Dharwad Constituency Result 2024: ಧಾರವಾಡ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ

Dharwad Lok Sabha Election Result: ಲೋಕಸಭಾ ಚುನಾವಣೆ-2024 ಫಲಿತಾಂಶ ಪ್ರಕಟವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಪ್ರಲ್ಹಾದ್ ಜೋಶಿ ಅವರೇ ವಿಜಯಶಾಲಿಯಾಗಿದ್ದಾರೆ. ಈ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ ಐದನೇ ಬಾರಿಗೆ ಗೆದ್ದ ಮೊದಲ ನಾಯಕರಾಗಿದ್ದಾರೆ. ಪ್ರಲ್ಹಾದ್​ ಜೋಶಿ ಐದನೇ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ.

Dharwad Constituency Result 2024: ಧಾರವಾಡ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ
ಸಂಸದ ಪ್ರಲ್ಹಾದ್​ ಜೋಶಿ
Follow us
ವಿವೇಕ ಬಿರಾದಾರ
|

Updated on:Jun 04, 2024 | 2:34 PM

ಧಾರವಾಡ, ಜೂನ್​ 04: ಧಾರವಾಡ ಲೋಕಸಭಾ ಕ್ಷೇತ್ರ (Dharwad Lok Sabha Constituency) ಈ ಬಾರಿಯೂ ಬಿಜೆಪಿಯ ತೆಕ್ಕೆಗೆ ಬಿದ್ದಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್ ಜೋಶಿ (Pralhad Joshi) ಇತಿಹಾಸ ಸೃಷ್ಟಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಲ್ಹಾದ್ ಜೋಶಿ ಐದನೇ ಬಾರಿಗೆ ಕಣಕ್ಕೆ ಇಳಿದಿದ್ದರು. ಇನ್ನು ಕಾಂಗ್ರೆಸ್​ ಹೊಸ ಮುಖಕ್ಕೆ ಮಣೆ ಹಾಕಿದ್ದು ವಿನೋದ ಅಸೂಟಿ (Vinod Sooti) ಅವರನ್ನು ಕಣಕ್ಕಿಳಿತ್ತು. ಸಂಸದ ಪ್ರಲ್ಹಾದ್ ಜೋಶಿಯವರು ವಿನೋದ್​ ಅಸೂಟಿ ಅವರನ್ನು ಸೋಲಿಸಿದ್ದಾರೆ.

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್​ ಜೋಶಿಯವರು 6,84,837 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್​ನ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು 4,79,765 ಮತಗಳನ್ನು ಪಡೆದಿದ್ದರು. ಪ್ರಹ್ಲಾದ್​ ಜೋಶಿಯವರು ವಿನಯ್ ಕುಲಕರ್ಣಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

ಇದಕ್ಕೂ ಮುನ್ನ 2014ರ ಲೋಕಸಭಾ ಚುನಾವಣೆಯಲ್ಲೂ ಸಂಸದ ಪ್ರಹ್ಲಾದ್​ ಜೋಶಿಯವರೇ ಗೆಲವು ಸಾಧಿಸಿದ್ದರು. ಈ ಚುನಾವಣೆಯಲ್ಲೂ ಪ್ರಹ್ಲಾದ್​ ಜೋಶಿಯವರ ವಿರುದ್ಧ ವಿನಯ ಕುಲಕರ್ಣಿಯವರು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಪ್ರಹ್ಲಾದ್​ ಜೋಶಿಯವರು 5,43,395 ಮತಗಳನ್ನು ಪಡೆದಿದ್ದರು. ಇನ್ನು ವಿನಯ್​ ಕುಲಕರ್ಣಿಯವರು 4,31,738 ಮತಗಳನ್ನು ಪಡೆದಿದ್ದರು.

ಇನ್ನು ಧಾರವಾಡ ಲೋಕಸಭಾ ಕ್ಷೇತ್ರ 1996ರ ಲೋಕಸಭಾ ಚುನಾವಣೆವರೆಗೂ ಕಾಂಗ್ರೆಸ್​ನ ಭದ್ರಕೋಟೆಯಾಗಿತ್ತು. 1996ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್​ ಕೋಟೆ ಮೇಲೆ ಮೊದಲ ಬಾರಿಗೆ ತನ್ನ ಬಾವುಟ ಹಾರಿಸಿತು. ಅಲ್ಲಿಂದ ಇಲ್ಲಿಯವರೆಗೂ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದೆ. ಬಿಜೆಪಿಯ ಭದ್ರಕೋಟೆಯಾಗಿದೆ.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:04 pm, Tue, 4 June 24