ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆ ಫಲಿತಾಂಶ 2024


2024ರ ಲೋಕ ಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಮತ್ತು ರಾಜ್ಯದ ಕ್ಯಾಬಿನೆಟ್ ಸಚಿವ ಎಚ್.ಡಿ. ರೇವಣ್ಣ ಅವರ ಸುಪುತ್ರ ಪ್ರಜ್ವಲ್ ರೇವಣ್ಣ ಅವರ ಹೆಸರು ಘೋಷಣೆಯಾಗಿದೆ ಮತ್ತು ಪ್ರಸ್ತುತ ಲೋಕಸಭೆಯ 3ನೇ ಕಿರಿಯ ಸಂಸದರಾಗಿದ್ದಾರೆ. 2015ರಲ್ಲಿ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (ಸಿಪಿಎ) ನಿಂದ ಆಯ್ಕೆಯಾದ 10 ಯುವ ರಾಜಕಾರಣಿಗಳಲ್ಲಿ ಪ್ರಜ್ವಲ್ ರೇವಣ್ಣ ಕೂಡ ಸ್ಥಾನ ಪಡೆದಿದ್ದರು. ಜೆಡಿಎಸ್ ಪಕ್ಷದ ಸದಸ್ಯರಾಗಿದ್ದರೂ 2018ರ ಚುನಾವಣೆಯಲ್ಲಿ ಟಿಕೆಟ್ ನೀಡಲು ನಿರಾಕರಿಸಿದ್ದರಿಂದ ರಾಜಕೀಯ ಪ್ರವೇಶದಲ್ಲಿ ಕೊಂಚ ತಡವಾಯಿತು. 2019 ಲೋಕಸಭೆ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ 1.4 ಲಕ್ಷಕ್ಕೂ ಹೆಚ್ಚು ಮತಗಳಿಂದ ಪ್ರಜ್ವಲ್ ರೇವಣ್ಣ ಗೆದ್ದಿದ್ದರು. ಪ್ರಜ್ವಲ್ ರೇವಣ್ಣ 6,75,512 ಲಕ್ಷ ಮತಗಳನ್ನು ಪಡೆದಿದ್ದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಎ ಮಂಜು 5,33,389 ಮತಗಳನ್ನು ಪಡೆದಿದ್ದರು.

