ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ


ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದಾರೆ. 2014ರಲ್ಲಿ ಕಾಂಗ್ರೆಸ್‌ನ ಎನ್. ಧರಂ ಸಿಂಗ್ ಅವರನ್ನು 1 ಲಕ್ಷ ಮತಗಳ ಅಂತರದಿಂದ ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು. 2016 ರಲ್ಲಿ ಆಹಾರ, ಗ್ರಾಹಕ ವ್ಯವಹಾರ ಮತ್ತು ಪಡಿತರ ಸರಬರಾಜು ಸ್ಥಾಯಿ ಸಮಿತಿಯ ಸದಸ್ಯರಾಗಿದ್ದ ಅವರು ನಂತರ ಅನೇಕ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. 2019ರಲ್ಲಿ ಎರಡನೇ ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದ ಖೂಬಾ (5,85,471 ಮತಗಳು) ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಈಶ್ವರ್ ಖಂಡ್ರೆ (4,68,637 ಮತಗಳು) ವಿರುದ್ಧ 1,16,834 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2021 ರಿಂದ ಖೂಬಾ ಅವರು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರಗಳು, ಹೊಸ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2024ರ ಚುನಾವಣೆಯಲ್ಲಿ ಖೂಬಾ ಅವರಿಗೆ ಟಿಕೆಟ್ ಲಭಿಸಿದೆ.

