ಧಾರವಾಡ ಲೋಕಸಭಾ ಚುನಾವಣೆ 2024 ಫಲಿತಾಂಶ: ಪ್ರಲ್ಹಾದ್ ಜೋಶಿ ಗೆಲುವು

Dharwad Lok Sabha Election Results 2024 Live Counting Updates: ಲೋಕಸಭಾ ಚುನಾವಣೆ-2024 ಫಲಿತಾಂಶ ಪ್ರಕಟವಾಗಿದೆ. ಬಿಜೆಪಿಯ ಪ್ರಹ್ಲಾದ್​ ಜೋಶಿ ಅವರಿಗೆ ಇದು ಐದನೇ ಚುನಾವಣೆಯಾಗಿದ್ದು, ಇವರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್​ನ ವಿನೋದ ಅಸೂಟಿ ಅವರಿಗೆ ಮೊದಲ ಚುನಾವಣೆಯಾಗಿದೆ. ಇಬ್ಬರ ಮಧ್ಯೆ ಪ್ರಭಲ ಪೈಪೋಟಿ ಏರ್ಪಟ್ಟಿದೆ. ಯಾರು ಗೆಲ್ಲುತ್ತಾರೆ ಕೆಲವೇ ಕ್ಷಣದಲ್ಲಿ ತಿಳಿಯಲಿದೆ. ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ...

ಧಾರವಾಡ ಲೋಕಸಭಾ ಚುನಾವಣೆ 2024 ಫಲಿತಾಂಶ: ಪ್ರಲ್ಹಾದ್ ಜೋಶಿ ಗೆಲುವು
ಪ್ರಲ್ಹಾದ್ ಜೋಶಿ
Follow us
ವಿವೇಕ ಬಿರಾದಾರ
|

Updated on:Jun 04, 2024 | 2:03 PM

ಧಾರವಾಡ, ಜೂನ್​ 04: ಧಾರವಾಡ ಲೋಕಸಭಾ ಕ್ಷೇತ್ರ (Dharwad Lok Sabha Constituency) ಉತ್ತರ ಕರ್ನಾಟಕದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. 1996ರಿಂದ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಇಂತಹ ಕ್ಷೇತ್ರದಲ್ಲಿ 2004 ರಿಂದ ಇಲ್ಲಿಯವರೆಗೂ ಬಿಜೆಪಿ ಪ್ರಲ್ಹಾದ್ ಜೋಶಿ ಅವರನ್ನ ಕಣಕ್ಕಿಳಿಸಿದೆ. ಈ ಹಿಂದಿನ ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಪ್ರಲ್ಹಾದ್ ಜೋಶಿಯವರು ಐದನೇ  ಬಾರಿಗೆ ಗೆಲ್ಲುವು ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದೆ. ಕೇಂದ್ರದಲ್ಲಿ ಪ್ರಭಾವಿ ಸಚಿವರಾಗಿದ್ದ ಪ್ರಲ್ಹಾದ್ ಜೋಶಿ ಅವರ ವಿರುದ್ಧ ಯುವ ರಾಜಕಾರಣಿ ಕಾಂಗ್ರೆಸ್​ನ ವಿನೋದ ಅಸೂಟಿ ಸ್ಪರ್ಧಿಸಿ ಸೋಲುಂಡಿದ್ದಾರೆ.

ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ನಿರ್ಮಾಣವಾಗಿದೆ. ಪ್ರಲ್ಹಾದ್ ಜೋಶಿ ಗೆದ್ದರೆ ಅದು ಈ ಕ್ಷೇತ್ರದಲ್ಲಿ ದಾಖಲೆಯ ಗೆಲುವು ಆಗಲಿದೆ. ಇನ್ನು ವಿನೋದ್​ ಅಸೂಟಿ ಅವರು ಗೆದ್ದರೆ ಕಾಂಗ್ರೆಸ್​ ತನ್ನ ಕ್ಷೇತ್ರವನ್ನು ಮರಳಿ ಪಡೆದಂತಾಗುತ್ತದೆ. ಹಾಗಿದ್ದರೆ ಇಬ್ಬರ ನಡುವಿನ ಹಣಾಹಣಿ ಹೇಗಿದೆ ಇಲ್ಲಿದೆ ವಿವರ…

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ : 18,31,976

ಚಲಾವಣೆಯಾದ ಮತಗಳು: 13,62,421

ಈ ಹಿಂದಿನ ಚುನಾವಣೆಗಳ ಫಲಿತಾಂಶ

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್​ ಜೋಶಿಯವರು 6,84,837 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್​ನ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು 4,79,765 ಮತಗಳನ್ನು ಪಡೆದಿದ್ದರು. ಪ್ರಹ್ಲಾದ್​ ಜೋಶಿಯವರು ವಿನಯ್ ಕುಲಕರ್ಣಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

ಇದಕ್ಕೂ ಮುನ್ನ 2014ರ ಲೋಕಸಭಾ ಚುನಾವಣೆಯಲ್ಲೂ ಸಂಸದ ಪ್ರಹ್ಲಾದ್​ ಜೋಶಿಯವರೇ ಗೆಲವು ಸಾಧಿಸಿದ್ದರು. ಈ ಚುನಾವಣೆಯಲ್ಲೂ ಪ್ರಹ್ಲಾದ್​ ಜೋಶಿಯವರ ವಿರುದ್ಧ ವಿನಯ ಕುಲಕರ್ಣಿಯವರು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಪ್ರಹ್ಲಾದ್​ ಜೋಶಿಯವರು 5,43,395 ಮತಗಳನ್ನು ಪಡೆದಿದ್ದರು. ಇನ್ನು ವಿನಯ್​ ಕುಲಕರ್ಣಿಯವರು 4,31,738 ಮತಗಳನ್ನು ಪಡೆದಿದ್ದರು.

ಇನ್ನು ಧಾರವಾಡ ಲೋಕಸಭಾ ಕ್ಷೇತ್ರ 1996ರ ಲೋಕಸಭಾ ಚುನಾವಣೆವರೆಗೂ ಕಾಂಗ್ರೆಸ್​ನ ಭದ್ರಕೋಟೆಯಾಗಿತ್ತು. 1996ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್​ ಕೋಟೆ ಮೇಲೆ ಮೊದಲ ಬಾರಿಗೆ ತನ್ನ ಬಾವುಟ ಹಾರಿಸಿತು. ಅಲ್ಲಿಂದ ಇಲ್ಲಿಯವರೆಗೂ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದೆ. ಬಿಜೆಪಿಯ ಭದ್ರಕೋಟೆಯಾಗಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:25 am, Tue, 4 June 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್