AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನಕ್ಕೆ ಕೆಲವು ದಿನ ಬಾಕಿ ಇರುವಾಗ ಬಂಗಾಳದಲ್ಲಿ ‘ಬಿಜೆಪಿ ಕಾರ್ಯಕರ್ತೆಯ’ ಹತ್ಯೆ

"ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಂದಾಗಲೆಲ್ಲ ಬುಲೆಟ್‌ಗಳು ಹಾರಲು ಪ್ರಾರಂಭಿಸುತ್ತವೆ, ಸ್ಫೋಟಗಳು ಸಂಭವಿಸುತ್ತವೆ. ಬಾಂಬ್, ಬಂದೂಕುಗಳು ಮತ್ತು ಗುಂಡುಗಳು ಸದ್ದು ಮಾಡುತ್ತವೆ. ಮಮತಾ ಬ್ಯಾನರ್ಜಿ ಆಳ್ವಿಕೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕ್ರೌರ್ಯವು ನಿರ್ಲಜ್ಜವಾಗಿ ನಡೆಯುತ್ತಿದೆ. ಒಂದರ ಹಿಂದೆ ಒಂದು ನಾಚಿಕೆಗೇಡಿನ ಘಟನೆಗಳು ಇವು. ಮಹಿಳಾ ಮುಖ್ಯಮಂತ್ರಿ ಇದ್ದರೂ ಇದೆಲ್ಲ ನಡೆಯುತ್ತಿರುವುದು ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಮತದಾನಕ್ಕೆ ಕೆಲವು ದಿನ ಬಾಕಿ ಇರುವಾಗ ಬಂಗಾಳದಲ್ಲಿ 'ಬಿಜೆಪಿ ಕಾರ್ಯಕರ್ತೆಯ' ಹತ್ಯೆ
ನಾಗರಿಕರ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
|

Updated on:May 23, 2024 | 8:50 PM

Share

ಕೋಲ್ಕತ್ತಾ ಮೇ 23: ಆರನೇ ಹಂತದ ಮತದಾನಕ್ಕೆ ಕೆಲವು ದಿನಗಳ ಮೊದಲು, ಪಶ್ಚಿಮ ಬಂಗಾಳದ (West Bengal) ತಮ್ಲುಕ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಂದಿಗ್ರಾಮ್‌ನಲ್ಲಿ ಬೈಕ್‌ನಲ್ಲಿ ಬಂದ ಕೆಲವರು  ಮನೆಯ ಮೇಲೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ನಿನ್ನೆ (ಬುಧವಾರ) ರಾತ್ರಿ ಕೊಲೆಯಾದ ಮಹಿಳೆ ತನ್ನ ಕಾರ್ಯಕರ್ತೆ ಎಂದು ಬಿಜೆಪಿ (BJP) ಹೇಳಿಕೊಂಡಿದೆ. ಈ ಪ್ರದೇಶದಲ್ಲಿ ಇಂದು (ಗುರುವಾರ) ಪಕ್ಷದ ಪ್ರತಿಭಟನೆಗ ನಡೆಸಿದ್ದು ಅಲ್ಲಲ್ಲಿ ಹಿಂಸಾಚಾರ ವರದಿ ಆಗಿದೆ. ನಿನ್ನೆ ರಾತ್ರಿ ದ್ವಿಚಕ್ರವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಆಕೆಯ ಮನೆಗೆ ಗುಂಡು ಹಾರಿಸಿದ್ದರಿಂದ ನಂದಿಗ್ರಾಮದ ಸೋಣಚುರಾ ಪ್ರದೇಶದ ನಿವಾಸಿ ರಾತಿಬಾರಾ ಆರಿ ಎಂಬುವರು ಸಾವಿಗೀಡಾಗಿದ್ದಾರೆ. ಈ ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಕನಿಷ್ಠ ಏಳು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಇಂದು ನಂದಿಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದು, ಕೆಲವು ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ.

ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಮತದಾನ ಮತ್ತು ಚುನಾವಣೋತ್ತರ ಹಿಂಸಾಚಾರದ ಮಾದರಿಯನ್ನು ಎತ್ತಿ ತೋರಿಸಿದೆ. ಸಂದೇಶಖಾಲಿ ವಿಷಯವನ್ನು ಉಲ್ಲೇಖಿಸಿದ ಬಿಜೆಪಿ, ತೃಣಮೂಲದ ಪ್ರಬಲ ವ್ಯಕ್ತಿ ಮತ್ತು ಅವರ ಸಹಾಯಕರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮಹಿಳಾ ಮುಖ್ಯಮಂತ್ರಿ ಇರುವ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ಹೇಳಿದೆ.

“ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಂದಾಗಲೆಲ್ಲ ಬುಲೆಟ್‌ಗಳು ಹಾರಲು ಪ್ರಾರಂಭಿಸುತ್ತವೆ, ಸ್ಫೋಟಗಳು ಸಂಭವಿಸುತ್ತವೆ. ಬಾಂಬ್, ಬಂದೂಕುಗಳು ಮತ್ತು ಗುಂಡುಗಳು ಸದ್ದು ಮಾಡುತ್ತವೆ. ಮಮತಾ ಬ್ಯಾನರ್ಜಿ ಆಳ್ವಿಕೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕ್ರೌರ್ಯವು ನಿರ್ಲಜ್ಜವಾಗಿ ನಡೆಯುತ್ತಿದೆ. ಒಂದರ ಹಿಂದೆ ಒಂದು ನಾಚಿಕೆಗೇಡಿನ ಘಟನೆಗಳು ಇವು. ಮಹಿಳಾ ಮುಖ್ಯಮಂತ್ರಿ ಇದ್ದರೂ ಇದೆಲ್ಲ ನಡೆಯುತ್ತಿರುವುದು ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅನುರಾಗ್ ಠಾಕೂರ್ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಈ ಹತ್ಯೆಯು ಬಿಜೆಪಿಯೊಳಗಿನ ಆಂತರಿಕ ಕಲಹದ ಪರಿಣಾಮವಾಗಿದೆ ಎಂದು ಹೇಳಿದ್ದು, ಅದು ಈಗ ತನ್ನ ಎದುರಾಳಿಯನ್ನು ಕೆಣಕಲು ಪ್ರಯತ್ನಿಸುತ್ತಿದೆ ಎಂದಿದೆ.

ಟಿಎಂಸಿಯ ಹಿರಿಯ ನಾಯಕ ಸಂತನು ಸೇನ್ ಮಾತನಾಡಿ, “ನಂದಿಗ್ರಾಮ್ ಅಥವಾ ಪೂರ್ವ ಮಿಡ್ನಾಪುರ ಮಾತ್ರವಲ್ಲ, ದೇಶಾದ್ಯಂತ ಹಳೆಯ ಮತ್ತು ಹೊಸ ಬಿಜೆಪಿ ನಡುವೆ ಜಗಳ ನಡೆಯುತ್ತಿದೆ, ನಂದಿಗ್ರಾಮ್‌ನಲ್ಲಿ ಮಹಿಳೆಯ ಸಾವು ಅದರ ಪರಿಣಾಮವಾಗಿದೆ. ತೃಣಮೂಲ ಕಾಂಗ್ರೆಸನ್ನು ಕೆಣಕುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ನಡೆಯುತ್ತಿರುವ ಚುನಾವಣೆಗಳಲ್ಲಿ ಗೆಲ್ಲುವ ವಿಶ್ವಾಸವಿರುವ ಪಕ್ಷವು ಗೂಂಡಾಗಿರಿಯ ಹಾದಿಯಲ್ಲಿ ನಡೆಯುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ:  ನಾನು ಬದುಕಿರುವವರೆಗೂ ದಲಿತರು, ಆದಿವಾಸಿಗಳ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ತಮ್ಲುಕ್ ಲೋಕಸಭಾ ಕ್ಷೇತ್ರ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ.ಏಕೆಂದರೆ ನಂದಿಗ್ರಾಮ್ ವಿಧಾನಸಭಾ ಕ್ಷೇತ್ರವು ಬಿಜೆಪಿಯ ಸುವೇಂದು ಅಧಿಕಾರಿ, ಈಗ ನಾಯಕರಾಗಿರುವ 2021 ರ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ರಾಜ್ಯದಲ್ಲಿ ಪ್ರತಿಪಕ್ಷಗಳು ಸೋಲಿಸಿದ್ದವು.

‘ಗೋ ಬ್ಯಾಕ್ ಟಿಎಂಸಿ’

ಪುರ್ಬಾ ಮೇದಿನಿಪುರದ ನಂದಿಗ್ರಾಮ ಎಂಬ ಗ್ರಾಮದಲ್ಲಿ ಪಕ್ಷದ ಸದಸ್ಯರೊಬ್ಬರು ಅಲ್ಲಿಗೆ ಆಗಮಿಸಿದಾಗ ಗ್ರಾಮಸ್ಥರು ‘ಗೋ ಬ್ಯಾಕ್ ಟಿಎಂಸಿ’ ಎಂದು ಘೋಷಣೆ ಕೂಗಿದರು.ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವುದರಿಂದ ನಂದಿಗ್ರಾಮ, ಪುರ್ಬಾ ಮೇದಿನಿಪುರದಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ನಿನ್ನೆ ರಾತ್ರಿ ಕೆಲವು ಮನೆಗಳ ಮೇಲೆ ನಡೆದ ದಾಳಿಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರೊಬ್ಬರು ಸಾವಿಗೀಡಾಗಿದ್ದು ಈ ದಾಳಿಯನ್ನು ಟಿಎಂಸಿ ಪಕ್ಷದವರೇ ಮಾಡಿದ್ದಾರೆ ಎಂದು ಬಿಜೆಪಿಯನ್ನು ಬೆಂಬಲಿಸುವ ಪ್ರದೇಶದ ಜನರು ಹೇಳುತ್ತಾರೆ.

ಟಿಎಂಸಿ ನಾಯಕ ರಾಜೀಬ್ ಬ್ಯಾನರ್ಜಿ, “ಇಂದು ಇಂತಹ ಘಟನೆ ನಡೆದಿರುವುದಕ್ಕೆ ನಮಗೆ ತುಂಬಾ ಬೇಸರವಾಗಿದೆ. ಟಿಎಂಸಿ ಎಂದಿಗೂ ಯಾವುದೇ ವ್ಯಕ್ತಿ ಸಾಯುವುದನ್ನು ಬಯಸುವುದಿಲ್ಲ. ಟಿಎಂಸಿ ಇದರಲ್ಲಿ ಭಾಗಿಯಾಗಿಲ್ಲ. ಇದು ಬಿಜೆಪಿಯ ಆಂತರಿಕ ವಿಷಯ. ಈ ವಿಷಯದಲ್ಲಿ ಟಿಎಂಸಿಯನ್ನು ಅನಗತ್ಯವಾಗಿ ಎಳೆಯಲಾಗುತ್ತಿದೆ. ಪೊಲೀಸರಿಗೆ ತನಿಖೆ ಮಾಡಲು ಅವಕಾಶ ಕೊಡಿ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:50 pm, Thu, 23 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ