ಬಿಜೆಪಿ ನೇತೃತ್ವದ ಎನ್‌ಡಿಎ ಸಭೆ ಮುಕ್ತಾಯ; ಮೋದಿಯನ್ನೇ ನಾಯಕರಾಗಿ ಆಯ್ಕೆ ಮಾಡಿದ ಮೈತ್ರಿಕೂಟ

ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕರೂ ಉಪಸ್ಥಿತರಿದ್ದರು.

ಬಿಜೆಪಿ ನೇತೃತ್ವದ ಎನ್‌ಡಿಎ ಸಭೆ ಮುಕ್ತಾಯ; ಮೋದಿಯನ್ನೇ ನಾಯಕರಾಗಿ ಆಯ್ಕೆ ಮಾಡಿದ ಮೈತ್ರಿಕೂಟ
ಎನ್​​ಡಿಎ ಸಭೆ
Follow us
ರಶ್ಮಿ ಕಲ್ಲಕಟ್ಟ
|

Updated on:Jun 05, 2024 | 7:21 PM

ದೆಹಲಿ ಜೂನ್ 05: ನವದೆಹಲಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಬಿಜೆಪಿ (BJP) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಹಿರಿಯ ನಾಯಕರು ಸರ್ಕಾರ ರಚನೆ ಬಗ್ಗೆ  ಚರ್ಚಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ (Lok sabha Elections) ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಬಹುಮತ ಗಳಿಸಿದ ಒಂದು ದಿನದ ನಂತರ ಈ ಸಭೆ ನಡೆದಿದ್ದು, ಇದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೂರನೇ ಅವಧಿಗೆ ದಾರಿ ಮಾಡಿಕೊಟ್ಟಿದೆ. ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದರು. ಬಡವರು, ಮಹಿಳೆಯರು, ಯುವಕರು, ರೈತರು ಮತ್ತು ಸಮಾಜದ ವಂಚಿತ ವರ್ಗಗಳ ಸೇವೆಗೆ ಮೈತ್ರಿ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುವ ನಿರ್ಣಯವನ್ನು ಎನ್‌ಡಿಎ ನಾಯಕರು ಅಂಗೀಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಬುಧವಾರದ ನಂತರ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ ಎಂದು ಟಿವಿ ಸುದ್ದಿ ವಾಹಿನಿಗಳು ವರದಿ ಮಾಡಿವೆ.

NDA ಸಭೆ

ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕರೂ ಉಪಸ್ಥಿತರಿದ್ದರು.

ಟಿಡಿಪಿ, ಜೆಡಿಯು, ಶಿಂಧೆ ನೇತೃತ್ವದ ಶಿವಸೇನಾ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಕ್ರಮವಾಗಿ 16, 12, 7 ಮತ್ತು 5 ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ.

“ಎನ್‌ಡಿಎ ಸಭೆಯನ್ನು ಪ್ರಧಾನಿ ನಿವಾಸದಲ್ಲಿ ನಡೆಸಲಾಯಿತು, ಇದರಲ್ಲಿ ಸಿಎಂ (ನಿತೀಶ್ ಕುಮಾರ್) ಕೂಡ ಭಾಗವಹಿಸಿದ್ದರು. ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದು, ಮೂರನೇ ಬಾರಿಗೆ ಎನ್‌ಡಿಎಗೆ ಈ ಜನಾದೇಶಕ್ಕಾಗಿ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶೀಘ್ರದಲ್ಲೇ ರಚನೆಯಾಗಲಿದ್ದು, ಶೀಘ್ರದಲ್ಲಿಯೇ ಎಲ್ಲ ಸಂಸದರ ಸಭೆ ನಡೆಯಲಿದೆ ಎಂದು ಜೆಡಿಯು ಸಂಸದ ಸಂಜಯ್ ಕುಮಾರ್ ಝಾ ಹೇಳಿದ್ದಾರೆ.

ಏಕನಾಥ್ ಶಿಂಧೆ ಅವರು ಸರ್ಕಾರ ರಚನೆಯಲ್ಲಿ ಮೋದಿಯನ್ನು ಬೆಂಬಲಿಸಲು ದೆಹಲಿಗೆ ಆಗಮಿಸಿದ್ದಾರೆ ಎಂದು ಹೇಳಿದರು. “ಮೋದಿಜಿ ಬಹುಮತ ಪಡೆದಿದ್ದಾರೆ. ಮೋದಿಜಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚಿಸಲಿದೆ” ಎಂದು ಶಿಂಧೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ ಹೊಸ ಸರ್ಕಾರದ ರೂಪುರೇಷೆಗಳನ್ನು ತ್ವರಿತವಾಗಿ ರೂಪಿಸಿದರೆ ಅದು ವಾರಾಂತ್ಯದಲ್ಲಿ ನಡೆಯಲಿದೆ ಎಂಬ ಅಭಿಪ್ರಾಯವು ಮೈತ್ರಿಕೂಟದ ಕೆಲವು ಸದಸ್ಯರಲ್ಲಿದೆ. ಟಿಡಿಪಿ ಮತ್ತು ಜೆಡಿ (ಯು) ನಂತಹ ಪಕ್ಷಗಳು ಸರ್ಕಾರ ರಚನೆ ಮತ್ತು ಉಳಿವಿಗಾಗಿ ಅವರ ಬೆಂಬಲವು ನಿರ್ಣಾಯಕವಾಗಿರುವುದರಿಂದ ಕೆಲವು ಪ್ರಮುಖ ಖಾತೆಗಳಿಗೆ ಬೇಡಿಕೆ ಇಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ನಿತೀಶ್ ಕುಮಾರ್, ನಾಯ್ಡು ಎಲ್ಲರ ಸ್ನೇಹಿತರು; ಮೋದಿಗೆ ಸಮ್ಮಿಶ್ರ ಸರ್ಕಾರ ನಡೆಸಲು ಸಾಧ್ಯವಿಲ್ಲ: ಸಂಜಯ್ ರಾವತ್

543 ಸದಸ್ಯರ ಲೋಕಸಭೆಯಲ್ಲಿ ಎನ್‌ಡಿಎ ಬಹುಮತದ 272 ಕ್ಕಿಂತ ಆರಾಮವಾಗಿ ಇದೆ, 240 ಸ್ಥಾನಗಳನ್ನು ಗೆದ್ದ ಬಿಜೆಪಿ, 2014 ರಿಂದ ಮೊದಲ ಬಾರಿಗೆ ಮ್ಯಾಜಿಕ್ ಸಂಖ್ಯೆಗಿಂತ ಕಡಿಮೆಯಾಗಿದ್ದು ಇದು  ಮಿತ್ರಪಕ್ಷಗಳ ಮೇಲೆ ಅವಲಂಬಿತವಾಗಿದೆ.

ಮೈತ್ರಿಕೂಟದ ನಾಯಕರಾಗಿ ಮೋದಿ ಆಯ್ಕೆ

ಜೂನ್ 7 ರಂದು ಎನ್‌ಡಿಎ ಸಂಸದರೊಂದಿಗಿನ ಸಭೆಯ ನಂತರ ಎನ್‌ಡಿಎ ಮಿತ್ರಪಕ್ಷಗಳು ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ನಿಕಟ ಮೂಲಗಳು ಎಎನ್‌ಐಗೆ ತಿಳಿಸಿವೆ. ಏತನ್ಮಧ್ಯೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಎಚ್‌ಎಂ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಮೈತ್ರಿಕೂಟಗಳೊಂದಿಗೆ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಧಾನಿ ನಿವಾಸದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಏನೇನಾಯ್ತು?

ಪ್ರಧಾನಮಂತ್ರಿಯವರ ನಾಯಕತ್ವ ಮತ್ತು ಅಧಿಕಾರವಧಿಯಲ್ಲಿ ನಮ್ಮ ದೇಶವು ಮಾಡಿರುವ ಸಾಧನೆಗಳಿಗೆ ಎಲ್ಲಾ ನಾಯಕರು ಅಭಿನಂದಿಸಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಪ್ರಧಾನಿಯವರ ಕಠಿಣ ಪರಿಶ್ರಮ ಮತ್ತು ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ವಿಕಸಿತ್ ಭಾರತ್ ಬಗ್ಗೆ ಸ್ಪಷ್ಟವಾದ ದೃಷ್ಟಿಕೋನವನ್ನು ಹೊಂದಿದ್ದಾರೆ. ಅವರು ಈ ಗುರಿಯಲ್ಲಿ ಪಾಲುದಾರರಾಗಿದ್ದಾರೆ ಎಂದು ಎನ್‌ಡಿಎ ಪಾಲುದಾರರು ಹೇಳಿದ್ದಾರೆ.

ವಿಶ್ವದಲ್ಲಿ ಭಾರತದ ಹೆಮ್ಮೆಯನ್ನು ಹೆಚ್ಚಿಸುವಲ್ಲಿ ಪ್ರಧಾನಿ ಪಾತ್ರವನ್ನು ಅವರು ಶ್ಲಾಘಿಸಿದರು

NDA ನಾಯಕರು ಬಡತನ ನಿರ್ಮೂಲನೆಗೆ ಪ್ರಧಾನ ಮಂತ್ರಿಯವರ ಪ್ರಯತ್ನಗಳನ್ನು ಶ್ಲಾಘಿಸಿದ್ದು,  ಉತ್ತಮ ಕೆಲಸವನ್ನು ಮುಂದುವರಿಸುವುದಾಗಿ ವಾಗ್ದಾನ ಮಾಡಿದರು 60 ವರ್ಷಗಳ ಹಿಂದೆ ಭಾರತದಲ್ಲಿ ಕೊನೆಯ ಬಾರಿಗೆ 3 ನೇ ಸತತ ಸರ್ಕಾರಕ್ಕೆ ಇದು ಐತಿಹಾಸಿಕ ಜನಾದೇಶವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಸಭೆ ಮುಗಿದ ನಂತರ ನಾಯ್ಡು ಹೇಳಿದ್ದೇನು?

ಎನ್‌ಡಿಎ ಭಾಗವಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು “ನಾವು ಎನ್‌ಡಿಎ ಭಾಗವಾಗಿಲ್ಲದಿದ್ದರೆ ನಾವು ಚುನಾವಣೆಗೆ ಹೇಗೆ ಸ್ಪರ್ಧಿಸುತ್ತಿದೆವು? ನಾವು ಇದನ್ನು ಸಾಮೂಹಿಕವಾಗಿ ಹೋರಾಡಿದ್ದೇವೆ. ಸಭೆ ಚೆನ್ನಾಗಿತ್ತು…” ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Wed, 5 June 24

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ