AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಮೊದಲ ಚುನಾವಣೆಯಲ್ಲೇ ಭರ್ಜರಿ ಜಯ ಕಂಡ ಕಂಗನಾ ರಣಾವತ್; ಮೋದಿ ಹೆಸರಿಂದಲೇ ಈ ಗೆಲುವು ಎಂದ ನಟಿ

Mandi Lok Sabha Election Results: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಭಾರೀ ಅಂತರದಿಂದ ಗೆಲುವು ಕಂಡಿದ್ದಾರೆ. ಮೊದಲ ಚುನಾವಣೆಯಲ್ಲೇ 516382 ಮತಗಳನ್ನು ಪಡೆದುಕೊಂಡಿದ್ದಾರೆ.

Kangana Ranaut: ಮೊದಲ ಚುನಾವಣೆಯಲ್ಲೇ ಭರ್ಜರಿ ಜಯ ಕಂಡ ಕಂಗನಾ ರಣಾವತ್; ಮೋದಿ ಹೆಸರಿಂದಲೇ ಈ ಗೆಲುವು ಎಂದ ನಟಿ
ಕಂಗನಾ ರಣಾವತ್
ಸುಷ್ಮಾ ಚಕ್ರೆ
|

Updated on:Jun 04, 2024 | 4:28 PM

Share

ಮಂಡಿ: 2024ರ ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಮಂಡಿಯಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ (Kangana Ranaut) ಗೆಲುವು ಸಾಧಿಸಿದ್ದಾರೆ. ಕಂಗನಾ ರಣಾವತ್ ಅವರು ಹಿಮಾಚಲ ಪ್ರದೇಶದ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರವನ್ನು ಬಿಜೆಪಿಯ ತೆಕ್ಕೆಗೆ ಹಾಕಿದ್ದಾರೆ. ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸ್ಥಾನವನ್ನು ಗೆದ್ದಿದ್ದಾರೆ. ಕಂಗನಾ ರಣಾವತ್ 516382 ಮತಗಳನ್ನು ಪಡೆಯುವ ಮೂಲಕ 71663 ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಐಎನ್‌ಸಿಯ ವಿಕ್ರಮಾದಿತ್ಯ ಸಿಂಗ್ ಅವರು 444719 ಮತಗಳೊಂದಿಗೆ ಹಿಂದುಳಿದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಂಗನಾ ರಣಾವತ್, ಮಂಡಿಯು ಹೆಣ್ಣುಮಕ್ಕಳ ಅವಮಾನಗಳನ್ನು ಸಹಿಸುವುದಿಲ್ಲ. ಇದು (ಹಿಮಾಚಲ ಪ್ರದೇಶ) ನನ್ನ ‘ಜನ್ಮಭೂಮಿ’. ನಾನು ಪ್ರಧಾನಿ ನರೇಂದ್ರ ಮೋದಿಯ ಹೆಸರಿನಲ್ಲೇ ಗೆಲುವು ಕಂಡಿದ್ದೇನೆ. ನಾನು ಇಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ. ಹಾಗಾಗಿ, ನಾನು ಗೆದ್ದ ಬಳಿಕ ಮುಂಬೈಗೆ ಹೋಗುತ್ತಿಲ್ಲ. ನಾನು ಎಲ್ಲಿಯೂ ಹೋಗುವುದಿಲ್ಲ. ನನ್ನ ಪ್ರತಿಸ್ಪರ್ಧಿ ತಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಳ್ಳುವ ಮೂಲಕ ಇಲ್ಲಿಂದ ಹೊರಡಬಹುದು ಎಂದು ಹೇಳುವ ಮೂಲಕ ಬಾಲಿವುಡ್​ಗೆ ಗುಡ್​ಬೈ ಹೇಳುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: LS Exit Poll Results 2024 Highlights: ಲೋಕಸಭೆ ಚುನಾವಣೆ ಎಕ್ಸಿಟ್​ ಪೋಲ್ ಹೈಲೈಟ್ಸ್

ಕಂಗನಾ ಬಿಜೆಪಿ ಪಕ್ಷಕ್ಕೆ ಸೇರಿದಾಗಿನಿಂದ ಅವರು ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸನಾತನ ಮೌಲ್ಯಗಳನ್ನು ರಕ್ಷಿಸಲು ಮೋದಿ ಸರ್ಕಾರದ ಬದ್ಧತೆಯ ಬಗ್ಗೆ ಅವರು ಮತದಾರರಿಗೆ ಭರವಸೆ ನೀಡಿದ್ದರು. ನರೇಂದ್ರ ಮೋದಿ ಅಧಿಕಾರದಲ್ಲಿರುವವರೆಗೂ ಧರ್ಮಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ಅವರು ಹೇಳಿದ್ದರು.

37 ವರ್ಷದ ಬಾಲಿವುಡ್ ತಾರೆಯಾಗಿರುವ ಕಂಗನಾ ರಣಾವತ್ ಅವರು ಪ್ರತಿಸ್ಪರ್ಧಿಯಾದ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಅವರು ಈಗ “ತನ್ನ ಬ್ಯಾಗ್‌ಗಳನ್ನು ಪ್ಯಾಕ್ ಮಾಡಿ ಹೊರಡಬೇಕಾಗಬಹುದು” ಎಂದು ಗೇಲಿ ಮಾಡಿದ್ದಾರೆ. ವಿಕ್ರಮಾದಿತ್ಯ ಸಿಂಗ್ ಈ ಹಿಂದೆ ಚುನಾವಣೆಯ ವೇಳೆ ಹೇಳಿಕೆ ನೀಡುವಾಗ ಕಂಗನಾ ರಣಾವತ್ ಮಂಡಿಯನ್ನು ಬಿಟ್ಟು ಚುನಾವಣೆ ಮುಗಿದ ನಂತರ ಪ್ಯಾಕ್ ಅಪ್ ಮಾಡಿ ಮುಂಬೈಗೆ ಹಿಂತಿರುಗುತ್ತಾರೆ ಎಂದು ಲೇವಡಿ ಮಾಡಿದ್ದರು. ಅದಕ್ಕೆ ಇದೀಗ ಕಂಗನಾ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಹಾಸನ ಲೋಕಸಭಾ ಚುನಾವಣೆ 2024 ಫಲಿತಾಂಶ: ಪ್ರಜ್ವಲ್​ ರೇವಣ್ಣಗೆ ಸೋಲು, ಕಾಂಗ್ರೆಸ್​ಗೆ ಗೆಲುವು

ಹೆಣ್ಣಿನ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿದರೆ ಅದರ ಪರಿಣಾಮವನ್ನು ಅವರೇ ಅನುಭವಿಸಬೇಕಾಗುತ್ತದೆ. ಅದು ಇಂದು ನಾವು ಮುನ್ನಡೆ ಸಾಧಿಸಿದ ರೀತಿಯಿಂದ ಸ್ಪಷ್ಟವಾಗುತ್ತಿದೆ. ಮಂಡಿ ಹೆಣ್ಣುಮಕ್ಕಳ ಅವಮಾನಗಳನ್ನು ಸಹಿಸುವುದಿಲ್ಲ ಎಂದು ಕಂಗನಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Tue, 4 June 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!