ರಾಜಾ ಅಮರೇಶ್ವರ ನಾಯಕ
ಕಾಂಗ್ರೆಸ್ನ ಭದ್ರಕೋಟೆ ಎನಿಸಿದ್ದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೇಸರಿ ಕಮಲ ಅರಳಲು ಕಾರಣರಾದವರಲ್ಲಿ ರಾಜಾ ಅಮರೇಶ್ವರ ನಾಯಕ ಒಬ್ಬರು. 2019ರ ಲೋಕಸಭಾ ಚುನಾವಣೆಯಲ್ಲಿ ರಾಯಚೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ನಲ್ಲಿ ಅಚ್ಚರಿಯ ಗೆಲುವು ಸಾಧಿಸಿದವರು ಅವರು. 66 ವರ್ಷದ ರಾಜಾ ಅಮರೇಶ್ವರ ನಾಯಕ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಮೂಲತಃ ಕಾಂಗ್ರೆಸ್ಸಿಗರೇ ಆಗಿದ್ದಾರೆ. ಕಾನೂನು ಪದವಿ ಓದಿರುವ ಇವರು 1989ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದರು. ಆ ಚೊಚ್ಚಲ ಅವಧಿಯಲ್ಲೇ ಅವರು ಸಚಿವ ಸ್ಥಾನ ಪಡೆದಿದ್ದರು. ಬಂಗಾರಪ್ಪ ಮತ್ತು ವೀರಪ್ಪ ಮೊಯಿಲ್ ಸಿಎಂ ಆಗಿದ್ದ ಅವಧಿಯಲ್ಲಿ ರಾಜ್ಯ ಖಾತೆ ನಿಭಾಯಿಸಿದ್ದರು. 1999ರ ಚುನಾವಣೆಯಲ್ಲಿ ಎರಡನೇ ಬಾರಿ ಕಾಂಗ್ರೆಸ್ ಟಿಕೆಟ್ನಿಂದ ಗೆದ್ದು ಸಿಎಂ ಎಸ್ಎಂ ಕೃಷ್ಣ ಅವಧಿಯಲ್ಲಿಯೂ ಸಂಪುಟ ದರ್ಜೆ ಸಚಿವ ಸ್ಥಾನ ಪಡೆದಿದ್ದರು. 2013ರಲ್ಲಿ ಕಾಂಗ್ರೆಸ್ನಿಂದ ಜೆಡಿಎಸ್ ಸೇರಿದರು. ಬಳಿಕ 2014ರಲ್ಲಿ ಬಿಜೆಪಿ ಪಕ್ಷಕ್ಕೆ ವಲಸೆ ಹೋದರು. 2019ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಕಾಂಗ್ರೆಸ್ ಸಂಸದ ಬಿ.ವಿ. ನಾಯಕ ವಿರುದ್ಧ ಭರ್ಜರಿ ಗೆಲುವು ಸಾಧಿಸಿ, ಆ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಕಮಲ ಅರಳುವಂತೆ ಮಾಡಿದರು.