ಸಂಗಣ್ಣ ಕರಡಿ
ಬಿಜೆಪಿ
ಹೈದರಾಬಾದ್ ಕರ್ನಾಟಕ ಭಾಗದ ಪ್ರಮುಖ ರಾಜಕೀಯ ಮುಖಂಡರಲ್ಲೊಬ್ಬರಾಗಿರುವ ಸಂಗಣ್ಣ ಕರಡಿ ಅವರು ಮೂಲತಃ ಕೊಪ್ಪಳ ಜಿಲ್ಲೆಯವರಾಗಿದ್ದು, ಕೊಪ್ಪಳದಿಂದ ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಮೂಲಕ ತಮ್ಮ ರಾಜಕೀಯ ವೃತ್ತಿ ಆರಂಭಿಸಿದರು. 2008 ರಲ್ಲಿ ಜೆಡಿಎಸ್ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಇವರು 2011 ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದರು. 2013 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಸಂಗಣ್ಣ ಕರಡಿ ಅವರಿಗೆ 2014 ರಲ್ಲಿ ಕೊಪ್ಪಳ ಲೋಕಸಭೆ ಬಿಜೆಪಿ ಟಿಕೆಟ್ ಲಭಿಸಿತು. ಅದರಂತೆ ಗೆದ್ದು ಸಂಸತ್ತಿಗೆ ಪ್ರವೇಶಿಸಿದರು. 2019 ರಲ್ಲಿ ಮತ್ತೆ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಸಂಗಣ್ಣ ಅವರು 5,86,561 ಮತಗಳನ್ನು ಪಡೆದಿದ್ದರು. ಇವರ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜಶೇಖರ ಹಿಟ್ನಾಳ ಅವರು 5,48,337 ಮತಗಳನ್ನು ಪಡೆದಿದ್ದರು. ಸಂಗಣ್ಣ ಅವರು ಹಿಟ್ನಾಳ ವಿರುದ್ಧ 38 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಬಾರಿ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈತಪ್ಪಿದ್ದು, ಡಾ.ಬಸವರಾಜ ಅವರಿಗೆ ಕ್ಷೇತ್ರದಲ್ಲಿ ಮಣೆ ಹಾಕಲಾಗಿದೆ.