Chanakya Exit Poll 2024: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಬಹುಮತ? ಚಾಣಕ್ಯ ಮತಗಟ್ಟೆ ಸಮೀಕ್ಷೆ ಹೀಗಿದೆ
ಚಾಣಕ್ಯ ಎಕ್ಸಿಟ್ ಪೋಲ್ ಪ್ರಕಾರ ದೆಹಲಿಯ ಏಳರಲ್ಲಿ 6 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಮೈತ್ರಿಗೆ ಒಂದು ಸ್ಥಾನ ಸಿಗಬಹುದು. ಕಳೆದ ಎರಡು ಚುನಾವಣೆಗಳಲ್ಲಿ ಬಿಜೆಪಿ ದೆಹಲಿಯ ಎಲ್ಲಾ ಏಳು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದು, ಆದರೆ ಈ ಬಾರಿ ಅದು ಒಂದು ಸ್ಥಾನವನ್ನು ಕಳೆದುಕೊಳ್ಳಬಹುದು.
ದೆಹಲಿ ಜೂನ್ 01: ಕಳೆದ 2 ತಿಂಗಳಿಂದ ನಡೆಯುತ್ತಿದ್ದ ಲೋಕಸಭಾ ಚುನಾವಣೆಯು (Lok Sabha Election) 7ನೇ ಮತ್ತು ಅಂತಿಮ ಹಂತದ ಮತದಾನದೊಂದಿಗೆ ಮುಕ್ತಾಯಗೊಂಡಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಲೋಕಸಭೆ ಚುನಾವಣೆಯ ಕೊನೆಯ ಹಂತದಲ್ಲಿ ಇಂದು ದೇಶದ 87 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 57 ಸ್ಥಾನಗಳಿಗೆ ಮತದಾನ ನಡೆದಿದೆ. ಲೋಕಸಭೆ ಚುನಾವಣೆಯಲ್ಲದೆ, ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳೂ ನಡೆದಿವೆ. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಫಲಿತಾಂಶವು ಜೂನ್ 2 ಭಾನುವಾರದಂದು ಪ್ರಕಟವಾಗಲಿದೆ. ಗುರುವಾರದ ಮತ ಎಣಿಕೆಯಾಗಿ ಫಲಿತಾಂಶ ಪ್ರಕಟವಾದ ನಂತರ ಕೇಂದ್ರದಲ್ಲಿ ಯಾರು ಸರ್ಕಾರ ರಚನೆ ಮಾಡಲಿದ್ದಾರೆ ಎಂಬುದು ಸ್ಪಷ್ಟವಾಗಲಿದೆ.
ಅಂತಿಮ ಹಂತದ ಮತದಾನ ಮುಗಿಯುತ್ತಿದ್ದಂತೆ ವಿವಿಧ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ಪ್ರಕಟಿಸಿವೆ. ಟುಡೇಸ್ ಚಾಣಕ್ಯ ಎಕ್ಸಿಟ್ ಪೋಲ್ ಪ್ರಕಾರ, ಈ ಬಾರಿ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ – ಎನ್‌ಡಿಎ 18 ನೇ ಲೋಕಸಭೆಯಲ್ಲಿ ಮತ್ತೆ ಸರ್ಕಾರ ರಚಿಸಲಿದೆ.
ಉತ್ತರಾಖಂಡದ 5 ಸ್ಥಾನಗಳಲ್ಲಿ ಬಿಜೆಪಿ ಗೆಲುವು
ಉತ್ತರಾಖಂಡದ ಎಲ್ಲಾ 5 ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ ಎನ್ನಲಾಗಿದೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳಿಗೆ ಯಾವುದೇ ಸ್ಥಾನ ಸಿಗುವುದಿಲ್ಲ. ಆದರೆ ಇವುಗಳಲ್ಲಿ ಒಂದರ ಫಲಿತಾಂಶವು ಹೆಚ್ಚಾಗಬಹುದು ಅಥವಾ ಕಡಿಮೆಯಾಗಬಹುದು. ಶೇಕಡಾವಾರು ಮತಗಳ ಬಗ್ಗೆ ಮಾತನಾಡುವುದಾದರೆ, ಉತ್ತರಾಖಂಡದಲ್ಲಿ ಬಿಜೆಪಿ ಶೇಕಡಾ 59 ರಷ್ಟು ಮತಗಳನ್ನು ಪಡೆಯಲಿದೆ ಎಂದು ಹೇಳಲಾಗುತ್ತದೆ. ಕಾಂಗ್ರೆಸ್ 32 ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ. ಕಳೆದ ಎರಡು ಚುನಾವಣೆಗಳಲ್ಲಿ ಬಿಜೆಪಿ ಇಲ್ಲಿ ಗೆದ್ದಿದೆ.
ದೆಹಲಿಯಲ್ಲಿ ಬಿಜೆಪಿ ಒಂದು ಸ್ಥಾನ ಕಳೆದುಕೊಳ್ಳಲಿದೆ
ಚಾಣಕ್ಯ ಎಕ್ಸಿಟ್ ಪೋಲ್ ಪ್ರಕಾರ ದೆಹಲಿಯ ಏಳರಲ್ಲಿ 6 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಮೈತ್ರಿಗೆ ಒಂದು ಸ್ಥಾನ ಸಿಗಬಹುದು. ಕಳೆದ ಎರಡು ಚುನಾವಣೆಗಳಲ್ಲಿ ಬಿಜೆಪಿ ದೆಹಲಿಯ ಎಲ್ಲಾ ಏಳು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದು, ಆದರೆ ಈ ಬಾರಿ ಅದು ಒಂದು ಸ್ಥಾನವನ್ನು ಕಳೆದುಕೊಳ್ಳಬಹುದು. ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವು. ಇದರಲ್ಲಿ ಕಾಂಗ್ರೆಸ್ 3 ಸ್ಥಾನಗಳಲ್ಲಿ ಮತ್ತು ಆಮ್ ಆದ್ಮಿ ಪಕ್ಷ 4 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಇದನ್ನೂ ಓದಿ: TV9 Polstrat Exit Poll: ಕೇಂದ್ರದಲ್ಲಿ ಮತ್ತೆ ಮೋದಿ ಸರ್ಕಾರ, ಟಿವಿ9 ಪೋಲ್ಸ್ಟ್ರಾಟ್ ಎಕ್ಸಿಟ್ ಪೋಲ್ ವಿವರ ಇಲ್ಲಿದೆ
ಹರ್ಯಾಣದಲ್ಲಿ ಬಿಜೆಪಿ 6, ಕಾಂಗ್ರೆಸ್ 4 ಸೀಟು ಗಳಿಸಲಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿಗೆ 29 ಸೀಟು ಸಿಗಲಿದ್ದು, ಕಾಂಗ್ರೆಸ್ಗೆ ಯಾವುದೇ ಸೀಟು ಸಿಗಲ್ಲ. ಅಸ್ಸಾಂನಲ್ಲಿ ಬಿಜೆಪಿಗೆ 12 ಮತ್ತು ಕಾಂಗ್ರೆಸ್ ಪಕ್ಷಕ್ಕೆ 1 ಸ್ಥಾನ ಸಿಗಲಿದೆ. ಛತ್ತೀಸ್ ಗಢದಲ್ಲಿ ಬಿಜೆಪಿ 11 ಸೀಟು ಗಳಿಸಲಿದ್ದು ಇಲ್ಲಿ ಕಾಂಗ್ರೆಸ್ಗೆ ಯಾವುದೇ ಸ್ಥಾನಗಳಿಲ್ಲ. ಗುಜರಾತಿನಲ್ಲಿ ಬಿಜೆಪಿಗೆ 26 ಸೀಟು, ಜಾರ್ಖಂಡ್ ನಲ್ಲಿ 5 ಸೀಟುಗಳು ಸಿಗಲಿವೆ. ಹರ್ಯಾಣದಲ್ಲಿ ಬಿಜೆಪಿ 6, ಕಾಂಗ್ರೆಸ್ 4 ಸೀಟು ಗಳಿಸಲಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿಗೆ 29 ಸೀಟು ಸಿಗಲಿದ್ದು, ಕಾಂಗ್ರೆಸ್ಗೆ ಯಾವುದೇ ಸೀಟು ಸಿಗಲ್ಲ. ಅಸ್ಸಾಂನಲ್ಲಿ ಬಿಜೆಪಿಗೆ 12 ಮತ್ತು ಕಾಂಗ್ರೆಸ್ ಪಕ್ಷಕ್ಕೆ 1 ಸ್ಥಾನ ಸಿಗಲಿದೆ. ಛತ್ತೀಸಗಢದಲ್ಲಿ ಬಿಜೆಪಿ 11 ಸೀಟು ಗಳಿಸಲಿದ್ದು ಇಲ್ಲಿ ಕಾಂಗ್ರೆಸ್ಗೆ ಯಾವುದೇ ಸ್ಥಾನಗಳಿಲ್ಲ. ಗುಜರಾತಿನಲ್ಲಿ ಬಿಜೆಪಿಗೆ 26 ಸೀಟು, ಜಾರ್ಖಂಡ್ ನಲ್ಲಿ 5 ಸೀಟುಗಳು ಸಿಗಲಿವೆ.
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ