ ಬಿಜೆಪಿಯಿಂದ ಶ್ರೀರಾಮುಲು ಸ್ಪರ್ಧಿಸುತ್ತಿದ್ದಂತೆಯೇ ಪ್ಲ್ಯಾನ್ ಬದಲಾಯಿಸಿದ್ದ ಇ.ತುಕಾರಾಂ ಅವರನ್ನು ಕಣಕ್ಕಿಳಿಸಿತ್ತು.

2019ರ ಚುನಾವಣೆಯಲ್ಲಿ ಕ್ಷೇತ್ರವು ಬಿಜೆಪಿ ಪಾಲಾಯಿತು. ಬಿಜೆಪಿ ಅಭ್ಯರ್ಥಿ ವೈ ದೇವೇಂದ್ರಪ್ಪ 601,388 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ 575,681 ಮತಗಳೊಂದಿಗೆ ಎರಡನೇ ಸ್ಥಾನ ಪಡೆದುಕೊಂಡಿದ್ದರು. ಬಿಎಸ್ಪಿ ಅಭ್ಯರ್ಥಿ ಕೆ.ಗೂಳಪ್ಪ 9,961 ಮತಗಳನ್ನು ಪಡೆದುಕೊಳ್ಳುವ ಮೂಲಕ ಮೂರನೇ ಸ್ಥಾನದಲ್ಲಿದ್ದರು. ಆ ವೇಳೆ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶೇ.69.62ರಷ್ಟು ಮತದಾನವಾಗಿತ್ತು.

2014ರ ಲೋಕಸಭೆ ಚುನಾವಣೆಯಲ್ಲಿ ರೆಡ್ಡಿ ಸಹೋದರರ ನಿಕಟವರ್ತಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ ಶ್ರೀರಾಮುಲು ಈ ಕ್ಷೇತ್ರದಿಂದ ಜಯಗಳಿಸಿದ್ದರು. ಆ ಮೂಲಕ ಕಾಂಗ್ರೆಸ್‌ನ ಎನ್‌ವೈ ಹನುಮಂತಪ್ಪ ಅವರನ್ನು 85,000 ಮತಗಳಿಂದ ಸೋಲಿಸಿದ್ದರು. ಈ ಚುನಾವಣೆಯಲ್ಲಿ ಸರಿಸುಮಾರು 70% ಮತದಾನವಾಗಿತ್ತು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:45 am, Tue, 4 June 24

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ