ಎಂಥಾ ಬಿಸಿಲು! ಚುನಾವಣಾ ರ‍್ಯಾಲಿಯಲ್ಲಿ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್ ಗಾಂಧಿ

ರುದ್ರಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ಇಂಡಿಯಾ ಬಣ ಮತ್ತು ಸಂವಿಧಾನ. ಇನ್ನೊಂದು ಬದಿಯಲ್ಲಿ ಸಂವಿಧಾನವನ್ನು ರದ್ದುಪಡಿಸಲು ಬಯಸುವವರು ಇದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದ ತಕ್ಷಣ ಸಂವಿಧಾನವನ್ನು ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ನಿಮ್ಮ ಸರ್ಕಾರ ಬರುವುದಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ ಎಂದಿದ್ದಾರೆ.

Follow us
ರಶ್ಮಿ ಕಲ್ಲಕಟ್ಟ
|

Updated on: May 28, 2024 | 7:14 PM

ರುದ್ರಪುರ ಮೇ 28: ಉತ್ತರ ಪ್ರದೇಶದ (Uttar Pradesh)  ರುದ್ರಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತಲೆಯ ಮೇಲೆ ನೀರು ಸುರಿದುಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಗರ್ಮಿ ಹೈ ಕಾಫಿ…” (ಸಿಕ್ಕಾಪಟ್ಟೆ ಬಿಸಿಲು ಇದೆ) ಎಂದು ರಾಹುಲ್ ಹೇಳುವುದನ್ನು ಸಹ ವಿಡಿಯೊದಲ್ಲಿ ಹೇಳಬಹುದು. ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಎಂಥಾ ಬಿಸಿಲು ಎಂದು ಹೇಳಿದ್ದಾರೆ. ಇದಾದ ನಂತರ ನೀರಿನ ಬಾಟಲಿಯಿಂದ ಸ್ವಲ್ಪ ನೀರು ಕುಡಿದು, ಸ್ವಲ್ಪ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಇದು ಜನರ ಗಮನ ಸೆಳೆದಿದೆ. ರಾಹುಲ್ ಗಾಂಧಿಯವರ ವಿಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್ (Congress) ತನ್ನ ಅಧಿಕೃತ ಹ್ಯಾಂಡಲ್‌ನಲ್ಲಿ, “ ಕುರ್ಚಿಯ ಬೆಲ್ಟ್ ಗಟ್ಟಿಯಾಗಿ ಕಟ್ಟಿಕೊಳ್ಳಿ ತಾಪಮಾನ ಏರುತ್ತಿದೆ, ಇಂಡಿಯಾ ಬಣದ ಸರ್ಕಾರ ಬರುತ್ತಿದೆ ಎಂದು ಬರೆದಿದೆ.

“ಆಪ್ ಥೈಲ್ಯಾಂಡ್ ಕಾ ಟಿಕೆಟ್ ಕರ್ಲೋ (ನೀವು ಥಾಯ್ಲೆಂಡ್‌ಗೆ ಟಿಕೆಟ್ ಕಾಯ್ದಿರಿಸಬಹುದು)…” ಎಂದು ಬಳಕೆದಾರರೊಬ್ಬರು ಈ ವಿಡಿಯೊಗೆ ಪ್ರತಿಕ್ರಿಯಿಸಿದ್ದು ಇನ್ನೊಬ್ಬ ವ್ಯಕ್ತಿ, “ನೈಸ್ ಜೋಕ್…” ಎಂದು ಕಾಮೆಂಟ್ ಮಾಡಿದ್ದಾರೆ.

ರುದ್ರಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ಇಂಡಿಯಾ ಬಣ ಮತ್ತು ಸಂವಿಧಾನ. ಇನ್ನೊಂದು ಬದಿಯಲ್ಲಿ ಸಂವಿಧಾನವನ್ನು ರದ್ದುಪಡಿಸಲು ಬಯಸುವವರು ಇದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರ ಬಂದ ತಕ್ಷಣ ಸಂವಿಧಾನವನ್ನು ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ನಿಮ್ಮ ಸರ್ಕಾರ ಬರುವುದಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ.

“ನಾನು ಭಾರತದ ಜನರಿಗೆ ಹೇಳಲು ಬಯಸುತ್ತೇನೆ. ಇಂಡಿಯಾ ಬಣ ಸಂವಿಧಾನವನ್ನು ರಕ್ಷಿಸಲು ತನ್ನ ಪ್ರಾಣವನ್ನು ಪಣಕ್ಕಿಡುತ್ತದೆ, ಆದರೆ ಅದನ್ನು ನಾಶಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಆಪ್ ನಾಯಕಿ ಅತಿಶಿಗೆ ಸಮನ್ಸ್; ಕೇಜ್ರಿವಾಲ್ ಆಕ್ರೋಶ

ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ಬಿಜೆಪಿ ಸರ್ಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸುವ ಸುಳ್ಳು ಕನಸುಗಳನ್ನು ತೋರಿಸಿದೆ, ಯುವಕರ ಪರೀಕ್ಷಾ ಪತ್ರಿಕೆಗಳು ಸೋರಿಕೆಯಾಗಿದೆ ಎಂದು ಆರೋಪಿಸಿದರು. ಇಲ್ಲಿಯವರೆಗೆ, ಉತ್ತರ ಪ್ರದೇಶದಲ್ಲಿ ಒಂದು (ವಾರಣಾಸಿ) ಹೊರತುಪಡಿಸಿ ಇಂಡಿಯಾ ಮೈತ್ರಿಕೂಟವು ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಾನು ಹೇಳುತ್ತಿದ್ದೆ. ಆದರೆ, ನಾವು ಚುನಾವಣೆಯ ಕೊನೆಯ ಹಂತದತ್ತ ಸಾಗುತ್ತಿರುವಾಗ, ಬಿಜೆಪಿ ವಿರುದ್ಧ ಜನರಲ್ಲಿ  ಸಿಕ್ಕಾಪಟ್ಟೆ ಆಕ್ರೋಶ ಇದೆ.  ಬಿಜೆಪಿ ಈ ಒಂದು ಸ್ಥಾನವನ್ನೂ ಕಳೆದುಕೊಳ್ಳುತ್ತದೆ ಎಂದು ನನಗೆ ಈಗ ಅನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ