ಲೋಕಸಭಾ ಚುನಾವಣೆ: ₹91 ಕೋಟಿ ಆಸ್ತಿ ಘೋಷಣೆ, ಮಂಡಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಕಂಗನಾ ರಣಾವತ್

ಅಫಿಡವಿಟ್ ಪ್ರಕಾರ, ಕಂಗನಾ ಅವರ ಹೆಸರಿನಲ್ಲಿ ಸುಮಾರು 91 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ, ಇದರಲ್ಲಿ ಸುಮಾರು 29 ಕೋಟಿ ರೂಪಾಯಿಗಳ ಚರ ಆಸ್ತಿಗಳು ಮತ್ತು ಅಂದಾಜು 63 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳು ಸೇರಿವೆ. ನಟಿ ಕಂಗನಾ ತನ್ನ ಅಫಿಡವಿಟ್‌ನಲ್ಲಿ ತನ್ನ ಕೈಯಲ್ಲಿ ಕೇವಲ 2 ಲಕ್ಷ ರೂ ಇದೆ ಎಂದಿದ್ದಾರೆ.

ಲೋಕಸಭಾ ಚುನಾವಣೆ: ₹91 ಕೋಟಿ ಆಸ್ತಿ ಘೋಷಣೆ, ಮಂಡಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಕಂಗನಾ ರಣಾವತ್
ಕಂಗನಾ ರಣಾವತ್
Follow us
ರಶ್ಮಿ ಕಲ್ಲಕಟ್ಟ
|

Updated on:May 15, 2024 | 1:46 PM

ಮಂಡಿ ಮೇ 15: ಮಂಡಿ ಲೋಕಸಭಾ ಕ್ಷೇತ್ರದಲ್ಲಿ (Mandi Lok Sabha Seat) ಬಿಜೆಪಿ (BJP) ಅಭ್ಯರ್ಥಿಯಾಗಿರುವ ನಟಿ, ರಾಜಕಾರಣಿ, ಕಂಗನಾ ರಣಾವತ್ (Kangana Ranaut) ಅವರು ಮಂಗಳವಾರ ಮಂಡಿಯಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ  ಜೈ ರಾಮ್ ಠಾಕೂರ್ ಮತ್ತು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಬಿಂದಾಲ್ ಅವರೊಂದಿಗೆ ಇದ್ದರು. ತನ್ನ ಮೊದಲ ಚುನಾವಣಾ ಕದನದಲ್ಲಿ ರಣಾವತ್ ಅವರು ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಕಂಗನಾ ರಣಾವತ್, ‘ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈ ಅವಕಾಶ ಸಿಕ್ಕಿರುವುದಕ್ಕೆ ಮಂಡಿಯ ಮಗಳಾಗಿ ನನಗೆ ಹೆಮ್ಮೆ ಎನಿಸುತ್ತದೆ. ಇಲ್ಲಿನ ಜನರಲ್ಲಿರುವ ಉತ್ಸಾಹ ಮತ್ತು ಸಂಭ್ರಮದ ವಾತಾವರಣಕ್ಕೆ ಸಾಕ್ಷಿಯಾಗಿರುವುದು ನಿಜಕ್ಕೂ ಮನಮುಟ್ಟುವಂತಿದೆ. ಬಾಲಿವುಡ್‌ನಲ್ಲಿ ಯಶಸ್ಸನ್ನು ಕಂಡಿರುವ ನನಗೆ ರಾಜಕೀಯದಲ್ಲಿಯೂ ಯಶಸ್ಸು ಸಿಗುತ್ತದೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.

ಐಷಾರಾಮಿ ಕಾರು, 91 ಕೋಟಿ ರೂಪಾಯಿ ಮೌಲ್ಯದ ಆಸ್ತಿ

ಅವರ ಅಫಿಡವಿಟ್ ಪ್ರಕಾರ, ಕಂಗನಾ ಅವರ ಹೆಸರಿನಲ್ಲಿ ಸುಮಾರು 91 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ, ಇದರಲ್ಲಿ ಸುಮಾರು 29 ಕೋಟಿ ರೂಪಾಯಿಗಳ ಚರ ಆಸ್ತಿಗಳು ಮತ್ತು ಅಂದಾಜು 63 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳು ಸೇರಿವೆ. ನಟಿ ಕಂಗನಾ ತನ್ನ ಅಫಿಡವಿಟ್‌ನಲ್ಲಿ ತನ್ನ ಕೈಯಲ್ಲಿ ಕೇವಲ 2 ಲಕ್ಷ ರೂ ಇದೆ ಎಂದಿದ್ದಾರೆ. ದಾಖಲೆಯ ಪ್ರಕಾರ, ಅವರು 2022-23 ರ ಆರ್ಥಿಕ ವರ್ಷದಲ್ಲಿ 4,12,95,770 ರೂಪಾಯಿಗಳನ್ನು ಆದಾಯ ತೆರಿಗೆಯಾಗಿ ಪಾವತಿಸಿದ್ದಾರೆ, ಇದು ಅವರು 2018-19 ರಲ್ಲಿ ಪಾವತಿಸಿದ್ದಕ್ಕಿಂತ ಸುಮಾರು ಮೂರನೇ ಒಂದು ಭಾಗವಾಗಿದೆ. ಇವರ ಬಳಿ ಬಿಎಂಡಬ್ಲ್ಯು 7 ಸಿರೀಸ್, ಮರ್ಸಿಡಿಸ್ ಜಿಎಲ್‌ಇ 250 ಡಿ ಮತ್ತು ಮರ್ಸಿಡಿಸ್ ಮೇಬ್ಯಾಕ್ ಜಿಎಲ್‌ಎಸ್ ಸೇರಿದಂತೆ ಮೂರು ಐಷಾರಾಮಿ ಕಾರುಗಳಿವೆ.

ನಾಮಪತ್ರ ಸಲ್ಲಿಸಿದ ಕಂಗನಾ

ಏತನ್ಮಧ್ಯೆ, ಪಕ್ಷಕ್ಕಾಗಿ ಪ್ರಚಾರ ಮಾಡುವ ಮೊದಲು ನೆರೆದಿದ್ದ ಜನರಿಗೆ ಧನ್ಯವಾದ ಅರ್ಪಿಸಿದ ಠಾಕೂರ್, “ದೇಶದ ಜನರು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ಈಗಾಗಲೇ ನಿರ್ಧರಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಮೋದಿ ದೇಶಕ್ಕೆ ನೀಡಿದ ನಾಯಕತ್ವವನ್ನು ದೇಶ ಒಪ್ಪಿಕೊಂಡಿದೆ, ಆದ್ದರಿಂದ ಜನರು ಅವರೊಂದಿಗೆ ನಿಲ್ಲುತ್ತಾರೆ. “ಕಂಗನಾ ರಣಾವತ್, ತಮ್ಮ ಹೋರಾಟ ಮತ್ತು ಕಠಿಣ ಪರಿಶ್ರಮದಿಂದ ಚಿತ್ರರಂಗದಲ್ಲಿ ಯಶಸ್ಸನ್ನು ಸಾಧಿಸಿದ್ದಾರೆ. ಈಗ ಅವರು ಮಂಡಿ ಮತ್ತು ಹಿಮಾಚಲದ ಜನರಿಗೆ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಲು ರಾಜಕೀಯಕ್ಕೆ ಸೇರಿದ್ದಾರೆ” ಎಂದು ಹೇಳಿದ್ದಾರೆ.

“ಚುನಾವಣೆ ನಂತರ ಕಂಗನಾ ಇಲ್ಲಿಂದ ಹೋಗುತ್ತಾರೆ ಎಂದು ಹೇಳುವವರಿಗೆ ನಾನು ಹೇಳುವುದೇನೆಂದರೆ ಅವರು ಜನರ ಸೇವೆ ಮಾಡಲು ಮತ್ತು ಅಭಿವೃದ್ಧಿ ಕೆಲಸಗಳನ್ನು ಮಾಡಲು ಇಲ್ಲೇ ಇರುತ್ತಾರೆ. ಅವರು ಭಾರೀ ಅಂತರದಿಂದ ಗೆಲ್ಲುವ ಭರವಸೆ ಇದೆ ಎಂದಿದ್ದಾರೆ.

ಧರ್ಮಶಾಲಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ

ಧರ್ಮಶಾಲಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಧರ್ಮಶಾಲಾ ಮಾಜಿ ಶಾಸಕ ಸುಧೀರ್ ಶರ್ಮಾ ಅವರು  ಮಂಗಳವಾರ ನಾಮಪತ್ರ ಸಲ್ಲಿಸಿದರು. ಕೇಂದ್ರ ಸಚಿವ ಮತ್ತು ಬಿಜೆಪಿಯ ಹಮೀರ್‌ಪುರ ಲೋಕಸಭಾ ಅಭ್ಯರ್ಥಿ ಅನುರಾಗ್ ಠಾಕೂರ್ ಅವರೊಂದಿಗೆ ಇದ್ದರು. ನಾಮಪತ್ರ ಸಲ್ಲಿಸಿದ ನಂತರ ಶರ್ಮಾ ಅವರು, ಧರ್ಮಶಾಲಾ ಕ್ಷೇತ್ರದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ. ನಾನು ಧರ್ಮಶಾಲಾ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಅವಿರತವಾಗಿ ಹೋರಾಡಿದ್ದೇನೆ, ಇದು ಉಪಚುನಾವಣೆಯ ಪ್ರಸ್ತುತ ಪರಿಸ್ಥಿತಿಗೆ ಕಾರಣವಾಗಿದೆ ಎಂದಿದ್ದಾರೆ.

ಶರ್ಮಾ ಗೆಲುವಿನೊಂದಿಗೆ ನಾವು ಎಲ್ಲಾ ನಾಲ್ಕು ಲೋಕಸಭಾ ಸ್ಥಾನಗಳು ಮತ್ತು ಆರು ಉಪಚುನಾವಣೆಗಳನ್ನು ಗೆಲ್ಲುತ್ತೇವೆ ಎಂಬ ಭರವಸೆ ನನಗಿದೆ. ಧರ್ಮಶಾಲಾದಿಂದ ಸುಧೀರ್ ಶರ್ಮಾ ದಾಖಲೆಯ ಮುನ್ನಡೆಯೊಂದಿಗೆ ಗೆಲ್ಲುವುದು ಖಚಿತ. ನಮ್ಮ ಕಾರ್ಯಕರ್ತರು ಅವರ ಗೆಲುವನ್ನು ಭದ್ರಪಡಿಸುತ್ತಾರೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ಕಾಂಗ್ರೆಸ್‌ನ ಧರ್ಮಶಾಲಾ ಅಭ್ಯರ್ಥಿ ದೇವಿಂದರ್ ಸಿಂಗ್ ಜಗ್ಗಿ ಕೂಡ  ಮಂಗಳವಾರ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು. ಜಗ್ಗಿ ಅವರೊಂದಿಗೆ ಹಿಮಾಚಲ ಸಿಎಂ ಸುಖವಿಂದರ್ ಸಿಂಗ್ ಸುಖು ಮತ್ತು ಕಾಂಗ್ರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಶರ್ಮಾ ಇದ್ದರು. “ಕಳೆದ 35 ವರ್ಷಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ ಮತ್ತು ಪ್ರಾಮಾಣಿಕತೆಗೆ ಹೆಸರುವಾಸಿಯಾದ ಧರ್ಮಶಾಲಾದಿಂದ ನಾವು ಅಂತಹ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ” ಎಂದು ಸುಖು ಹೇಳಿದರು.

ಸುಧೀರ್ ಶರ್ಮಾ ಅವರನ್ನು ಗೇಲಿ ಮಾಡಿದ ಸುಖು, “ನಾವು ಮಾರಾಟವಾದ ಶಾಸಕರ ನಾಯಕನ ವಿರುದ್ಧ ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಅವರು ತನ್ನನ್ನು ತಾನು ಮಾರಿಕೊಂಡು ಬಿಜೆಪಿ ಸೇರಿದರು. ಅವರು ಜನರ ಸೇವೆ ಮಾಡಲು ಬಂದಿಲ್ಲ, ಅವರಿಗೆ ಧರ್ಮಶಾಲಾ ಜನರು ತಕ್ಕ ಪಾಠ ಕಲಿಸಬೇಕು. ನಮ್ಮ ಬಳಿ ಹಣವಿಲ್ಲ ಮತ್ತು ನಾವು ಜನಾದೇಶಕ್ಕೆ ಕಾಯುತ್ತಿದ್ದೇವೆ ಎಂದಿದ್ದಾರೆ.

ಮಂಗಳವಾರ ನಾಮಪತ್ರ ಸಲ್ಲಿಸುವ ಕೊನೆಯ ದಿನ, ಹಮೀರ್‌ಪುರ ಸಂಸದೀಯ ಕ್ಷೇತ್ರದಿಂದ ಮೂವರು ಅಭ್ಯರ್ಥಿಗಳು, ಮಂಡಿ ಲೋಕಸಭಾ ಕ್ಷೇತ್ರದಿಂದ ಏಳು, ಕಂಗ್ರಾದಿಂದ ಆರು ಮತ್ತು ಶಿಮ್ಲಾ ಲೋಕಸಭಾ ಕ್ಷೇತ್ರದಿಂದ ಒಬ್ಬರು ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯ ಚುನಾವಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೇ ಉಪಚುನಾವಣೆ ನಡೆಯಲಿರುವ ವಿಧಾನಸಭಾ ಕ್ಷೇತ್ರಗಳಿಗೆ 10 ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ವಿವಾದಕ್ಕೆ ತೆರೆ ಎಳೆದ ಪ್ರಧಾನಿ ಮೋದಿ

ಅಂತಿಮ ದಿನ 33 ನಾಮಪತ್ರಗಳು

ಹಿಮಾಚಲದಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ 33 ಅಭ್ಯರ್ಥಿಗಳು ಮತ್ತು ಲೋಕಸಭೆ ಚುನಾವಣೆಗೆ 51 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈ ಮೂಲಕ 84ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಮೇ 15ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Wed, 15 May 24

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ