Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ 2024 ಫಲಿತಾಂಶ; ಪದ್ಮರಾಜ್ ವಿರುದ್ಧ ಬ್ರಿಜೇಶ್ ಚೌಟ ಭರ್ಜರಿ ಗೆಲುವು

Dakshina Kannada Lok Sabha Election Results 2024 Live Counting Updates: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರ ಚುನಾವಣೆಯಲ್ಲಿ 66,440 ರಷ್ಟು ಮತಗಳು ಹೆಚ್ಚಾಗಿದ್ದವು. 2019ರಲ್ಲಿ ಹ್ಯಾಟ್ರಿಕ್ ಗೆಲುವಿನಿಂದ ಸಂಭ್ರಮಿಸಿದ್ದ ಬಿಜೆಪಿ ಈ ಬಾರಿಯೂ ಗೆದ್ದು ಬೀಗಿದೆ.

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ 2024 ಫಲಿತಾಂಶ; ಪದ್ಮರಾಜ್ ವಿರುದ್ಧ ಬ್ರಿಜೇಶ್ ಚೌಟ ಭರ್ಜರಿ ಗೆಲುವು
ಬ್ರಿಜೇಶ್ ಚೌಟ & ಪದ್ಮರಾಜ್
Follow us
Ganapathi Sharma
|

Updated on:Jun 04, 2024 | 2:26 PM

ಬೆಂಗಳೂರು, ಜೂನ್ 4: ಬಿಜೆಪಿಯ (BJP) ಭದ್ರ ಕೋಟೆ ಎಂದೇ ಹೇಳಲಾಗಿರುವ ದಕ್ಷಿಣ ಕನ್ನಡ (Dakshina Kannada) ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಸತತ ಗೆಲುವಿನ ಓಟವನ್ನು ಕಮಲ ಪಡೆ ಮುಂದುವರಿಸಿದೆ. ಕಾಂಗ್ರೆಸ್​ (Congress) ಅಭ್ಯರ್ಥಿ ಪದ್ಮರಾಜ್ (Padmaraj) ವಿರುದ್ಧ ಬಿಜೆಪಿಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಬರೋಬ್ಬರಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಳೆದ ಮೂರ್ನಾಲ್ಕು ಅವಧಿಗಳಿಂದಲೂ ಈ ಕ್ಷೇತ್ರದಲ್ಲಿ ಬಿಜೆಪಿಯೇ ಗೆದ್ದು ಬೀಗಿದೆ. ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಜನಾಕ್ರೋಶ, ಪಕ್ಷದ ಆಂತರಿಕ ವಲಯದಲ್ಲಿಯೂ ವಿರೋಧ ವ್ಯಕ್ತವಾದ ಕಾರಣ ಬಿಜೆಪಿ ಈ ಬಾರಿ ಅಭ್ಯರ್ಥಿಯನ್ನು ಬದಲಾಯಿಸಿತ್ತು.

ಈ ಲೋಕಸಭೆ ಕ್ಷೇತ್ರದಲ್ಲಿ 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರ ಚುನಾವಣೆಯಲ್ಲಿ 66,440 ರಷ್ಟು ಮತಗಳು ಹೆಚ್ಚಾಗಿವೆ. ಕ್ಷೇತ್ರದಲ್ಲಿ 2019ರಲ್ಲಿ 13,43,213 ಮತಗಳು ಚಲಾವಣೆಯಾಗಿದ್ದರೆ, ಈ ಬಾರಿ 14,09,653 ಮತಗಳು ಚಲಾವಣೆಯಾಗಿವೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 1951 ರಿಂದ ಒಟ್ಟು 16 ಚುನಾವಣೆಗಳು ನಡೆದಿವೆ. ಈವರೆಗೆ 8 ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 9 ಬಾರಿ ಗೆಲುವು ಸಾಧಿಸಿದೆ. ಆದರೆ 2009, 2014 ಹಾಗೂ 2019ರಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿತ್ತು.

ಹಿಂದಿನ ಚುನಾವಣೆ ಫಲಿತಾಂಶಗಳು

2019 ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ 7,74,285 ಮತಗಳನ್ನು ಗಳಿಸಿದ್ದರು ಮತ್ತು ಕಾಂಗ್ರೆಸ್​​ನ ಮಿಥುನ್ ಎಂ ರೈ 4,99,664 ಮತಗಳನ್ನು ಪಡೆದಿದ್ದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

2014 ರ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಅಭ್ಯರ್ಥಿ ಜನಾರ್ದನ ಪೂಜಾರಿ ಅವರನ್ನು 1,43,709 ಮತಗಳಿಂದ ಸೋಲಿಸಿದ್ದರು. ನಳಿನ್ ಕುಮಾರ್ ಕಟೀಲ್ 6,42,739 ಮತಗಳನ್ನು ಪಡೆದರೆ, ಜನಾರ್ದನ ಪೂಜಾರಿ 4,99,030 ಮತಗಳನ್ನು ಪಡೆದಿದ್ದರು.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 am, Tue, 4 June 24

ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ