ಪಿಸಿ ಮೋಹನ್ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಸಂಸದ


ಪಿಸಿ ಮೋಹನ್ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಸಂಸದ. ಕಮಲ ಪಕ್ಷದ ಹಿರಿಯ ನಾಯಕರಾಗಿರುವ ಮೋಹನ್, 1999 ರಿಂದ 2008 ರವರೆಗೆ ಚಿಕ್ಕಪೇಟೆ ಕ್ಷೇತ್ರದಿಂದ ಶಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ.1963 ರ ಜುಲೈ 24ರಂದು ಜನಿಸಿದ್ದ ಮೋಹನ್, 1999ರಿಂದಲೂ ಸಕ್ರಿಯ ಚುನಾವಣಾ ರಾಜಕೀಯದಲ್ಲಿದ್ದಾರೆ. 20 ವರ್ಷಗಳಿಗಿಂತಲೂ ಹೆಚ್ಚು ಕಾಲ ಬಿಜೆಪಿಯಲ್ಲಿ ತೊಡಗಿಸಿಕೊಂಡಿರುವ ಅವರು, ಪಕ್ಷದ ಖಜಾಂಚಿಯಾಗಿ ಮತ್ತು ರಾಜ್ಯದ ಒಬಿಸಿ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವಿದೇಶಾಂಗ ವ್ಯವಹಾರಗಳು ಮತ್ತು ನಗರಾಭಿವೃದ್ಧಿಯ ಸಂಸದೀಯ ಸಮಿತಿಗಳ ಸದಸ್ಯರಾಗಿದ್ದಾರೆ. ಬೆಂಗಳೂರಿನಲ್ಲಿ ಮೆಟ್ರೋ ರೈಲು ಯೋಜನೆಯ ವಿಸ್ತರಣೆ ಸೇರಿದಂತೆ ನಗರದ ಮೂಲಸೌಕರ್ಯ ಮತ್ತು ಸಾರಿಗೆ ಸಮಸ್ಯೆಗಳನ್ನು ಸುಧಾರಿಸುವಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡವರ ಪೈಕಿ ಪಿಸಿ ಮೋಹನ್ ಸಹ ಒಬ್ಬರಾಗಿದ್ದಾರೆ. ಪ್ರಸ್ತುತ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿದ್ದಾರೆ.

