Chikkodi Lok Sabha Election Result 2024: ಚಿಕ್ಕೋಡಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು

Chikkodi Lok Sabha Election Results 2024 Live Counting Updates: ಪ್ರಿಯಾಂಕಾ ಪರ  ಹಾಲಿ ಸಚಿವರು, ಸರ್ಕಾರದ ಮುಖ್ಯಸ್ಥರು  ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡಿದ್ದರು. ಅಂದಹಾಗೆ ಪ್ರಿಯಾಂಕಾ ಅವರಿಗೆ ಅನುಭವದ ಕೊರತೆ ಇದೆ.ಆದರೆ  ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ ಅವರು 2019ರಲ್ಲಿ ಬಹುಮತ ಪಡೆದು ಗೆದ್ದವರು. ಅವರಿಗೆ ಸಾಕಷ್ಟು ಅನುಭವ ಇದೆ. ಕ್ಷೇತ್ರದ ಬಗ್ಗೆ ಹೇಳುವುದಾದರೆ ಇಲ್ಲಿ  ಜಾತಿ ಮತಗಳ ಮೇಲೆ ಲೆಕ್ಕಾಚಾರ ನಡೆಯಲಿದೆ.

Chikkodi Lok Sabha Election Result 2024: ಚಿಕ್ಕೋಡಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು
ಅಣ್ಣಾ ಸಾಹೇಬ ಜೊಲ್ಲೆ-ಪ್ರಿಯಾಂಕಾ ಜಾರಕಿಹೊಳಿ
Follow us
ರಶ್ಮಿ ಕಲ್ಲಕಟ್ಟ
| Updated By: ವಿವೇಕ ಬಿರಾದಾರ

Updated on:Jun 04, 2024 | 3:03 PM

ಬೆಳಗಾವಿ ಜಿಲ್ಲೆ ತಾಲೂಕು ಕೇಂದ್ರವಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ (Chikkodi Lok Sabha Constituency) ಸಚಿವ ಸತೀಶ್​ ಜಾರಕಿಹೊಳಿ ಪುತ್ರಿ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಗೆದ್ದಿದ್ದಾರೆ.  ಬಿಜೆಪಿಯ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ (Annasaheb Shankar Jolle) ಅವರಿಗೆ ಸೋಲಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಅವರನ್ನು ಗೆಲ್ಲಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಗೆ ಚಿಕ್ಕೋಡಿ ಗೆಲುವಿನ ಲೋಕಸಭಾ ಕ್ಷೇತ್ರವಾದರೂ ಈ ಬಾರಿ ಇಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು.

ಈ ಭಾಗದಲ್ಲಿ ಪ್ರಭಾವಿಗಳಾಗಿರುವ ಜಾರಕಿಹೊಳಿ ಕುಟುಂಬದ ಸತೀಶ್ ಜಾರಕಿಹೊಳಿ ಪುತ್ರಿ ಕಣಕ್ಕಿಳಿರುವುದು ವಿಶೇಷ.ಅವರನ್ನು ಕಾಂಗ್ರೆಸ್ ಮುಖಂಡರು ಒಮ್ಮತದಿಂದ ಚುನಾವಣೆಗೆ ಆಯ್ಕೆ ಮಾಡಿದ್ದರು. ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು, ಮೊದಲ ಚುನಾವಣೆಯಲ್ಲೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕಾ ಪರ  ಹಾಲಿ ಸಚಿವರು, ಸರ್ಕಾರದ ಮುಖ್ಯಸ್ಥರು  ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡಿದ್ದರು. ಅಂದಹಾಗೆ ಪ್ರಿಯಾಂಕಾ ಅವರಿಗೆ ಅನುಭವದ ಕೊರತೆ ಇದೆ.ಆದರೆ  ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ ಅವರು 2019ರಲ್ಲಿ ಬಹುಮತ ಪಡೆದು ಗೆದ್ದವರು. ಅವರಿಗೆ ಸಾಕಷ್ಟು ಅನುಭವ ಇದೆ. ಕ್ಷೇತ್ರದ ಬಗ್ಗೆ ಹೇಳುವುದಾದರೆ ಇಲ್ಲಿ  ಜಾತಿ ಮತಗಳ ಮೇಲೆ ಲೆಕ್ಕಾಚಾರ ನಡೆಯಲಿದೆ. ಹಿಂದಿನ ಚುನಾವಣೆಗಳ ಬಗ್ಗೆ ನೋಡಿದರೆ 2014ರಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 4.74ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ  ಬಿಜೆಪಿಯ ರಮೇಶ್ ಕತ್ತಿ ಕಡಿಮೆ ಅಂತರದಿಂದ ಸೋತಿದ್ದರು.

2019ರಲ್ಲಿ ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿ ಸೋಲಿಸಿ ಬಿಜೆಪಿಯ ಅಣ್ಣಾಸಾಹೇಬ್ ಜೊಲ್ಲೆ ಅವರು 7.45ಲಕ್ಷ ಬಹುಮತ ಗಳಿಸಿ ವಿಜಯಸಾಧಿಸಿದ್ದರು. ಈ ಈ ಬಾರಿಯೂ  ಅಣ್ಣಾಸಾಹೇಬ್ ಜೊಲ್ಲೆ ಅವರೇ ಕಣ್ಣಕಿಳಿದಿದ್ದು, ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:48 am, Tue, 4 June 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ