ಬೆಂಗಳೂರು ಉತ್ತರ ಲೋಕಸಭಾ ಚುನಾವಣೆ 2024 ಫಲಿತಾಂಶ: ಶೋಭಾ ಕರಂದ್ಲಾಜೆ ಗೆಲುವು

Bengaluru North Lok Sabha Election Result 2024 Live Counting Updates: 2024ರ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶ ಪ್ರಕಟವಾಗಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಗೆಲುವು ಕಂಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಚುನಾವಣೆ 2024 ಫಲಿತಾಂಶ: ಶೋಭಾ ಕರಂದ್ಲಾಜೆ ಗೆಲುವು
ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ಗೆಲುವು
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 04, 2024 | 3:37 PM

ಬಿಜೆಪಿಯ ಭದ್ರಕೋಟೆಯಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ(Bengaluru North Lok Sabha Constituency), ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಮತದಾರರನ್ನು ಹೊಂದಿದೆ. ಸತತ ನಾಲ್ಕು ಅವಧಿಯಿಂದ ಬೆಂಗಳೂರು ಉತ್ತರದಲ್ಲಿ ಕಮಲ ಅರಳುತ್ತಿದ್ದು, ಅದರಂತೆ ಈ ಬಾರಿಯೂ ಶೋಭಾ ಕರಂದ್ಲಾಜೆ ಗೆಲ್ಲುವ ಮೂಲಕ ಮತ್ತೊಮ್ಮೆ ಕಮಲ ಅರಳಿಸಿದ್ದಾರೆ. ಈ ಬಾರಿ ಪ್ರಧಾನಿ ಮೋದಿ ಅವರ ಅಲೆಯ ವಿರುದ್ದ ಗ್ಯಾರಂಟಿ ಕೂಗು ಸದ್ದು ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಇನ್ನು 2004 ರಿಂದ ನಿವೃತ್ತ ಪೊಲೀಸ್​ ಅಧಿಕಾರಿಯಾಗಿದ್ದ ಎಚ್​ಟಿ ಸಾಂಗ್ಲಿಯಾನ ಅವರು ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದಿದ್ದರು. ಇದಾದ ಬಳಿಕ ಬಿಜೆಪಿ ಸತತ ಗೆಲುವಿನ ನಗೆ ಬೀರುತ್ತಾ ಬರುತ್ತಿದೆ.

ಹೊರಗಿನಿಂದ ಬಂದ ಹಾಲಿ ಸಂಸದ ಸದಾನಂದ ಗೌಡರು ಎರಡು ಬಾರಿ ಅಂದರೆ 2014 ಮತ್ತು 2019 ರಲ್ಲಿ ಬೆಂಗಳೂರು ಉತ್ತರದಿಂದ ಗೆದ್ದಿದ್ದರು. ಆದರೆ, ಈ ಬಾರಿ ಉಡುಪಿ-ಚಿಕ್ಕಮಗಳೂರು ಹಾಲಿ ಸಂಸದೆ ಆಗಿರುವ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್​ ನೀಡಲಾಗಿತ್ತು. ಶೋಭಾ ಹೆಸರು ಘೋಷಣೆ ಆಗುತ್ತಿದ್ದಂತೆ ಗೋ ಬ್ಯಾಕ್​  ಶೋಭಕ್ಕ ಎಂಬ ಭಿತ್ತಿ ಪತ್ರಗಳು ಕ್ಷೇತ್ರದಲ್ಲಿ ಹರಿದಾಡಿತ್ತು. ಜೊತೆಗೆ ಯಾರಾದರೂ ಒಕ್ಕಲಿಗ ನಾಯಕರಿಗೆ ಅಥವಾ ಸದಾನಂದಗೌಡರಿಗೆ ಟಿಕೆಟ್​ ನೀಡುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದರು. ಈ ಮಧ್ಯೆ ಶೋಭಾ ಕರಂದ್ಲಾಜೆ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಇತ್ತ ಕಾಂಗ್ರೆಸ್​ ಪಕ್ಷದಿಂದ ಈ ಬಾರಿ ಹೊಸ ಅಭ್ಯರ್ಥಿ ಎಂ ವಿ ರಾಜೀವ್​ ಗೌಡ ಅವರು ಸ್ಪರ್ಧೆ ಮಾಡಿದ್ದಾರೆ. 1951 ರಿಂದ ಲೋಕಸಭಾ ಚುನಾವಣೆ ಆರಂಭವಾಗಿ 2004 ರವರೆಗೆ ಬೆಂಗಳೂರು ಉತ್ತರ ಕಾಂಗ್ರೆಸ್​ ಭದ್ರಕೋಟೆಯಾಗಿತ್ತು. ಇನ್ನು ಕಳೆದ ಬಾರಿ ಪಕ್ಷದ ವರಿಷ್ಠರ ಒತ್ತಾಯದ ಮೆರೆಗೆ, ಒಲ್ಲದ ಮನಸ್ಸಿನಿಂದಲೇ ಕೃಷ್ಣಬೈರೇಗೌಡರು ನಿಂತು, ಸದಾನಂದಗೌಡರ ವಿರುದ್ದ ಸೋಲುಂಡಿದ್ದರು. ಆದರೆ, ಈ ಬಾರಿ ರಾಜೀವ್​ ಗೌಡ ಅವರಿಗೆ ಕಾಂಗ್ರೆಸ್​ನ ಗ್ಯಾರಂಟಿ ಅಸ್ತ್ರವಿದ್ದು, ಗೆಲುವು ನಮ್ಮದೆ ಎನ್ನುವ ಲೆಕ್ಕಾಚಾರದಲ್ಲಿದ್ದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:39 am, Tue, 4 June 24

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ